ಕೊವಿಡ್ ಅಕ್ರಮ: ಎಫ್​ಐಆರ್​ ದಾಖಲು, ಹಲವು ರಾಜಕಾರಣಿಗಳಿಗೆ ಶುರುವಾಯ್ತು ಸಂಕಷ್ಟ!

ಕರ್ನಾಟಕದಲ್ಲಿ ಕೊವಿಡ್​ನಲ್ಲಿಅಕ್ರಮ ಆರೋಪ ಪ್ರಕರಣ ಮತ್ತೊಂದು ಹಂತಕ್ಕೆ ಹೋಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೊವಿಡ್ ಹಗರಣ ಸಂಬಂಧ ಇದೀಗ ಎಫ್​ಐಆರ್ ದಾಖಲಾಗಿದೆ. ಹೀಗಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಅಂದಿನ ಆರೋಗ್ಯ ಸಚಿವರಿಗೆ ಢವಢವ ಶುರುವಾಗಿದೆ. ಇನ್ನು ಈ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಲಿದೆ.

ಕೊವಿಡ್ ಅಕ್ರಮ: ಎಫ್​ಐಆರ್​ ದಾಖಲು, ಹಲವು ರಾಜಕಾರಣಿಗಳಿಗೆ ಶುರುವಾಯ್ತು ಸಂಕಷ್ಟ!
Follow us
ರಾಚಪ್ಪಾಜಿ ನಾಯ್ಕ್
| Updated By: ರಮೇಶ್ ಬಿ. ಜವಳಗೇರಾ

Updated on:Dec 13, 2024 | 11:16 PM

ಬೆಂಗಳೂರು, (ಡಿಸೆಂಬರ್ 13): ಈ ಹಿಂದಿನ ಬಿಜೆಪಿ ಸರ್ಕಾರವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಎಫ್​ಐಆರ್ ದಾಖಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಮುಖ್ಯ ಲೆಕ್ಕಾಧಿಕಾರಿ ಡಾ.ಎಂ.ವಿಷ್ಣುಪ್ರಸಾದ್ ಅವರ ದೂರು ಆಧರಿಸಿ ಬೆಂಗಳೂರಿನ ವಿಧಾನಸೌಧ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.  ಐವರು ವೈದ್ಯರು, ಲ್ಯಾಗ್​ ಎಕ್ಸ್​ಪರ್ಟ್​​ ಕಂಪನಿ‌ ಹಾಗೂ ಜನಪ್ರತಿನಿಧಿಗಳ‌ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಪ್ರಕರಣದ ತನಿಖೆಗೆ SIT ರಚನೆ ಮಾಡುವ ಸಾಧ್ಯತೆ ಇದೆ.  ಹೀಗಾಗಿ ಈ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಲಿದೆ.

ಪಿಪಿಇ ಕಿಟ್, N-95 ಮಾಸ್ಕ್​ ಖರದಿಯಲ್ಲಿ ಅವ್ಯವಹಾರವಾಗಿರುವುದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಹಾಗೂ ನಿಯಮ ಬಾಹಿರವಾಗಿ ಹೆಚ್ಚುವರಿ ಕಿಟ್ ಖರೀದಿಗೆ ಆದೇಶ, ಕೋಟ್ಯಂತರ ಹಣ ಸಂದಾಯದ ಬಳಿಕವೂ ಕಿಟ್​ ನೀಡಿಲ್ಲ. ಹಾಗೇ ಷಡ್ಯಂತ್ರ ರೂಪಿಸಿ ಜನರ ಹಣ ದುರ್ಬಳಕೆ ಆರೋಪದಡಿ FIR ದಾಖಲಾಗಿದೆ.

ಒಟ್ಟು 167 ಕೋಟಿಗೂ ಅಧಿಕ ಹಣ ಅಕ್ರಮ ಆರೋಪ ಕೇಳಿಬಂದಿದ್ದು, ಡಾ.ಗಿರೀಶ್, ಜಿ.ಪಿ.ರಘು, ​.ಮುನಿರಾಜ್, ಲಾಜ್ ಎಕ್ಸ್​ಪೋರ್ಟ್, ಪ್ರೂಡೆಂಟ್‌ ಮ್ಯಾನೆಜ್‌ಮೆಂಟ್‌ ಸಲೂಷನ್ಸ್ ಕಂಪನಿ ಸೇರಿದಂತೆ ಕೆಲ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಇನ್ನು ಈ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್​ಐಟಿ ರಚನೆ ಮಾಡುವ ಸಾಧ್ಯತೆಗಳಿವೆ. ಹೀಗಾಗಿ ಅಂದಿನ ಸಚಿವರು ಹಾಗು ಕೆಲ ಜನಪ್ರತಿನಿಧಿಗಳ ಎದೆಯಲ್ಲಿ ಢವಢವ ಶುರುವಾಗಿದೆ.

Published On - 11:14 pm, Fri, 13 December 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ