ಕೋವಿಡ್​ ಹಗರಣ: ಕ್ಯಾಬಿನೆಟ್‌ ಸಬ್ ಕಮಿಟಿ ಜೊತೆ ಎಸ್‌ಐಟಿ ರಚನೆಗೆ ಸಂಪುಟ ಸಭೆ ತೀರ್ಮಾನ

ವಿಧಾನಸೌಧದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ಮಾಡಲಾಗಿದ್ದು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊವಿಡ್​ ಹಗರಣ ಆರೋಪ ವಿಚಾರವಾಗಿ ಕ್ಯಾಬಿನೆಟ್‌ ಸಬ್ ಕಮಿಟಿ ಜೊತೆ ಎಸ್‌ಐಟಿ ರಚನೆಗೆ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಎಚ್​ಕೆ ಪಾಟೀಲ್ ತಿಳಿಸಿದ್ದಾರೆ.

ಕೋವಿಡ್​ ಹಗರಣ: ಕ್ಯಾಬಿನೆಟ್‌ ಸಬ್ ಕಮಿಟಿ ಜೊತೆ ಎಸ್‌ಐಟಿ ರಚನೆಗೆ ಸಂಪುಟ ಸಭೆ ತೀರ್ಮಾನ
ಕೋವಿಡ್​ ಹಗರಣ: ಕ್ಯಾಬಿನೆಟ್‌ ಸಬ್ ಕಮಿಟಿ ಜೊತೆ ಎಸ್‌ಐಟಿ ರಚನೆಗೆ ಸಂಪುಟ ಸಭೆ ತೀರ್ಮಾನ
Edited By:

Updated on: Oct 10, 2024 | 3:17 PM

ಬೆಂಗಳೂರು, ಅಕ್ಟೋಬರ್​ 10: ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಸಂಪುಟ ಸಭೆ ಮಾಡಲಾಗಿದೆ. ಸಭೆಯಲ್ಲಿ ಹಲವು ವಿಷಯಗಳನ್ನು ಚರ್ಚೆ ಮಾಡಲಾಗಿದೆ. ಪ್ರಮುಖವಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್​ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಕ್ಯಾಬಿನೆಟ್‌ ಸಬ್ ಕಮಿಟಿ ಜೊತೆ ಎಸ್‌ಐಟಿ ರಚನೆಗೆ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಸಂಪುಟ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್‌​ಕೆ ಪಾಟೀಲ್​, ಕೋವಿಡ್ ಹಗರಣಕ್ಕೆ ಸಂಬಂಧಿಸಿದಂತೆ ಕುನ್ಹಾ ಆಯೋಗ ಭಾಗಶಃ ವರದಿ ನೀಡಿದೆ. ಅದರ ಮೇಲೆ ಕೆಲವು ನಿರ್ಣಯ ತೆಗೆದುಕೊಂಡಿದ್ದೇವೆ. ಇದರಲ್ಲಿ ಕ್ರಿಮಿನಲ್ ಕಂಟೆಂಟ್ ಇರುವುದರಿಂದ ಎಸ್ಐಟಿ ರಚನೆಗೆ ತೀರ್ಮಾನ ಮಾಡಿದ್ದೇವೆ ಹಾಗೂ ಕ್ಯಾಬಿನೆಟ್ ಸಬ್ ಕಮಿಟಿ ಕೂಡ ರಚನೆ ಮಾಡಲು ತೀರ್ಮಾ‌ನ ಮಾಡಿದ್ದೇವೆ. ರಿಕವರಿ ಪ್ರೊಸೀಡಿಂಗ್ಸ್​ ತಕ್ಷಣ ಪ್ರಾರಂಭ ಮಾಡಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಕೋವಿಡ್ ಹಗರಣ ತನಿಖಾ ವರದಿ ಮಾತ್ರವಲ್ಲ, ಕೆಂಪಣ್ಣ ಆಯೋಗದ ವರದಿ ಬಗ್ಗೆಯೂ ಸಂಪುಟದಲ್ಲಿ ಚರ್ಚಿಸಲಿ: ಕುಮಾರಸ್ವಾಮಿ

11 ಸಂಪುಟಗಳಲ್ಲಿ ವರದಿ ನೀಡಿದೆ. 7,22, 364 ಕೋಟಿ ರೂ. ಮೊತ್ತದ ಅವ್ಯವಹಾರದ ತನಿಖೆ ನಡೆದಿದೆ. 500 ಕೋಟಿ ರೂ. ಮೊತ್ತದ ವಸೂಲಾತಿಗೆ ಆಯೋಗ ಶಿಫಾರಸು ಮಾಡಿದೆ. ಬಿಬಿಎಂಪಿ ನಾಲ್ಕು ವಲಯಗಳ ಹಾಗೂ 31 ಜಿಲ್ಲೆಗಳ ವರದಿ ಸಂಗ್ರಹ ಬಾಕಿ ಇದೆ. 55 ಸಾವಿರ ಕಡತಗಳನ್ನು ಸಂಬಂಧಪಟ್ಟ ಇಲಾಖೆಯಿಂದ ಪಡೆದು ಪರಿಶೀಲಿಸಿ ವರದಿ ನೀಡಲಾಗಿದೆ ಎಂದು ಹೇಳಿದ್ದಾರೆ.

ಹಗರಣದಲ್ಲಿ ಭಾಗಿಯಾದ ಕಂಪನಿಗಳು, ಸಂಸ್ಥೆಗಳನ್ನು ಬ್ಲ್ಯಾಕ್ ಲಿಸ್ಟ್​ಗೆ ಸೇರಿಸಲು ನಿರ್ಧಾರ ಮಾಡಲಾಗಿದೆ. ಎಲ್ಲೆಲ್ಲಿ ಕ್ರಿಮಿನಲ್ ಎಲಿಮೆಂಟ್ ಇದೆ ಎಸ್ಐಟಿ ಅದರ ಬಗ್ಗೆ ಗಮನ ಹರಿಸುತ್ತದೆ. ಯಾರ ಪಾತ್ರ ಏನೂ ಎಂಬುದು ಎಸ್ಐಟಿ ತನಿಖೆಯಲ್ಲಿ ಗೊತ್ತಾಗುತ್ತದೆ. ಪೂರ್ಣ ವರದಿ ಬಂದ ಮೇಲೆ ಏನು ಅವ್ಯವಹಾರ, ಯಾರು ಪಾಲುದಾರರು ಗೊತ್ತಾಗುತ್ತದೆ ಎಂದಿದ್ದಾರೆ.

ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಈ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ಕೊವಿಡ್ ಹಗರಣದ ಕುರಿತು ಸಬ್​ ಕಮಿಟ್ ಮಾಡಬೇಕು ಅಂತ ಚರ್ಚೆಯಾಗಿದೆ. 7200 ಕೋಟಿ ರೂ. ಹಗರಣ ಖರ್ಚಾಗಿದೆ. ಅದರಲ್ಲಿ ಯಾರದ್ದು ಎಷ್ಟು ಪಾಲಿದೆ ಅನ್ನೋದು ಚೆಲುವಾದಿ ನಾರಾಯಣಸ್ವಾಮಿ, ಅಶೋಕ್ ಹಾಗೂ ವಿಜಯೇಂದ್ರ ಹೇಳಲಿ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us