AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸರ್ಕಾರದ ಕೊರೊನಾ ಹಗರಣ: ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್​ಗೆ ಶಿಫಾರಸು

ನ್ಯಾಯಮೂರ್ತಿ ಜಾನ್ ಮೂಕಲ್ ಡಿ. ಮೈಕಲ್ ಕುನ್ಹಾ ಆಯೋಗವು ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಕೋವಿಡ್ ಹಗರಣದ ತನಿಖಾ ವರದಿಯನ್ನು ಸಲ್ಲಿಸಿದೆ. ಪಿಪಿಇ ಕಿಟ್ ಖರೀದಿಯಲ್ಲಿ ಅಕ್ರಮವಾಗಿ ವ್ಯವಹಾರ ನಡೆದಿರುವುದು ಪತ್ತೆಯಾಗಿದೆ. ಬಿ.ಎಸ್. ಯಡಿಯೂರಪ್ಪ ಮತ್ತು ಬಿ. ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್‌ಗೆ ಆಯೋಗ ಶಿಫಾರಸು ಮಾಡಿದೆ.

ಬಿಜೆಪಿ ಸರ್ಕಾರದ ಕೊರೊನಾ ಹಗರಣ: ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್​ಗೆ ಶಿಫಾರಸು
ಶ್ರೀರಾಮುಲು, ಬಿಎಸ್​ ಯಡಿಯೂರಪ್ಪ
ಪ್ರಸನ್ನ ಗಾಂವ್ಕರ್​
| Edited By: |

Updated on: Nov 09, 2024 | 11:22 AM

Share

ಬೆಂಗಳೂರು, ನವೆಂಬರ್​ 09: ಬಿಜೆಪಿ ಸರ್ಕಾರದ (BJP Government) ಅವಧಿಯಲ್ಲಿ ನಡೆದಿದ್ದ ಕೊರೊನಾ (Covid) ಹಗರಣಕ್ಕೆ ಸಂಬಂಧಿಸಿದಂತೆ ಪಿಪಿಇ ಕಿಟ್​ ಹಾಗೂ ಇತರೆ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ನಡೆದಿರುವುದು ದೃಢಪಟ್ಟಿದೆ ಎಂದು ನ್ಯಾಯಮೂರ್ತಿ ಜಾನ್​ ಮೂಕಲ್​ ಡಿ.ಮೈಕಲ್​ ಕುನ್ಹಾ ಆಯೋಗ ಹೇಳಿದೆ. ಈ ಸಂಬಂಧ ಅಂದಿನ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಬಿ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್​ಗೆ ಆಯೋಗ ಶಿಫಾರಸು ಮಾಡಿದೆ.

ಅಂದಿನ ಸರ್ಕಾರ ಚೀನಾ ಕಂಪನಿಗಳಿಂದ ಪಿಪಿಇ ಕಿಟ್ ಖರೀದಿ ಮಾಡಿತ್ತು. ಪಿಪಿಇ ಕಿಟ್ ಖರೀದಿ ವೇಳೆ ದರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದಿದೆ. ದರ ವ್ಯತ್ಯಾಸದಿಂದ ಪಿಪಿಇ ಕಿಟ್ ಪೂರೈಕೆದಾರರಿಗೆ 14.21 ಕೋಟಿ ರೂ. ಲಾಭವಾಗಿದೆ. ಪೂರೈಕೆದಾರರಿಗೆ ಲಾಭ ಮಾಡಿಕೊಡುವ ದುರುದ್ದೇಶದಿಂದ ಅಕ್ರಮ ಎಸಗಲಾಗಿದೆ ಎಂದು ವರದಿಯಲ್ಲಿದೆ.

ಇದನ್ನೂ ಓದಿ: ಮುಡಾಸ್ತ್ರಕ್ಕೆ ಕಾಂಗ್ರೆಸ್ ಕೊರೊನಾಸ್ತ್ರ: ಕ್ರಿಮಿನಲ್ ಕೇಸ್​ ದಾಖಲಿಸುವಂತೆ ಶಿಫಾರಸು, ಬಿಜೆಪಿಗರಲ್ಲಿ ಢವಢವ

ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿ ಜಾನ್​ ಮೈಕಲ್​​​ ಡಿ.ಕುನ್ಹಾ ನೇತೃತ್ವದಲ್ಲಿ ಆಗಸ್ಟ್ 25, 2023ರಲ್ಲಿ‌ ರಚನೆಯಾಗಿದ್ದ ತನಿಖಾ ಆಯೋಗ ಈಗಾಗಲೇ ಮಧ್ಯಂತರ ವರದಿ ಸಲ್ಲಿಸಿದೆ. ಒಟ್ಟು 769 ಕೋಟಿ ರೂ. ಅವ್ಯವಹಾರ ನಡೆದಿರುವುದು ಪತ್ತೆ ಮಾಡಿದೆ.

ಚೀನಾದ ಸಂಸ್ಥೆಗಳಿಂದ 3 ಲಕ್ಷ ಪಿಪಿಇ ಕಿಟ್​ಗಳನ್ನು ನೇರವಾಗಿ ಖರೀದಿಸುವ ಕುರಿತು ಅಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆದೇಶಿಸಿದ್ದರು. ಎರಡು ಚೀನಾ ಸಂಸ್ಥೆಗಳಿಂದ ಪಿಪಿಇ ಕೆಟ್​ಗಳನ್ನು ದುಬಾರಿ ದರದಲ್ಲಿ ಕೊಂಡುಕೊಳ್ಳಲಾಗಿದೆ ಎಂದು ಬಯಲಾಗಿದೆ. ಹೀಗಾಗಿ, ಬಿಎಸ್​ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವರಾಗಿದ್ದ ಬಿ ಶ್ರೀರಾಮುಲು ವಿರುದ್ಧ ಕಾನೂನು ಕ್ರಮ ಜರುಗಿಸಲು ಆಯೋಗ ಶಿಫಾರಸು ಮಾಡಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ