AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ 5 ಜಿಲ್ಲೆಗಳಲ್ಲಿಂದು ಕೊವಿಡ್ ವ್ಯಾಕ್ಸಿನ್ ಡ್ರೈ ರನ್; ಹೇಗಿರಲಿದೆ ಲಸಿಕೆ ನೀಡುವ ಡ್ರೈ ರನ್ ಪ್ರಕ್ರಿಯೆ?

ರಾಜ್ಯದ 5 ಜಿಲ್ಲೆಗಳಲ್ಲಿಂದು ಕೊವಿಡ್ ವ್ಯಾಕ್ಸಿನ್ ಡ್ರೈ ರನ್ ನಡೆಯಲ್ಲಿದ್ದು, ಮೊದಲಿಗೆ ಬೆಂಗಳೂರು, ಕಲ್ಬುರ್ಗಿ, ಮೈಸೂರು, ಬೆಳಗಾವಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಡ್ರೈ ರನ್ ನಡೆಸಲು ತೀರ್ಮಾನಿಸಲಾಗಿದೆ. ಪ್ರತಿ ಜಿಲ್ಲೆಯ 3 ಕೇಂದ್ರಗಳಲ್ಲಿ ಲಸಿಕೆ ಡ್ರೈ ರನ್ ನಡೆಸಲಾಗುತ್ತದೆ.

ರಾಜ್ಯದ 5 ಜಿಲ್ಲೆಗಳಲ್ಲಿಂದು ಕೊವಿಡ್ ವ್ಯಾಕ್ಸಿನ್ ಡ್ರೈ ರನ್; ಹೇಗಿರಲಿದೆ ಲಸಿಕೆ ನೀಡುವ ಡ್ರೈ ರನ್ ಪ್ರಕ್ರಿಯೆ?
ಸಾಂದರ್ಭಿಕ ಚಿತ್ರ
ಪೃಥ್ವಿಶಂಕರ
|

Updated on:Jan 02, 2021 | 10:44 AM

Share

ರಾಜ್ಯದ 5 ಜಿಲ್ಲೆಗಳಲ್ಲಿಂದು ಕೊವಿಡ್ ವ್ಯಾಕ್ಸಿನ್ ಡ್ರೈ ರನ್ ನಡೆಯಲ್ಲಿದ್ದು, ಮೊದಲಿಗೆ ಬೆಂಗಳೂರು, ಕಲ್ಬುರ್ಗಿ, ಮೈಸೂರು, ಬೆಳಗಾವಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಡ್ರೈ ರನ್ ನಡೆಸಲು ತೀರ್ಮಾನಿಸಲಾಗಿದೆ. ಪ್ರತಿ ಜಿಲ್ಲೆಯ 3 ಕೇಂದ್ರಗಳಲ್ಲಿ ಲಸಿಕೆ ಡ್ರೈ ರನ್ ನಡೆಸಲಾಗುತ್ತದೆ. ಪ್ರತಿ ಆರೋಗ್ಯ ಕೇಂದ್ರದಲ್ಲಿ 5 ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ನಿಯೋಜಿತ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ.

ಹೇಗಿರಲಿದೆ ಲಸಿಕೆ ನೀಡುವ ಪ್ರಕ್ರಿಯೆ? ಆರೋಗ್ಯ ಕೇಂದ್ರದಲ್ಲಿರುವ ಕೊರೊನಾ ವಾರಿಯರ್ಸ್‌ಗಳನ್ನು ಫಲಾನುಭವಿಗಳಾಗಿ ಆಯ್ಕೆ ಮಾಡಲಾಗಿದೆ. ಇಂದು ಮುಂಜಾನೆ ಹತ್ತು ಗಂಟೆಯಿಂದ ಹನ್ನೆರಡು ಗಂಟೆವರಗೆ ಮೂರು ಕೇಂದ್ರಗಳಲ್ಲಿ ಏಕಕಾಲಕ್ಕೆ ಡ್ರೈ ರನ್ ನಡೆಯಲಿದೆ. ಆಯ್ಕೆಯಾದ ಫಲಾನುಭವಿಗಳು ತಮ್ಮ ಹೆಸರು ನೋಂದಣಿ ಮಾಡುವಾಗ ಯಾವ ದಾಖಲಾತಿ ನೀಡಿದ್ದಾರೋ ಆ ದಾಖಲಾತಿಯನ್ನ ವ್ಯಾಕ್ಸಿನ್ ಪಡೆಯಲು ಬರುವಾಗ ತರಲು ಸೂಚಿಸಲಾಗಿದೆ. ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಓಟರ್ ಐಡಿ ತರಲು ಹೇಳಿದ್ದಾರೆ.

ಪ್ರತಿ ಕೇಂದ್ರದಲ್ಲಿ ಐದು ಜನ ಸಿಬ್ಬಂದಿ ನಿಯೋಜಿಸಲಾಗುತ್ತದೆ. ನಿಯೋಜಿತ ಸಿಬ್ಬಂದಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ಆಯ್ಕೆಯಾದ ಫಲಾನುಭವಿ ನಿಗದಿ ಪಡಿಸಿದ ಕೇಂದ್ರಕ್ಕೆ ಬರ್ತಾನೆ. ಬಳಿಕ ಕೇಂದ್ರಕ್ಕೆ ಬಂದ ಫಲಾನುಭವಿಯ ದಾಖಲಾತಿ ಪರಿಶೀಲನೆ ನಡೆಯುತ್ತದೆ. ನಿಜವಾದ ಫಲಾನುಭವಿ ಹೌದೋ ಅಲ್ಲವೋ ಅನ್ನೋದನ್ನು ಕನ್ಪರ್ಮ್ ಮಾಡಿಕೊಳ್ಳಲಾಗುತ್ತದೆ. ಕನ್ಪರ್ಮ್ ಆದ ಮೇಲೆ ವೈಟಿಂಗ್ ರೂಮ್​ನಲ್ಲಿ ಕೂರಿಸಲಾಗುತ್ತದೆ. ವೈಟಿಂಗ್ ರೂಮ್​ನಲ್ಲಿ ಓರ್ವ ಸಿಬ್ಬಂದಿ ಫಲಾನುಭವಿಗೆ ವ್ಯಾಕ್ಸಿನ್ ಬಗ್ಗೆ ಮಾಹಿತಿ ನೀಡುತ್ತಾನೆ.

ವೈಟಿಂಗ್ ರೂಮ್​ನಲ್ಲಿರುವ ಓರ್ವ ಫಲಾನುಭವಿಯನ್ನು ವ್ಯಾಕ್ಸಿನ್ ರೂಮ್​ಗೆ ಕರೆದುಕೊಂಡು ಹೋಗಲಾಗುತ್ತದೆ. ವ್ಯಾಕ್ಸಿನ್ ರೂಮ್​ನಲ್ಲಿರುವ ಸಿಬ್ಬಂದಿ ಫಲಾನುಭವಿಗೆ ವ್ಯಾಕ್ಸಿನ್ ನೀಡ್ತಾನೆ. ವ್ಯಾಕ್ಸಿನ್ ಪಡೆದ ಫಲಾನುಭವಿಯನ್ನು ನಿಗಾ ಕೋಣೆಗೆ ಕರೆದುಕೊಂಡು ಹೋಗಲಾಗುತ್ತದೆ. ವ್ಯಾಕ್ಸಿನ್ ಪಡೆದ ಫಲಾನುಭವಿ ನಿಗಾ ಕೋಣೆಯಲ್ಲಿ ಮೂವತ್ತು ನಿಮಿಷ ಇರಬೇಕಾಗುತ್ತದೆ. ಮೂವತ್ತು ನಿಮಿಷದಲ್ಲಿ ಯಾವುದೇ ಸಮಸ್ಯೆ ಕಂಡು ಬರದೇ ಇದ್ರೆ ಆತನನ್ನು ಮನೆಗೆ ಕಳುಹಿಸಲಾಗುತ್ತದೆ.

Published On - 8:03 am, Sat, 2 January 21

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ