18-44 Vaccination in Karnataka: ಮೇ 22ರಿಂದಲೇ 18 ರಿಂದ 44 ವರ್ಷದವರಿಗೆ ಕೊವಿಡ್ ಲಸಿಕೆ; ಕೊವಿಡ್ ಸೇನಾನಿಗಳಿಗೆ ಮೊದಲ ಆದ್ಯತೆ

Vacccine for 18-44: ಆದ್ಯತೆ ಮೇರೆಗೆ ಕೊವಿಡ್​ ವಾರಿಯರ್ಸ್​​ಗಳಿಗೆ ಮತ್ತು ಆಯ್ದ ಗುಂಪುಗಳಿಗೆ ಮಾತ್ರ ಸದ್ಯ ಲಸಿಕೆ ವಿತರಣೆ ಮಾಡಲು ತೀರ್ಮಾನಿಸಲಾಗಿದೆ. ಈ ಕುರಿತು ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

18-44 Vaccination in Karnataka: ಮೇ 22ರಿಂದಲೇ 18 ರಿಂದ 44 ವರ್ಷದವರಿಗೆ ಕೊವಿಡ್ ಲಸಿಕೆ; ಕೊವಿಡ್ ಸೇನಾನಿಗಳಿಗೆ ಮೊದಲ ಆದ್ಯತೆ
ಕೊವಿಡ್ 19 ಲಸಿಕೆ ಪ್ರಾತಿನಿಧಿಕ ಚಿತ್ರ
Follow us
guruganesh bhat
|

Updated on:May 20, 2021 | 10:28 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ 18 ರಿಂದ 44 ವರ್ಷದೊಳಗಿನವರಿಗೆ ಮೇ 22ರಿಂದ ಕೊರೊನಾ ಲಸಿಕೆ ನೀಡಲು ತೀರ್ಮಾನಿಸಲಾಗಿದೆ. ಈ ವಯೋಮಾನದವರಲ್ಲೂ ಆದ್ಯತೆ ಮೇರೆಗೆ ಕೊವಿಡ್​ ವಾರಿಯರ್ಸ್​​ಗಳಿಗೆ ಮತ್ತು ಆಯ್ದ ಗುಂಪುಗಳಿಗೆ ಮಾತ್ರ ಸದ್ಯ ಲಸಿಕೆ ವಿತರಣೆ ಮಾಡಲು ತೀರ್ಮಾನಿಸಲಾಗಿದೆ. ಈ ಕುರಿತು ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಸದ್ಯ ಕೊವಿಡ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕೆಲವು ಆದ್ಯತಾ ಗುಂಪುಗಳಿಗೆ ಮಾತ್ರ ಮೇ 22ರಿಂದ ಕೊವಿಡ್ ಲಸಿಕೆ ನೀಡಲು ನಿರ್ಧರಿಸಲಾಗಿದೆ.

ಈ ಕೆಳಕಂಡ ವರ್ಗಕ್ಕೆ ಮೇ 22ರಿಂದಲೇ ಲಸಿಕೆ ಲಭ್ಯವಾಗಲಿದೆ ಅಂಗವೈಕಲ್ಯ ಹೊಂದಿರುವ (ಮಾನಸಿಕ ಅಸ್ವಸ್ಥತೆ ಸೇರಿದಂತೆ) ಫಲಾನುಭವಿಗಳು ಮತ್ತು ಒರ್ವ ಆರೈಕೆದಾರರು ಖೈದಿಗಳು ಚಿತಾಗಾರ/ ಸ್ಮಶಾನ/ ರುದ್ರಭೂಮಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಹಾಗೂ ಸ್ವಸಹಾಯಕರು ಆರೋಗ್ಯ ಕಾರ್ಯಕರ್ತರ ನಿಕಟ ಕುಟುಂಬಸ್ಥರು ಕೊವಿಡ್ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಶಿಕ್ಷಕರು ಸರ್ಕಾರಿ ಸಾರಿಗೆ ಸಿಬ್ಬಂದಿ ಆಟೋ ಮತ್ತು ಕ್ಯಾಬ್ ಚಾಲಕರು ವಿದ್ಯುತ್ ಮತ್ತು ನೀರು ಸರಬರಾಜು ಮಾಡುವವರು ಅಂಚೆ ಇಲಾಖೆ ಸಿಬ್ಬಂದಿ ಭದ್ರತೆ ಮತ್ತು ಕಚೇರಿಗಳ ಹೌಸ್ ಕೀಪಿಂಗ್ ಸಿಬ್ಬಂದಿ ನ್ಯಾಯಾಂಗ ಅಧಿಕಾರಿಗಳು ವಯೋವೃದ್ಧರ/ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವವರ ಆರೈಕೆದಾರರು ಮಾಧ್ಯಮದವರು ಆಸ್ಪತ್ರೆಗಳಿಗೆ ಸರಕು ಸರಬರಾಜು ಮಾಡುವ ವ್ಯಕ್ತಿಗಳು ಆಯಿಲ್ ಇಂಡಸ್ಟ್ರಿ ಮತ್ತು ಗ್ಯಾಸ್ ಸರಬರಾಜು ಮಾಡುವವರು ಪೆಟ್ರೋಲ್ ಬಂಕ್, ಕರ್ಮಚಾರಿಗಳು ಒಳಗೊಂಡಂತೆ ಔಷಧಿ ತಯಾರಿಕಾ ಕಂಪನಿಗಳ ಸಿಬ್ಬಂದಿ ಆಸ್ಪತ್ರೆಗಳಿಗೆ ಆಕ್ಸಿಜನ್, ಔಷಧಿಗಳು ಮತ್ತು ವೈದ್ಯಕೀಯ ಉಪಕರಣ ಸರಬರಾಜು ಸಿಬ್ಬಂದಿ ಅಧಿಕೃತ ಗುರುತಿನ ಚೀಟಿ ಹೊಂದಿರದ ಫಲಾನುಭವಿಗಳು (ವೃದ್ದಾಶ್ರಮ ವಾಸಿಗಳು, ನಿರ್ಗತಿಕರು) ಭಾರತೀಯ ಆಹಾರ ನಿಗಮ ಸಿಬ್ಬಂದಿ

ಲಸಿಕೆ ಪಡೆಯಲಿರುವ ಆದ್ಯತೆ ಗುಂಪುಗಳು ಇಂತಿವೆ ಎಪಿಎಂಸಿ ಕೆಲಸಗಾರರು ಆದ್ಯತೆಯ ಗುಂಪುಗಳು ಕಟ್ಟಡ ಕಾರ್ಮಿಕರು ಟೆಲಿಕಾಂ ಮತ್ತು ಇಂಟರ್ನೆಟ್ ‌ಸೇವಾದಾರರು ವಿಮಾನಯಾನ ಸಂಸ್ಥೆಗಳ ಸಿಬ್ಬಂದಿ ಬ್ಯಾಂಕ್ ಸಿಬ್ಬಂದಿ ಪೆಟ್ರೋಲ್ ಬಂಕ್ ಕೆಲಸಗಾರರು ಚಿತ್ರೋದ್ಯಮದ ಉದ್ಯಮಿ/ಕಾರ್ಯಕರ್ತ/ ಸಿಬ್ಬಂದಿ ಅಡ್ವೋಕೇಟ್ ಗಳು ಹೋಟೆಲ್ ಮತ್ತು ಆತಿಥ್ಯ ಸೇವಾದಾರರು ಕೆಎಂಎಫ್ ಸಿಬ್ಬಂದಿ ರೈಲ್ವೇ ಸಿಬ್ಬಂದಿ ಗಾರ್ಮೆಂಟ್ಸ್ ಕಾರ್ಖಾನೆ ಸಿಬ್ಬಂದಿ ಅರಣ್ಯ ಇಲಾಖೆ ಸಿಬ್ಬಂದಿ ಎನ್ ಹೆಚ್ಎಐ ಸಿಬ್ಬಂದಿ

ಅಭಾವ ಇದ್ದ ಕಾರಣ ಈ ಹಿಂದೆ ಸ್ಥಗಿತಗೊಂಡಿತ್ತು ರಾಜ್ಯದಲ್ಲಿ ಕೊವಿಡ್ ಲಸಿಕೆಯ ಅಭಾವ ಸೃಷ್ಟಿಯಾದ ಕಾರಣ ಮೇ 12ರಂದು 18ರಿಂದ 44 ವರ್ಷದವರಿಗೆ ಮೇ 14ರಿಂದ ಕೊರೊನಾ ಲಸಿಕೆ ನೀಡಿಕೆ ಸ್ಥಗಿತಗೊಳಿಸಲು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿತ್ತು. ತಾತ್ಕಾಲಿಕವಾಗಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆ ಸ್ಥಗಿತಗೊಳಿಸಲಾಗಿತ್ತು. ಈಗಾಗಲೇ ಲಸಿಕೆಗೆ ಸಮಯ ನಿಗದಿಪಡಿಸಲ್ಪಟ್ಟಿರುವರೂ ಸೇರಿದಂತೆ ಲಸಿಕೆ ತಾತ್ಕಾಲಿಕ ಸ್ಥಗಿತಗೊಳ್ಳಲಿದೆ ಎಂದು ಸರ್ಕಾರ ಸೂಚಿಸಿತ್ತು. ಇದೀಗ ಮೇ 22ರಿಂದ 18 ವರ್ಷ ಮೇಲ್ಪಟ್ಟವರಿಗೂ ಕೊವಿಡ್ ಲಸಿಕೆ ನೀಡುವುದಾಗಿ ತಿಳಿಸಿದೆ.

ಆದರೆ ಇದೀಗ ಕೊವಿಡ್ ಸೋಂಕು ತಡೆಗಟ್ಟಲು 18 ವರ್ಷ ಮೇಲ್ಪಟ್ಟವರಿಗೆ ಮೇ 22ರಿಂದಲೇ ಲಸಿಕೆ ವಿತರಣೆ ಮಾಡಲಾಗುವುದು ಎಂದು ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕರು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.  ಆದರೆ ಸದ್ಯ ಆರೋಗ್ಯ ಕಾರ್ಯಕರ್ತರು, ಕೊವಿಡ್ ಸೇನಾನಿಗಳು ಮತ್ತು ಕೆಲವು ಗುಂಪುಗಳಿಗೆ ಆದ್ಯತೆಯ ಮೇರೆಗೆ ಲಸಿಕೆ ವಿತರಿಸಲು ನಿರ್ಧಾರ ಮಾಡಲಾಗಿದೆ.

ಇದನ್ನೂ ಓದಿ: Meghana Raj: 2 ತಿಂಗಳ ಹಸುಗೂಸಿಗೆ ಕೊವಿಡ್​ ಬಂದಾಗ ಎದುರಾಗಿದ್ದ ಭಯದ ಪರಿಸ್ಥಿತಿ ಬಗ್ಗೆ ವಿವರಿಸಿದ ಮೇಘನಾ ರಾಜ್​

ರಾಜ್​ಕುಮಾರ್​ಗೆ ಯೋಗಾಸನ ಹೇಳಿಕೊಟ್ಟ ಹೊನ್ನಪ್ಪ ನಾಯ್ಕರ್​ ಕೊವಿಡ್​​ನಿಂದ ನಿಧನ

(Covid vaccine for 18 to 44 year old starting from May 22 first priority for Covid warriors in Karnataka)

Published On - 10:01 pm, Thu, 20 May 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್