ಆರು ತಿಂಗಳ ಬಳಿಕ.. ದೇಶದಲ್ಲಿ ಅತಿ ಕಡಿಮೆ ಕೊರೊನಾ ಕೇಸ್ಗಳು ಪತ್ತೆ
ಆರು ತಿಂಗಳ ಹಿಂದೆ, ಅಂದರೆ ಜುಲೈ 1 ರಂದು 19,160 ಕೊವಿಡ್-19 ಪ್ರಕರಣಗಳು ದಾಖಲಾಗಿದ್ದವು. ಆ ಬಳಿಕ ಪ್ರತಿದಿನ 20 ಸಾವಿರಕ್ಕೂ ಹೆಚ್ಚು ಸೋಂಕಿನ ಪ್ರಕರಣಗಳು ವರದಿಯಾಗುತ್ತಿದ್ದವು. ಇದೀಗ ಆರು ತಿಂಗಳ ನಂತರ ಕೊವಿಡ್-19 ಪ್ರಕರಣಗಳು ಮತ್ತೆ 20 ಸಾವಿರಕ್ಕಿಂತ ಕಡಿಮೆಯಾಗಿದೆ.
ದೆಹಲಿ: ದೇಶದಲ್ಲಿ ಇಂದು 18,732 ಕೊವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಕಳೆದ 6 ತಿಂಗಳಿನಿಂದ ಪ್ರತಿದಿನ ದಾಖಲಾಗಿರುವ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಅತೀ ಕಡಿಮೆ ಕೇಸ್ಗಳು ಇದಾಗಿದೆ. ಆರು ತಿಂಗಳ ಹಿಂದೆ, ಅಂದರೆ ಜುಲೈ 1 ರಂದು 19,160 ಕೊವಿಡ್-19 ಪ್ರಕರಣಗಳು ದಾಖಲಾಗಿದ್ದವು. ಆ ಬಳಿಕ ಪ್ರತಿದಿನ 20 ಸಾವಿರಕ್ಕೂ ಹೆಚ್ಚು ಸೋಂಕಿನ ಪ್ರಕರಣಗಳು ವರದಿಯಾಗುತ್ತಿದ್ದವು. ಇದೀಗ ಆರು ತಿಂಗಳ ನಂತರ ಕೊವಿಡ್-19 ಪ್ರಕರಣಗಳು ಮತ್ತೆ 20 ಸಾವಿರಕ್ಕಿಂತ ಕಡಿಮೆಯಾಗಿದೆ.
ಒಂದೆಡೆ ಕೊರೊನಾ ವೈರಾಣು ರೂಪಾಂತರ ಹೊಂದಿದ್ದು ಅದರಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂಬ ವರದಿಗಳನ್ನು ಗಮನಿಸುತ್ತಿದ್ದೇವೆ. ಮತ್ತೊಂದೆಡೆ, ಜನಜೀವನ ಯಥಾಸ್ಥಿತಿಯತ್ತ ಮರಳುತ್ತಿದೆ. ಹಲವು ರಾಜ್ಯಗಳಲ್ಲಿ ಶಾಲಾ ಕಾಲೇಜು ತೆರೆಯುವ ಬಗ್ಗೆ ಬೆಳವಣಿಗೆಗಳಾಗಿವೆ. ಈ ನಡುವೆ, ಕೊವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿರುವುದು ಜನರಲ್ಲಿ ಕೊಂಚ ಸಮಾಧಾನ ತಂದಿದೆ.
ಜೊತೆಗೆ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 279 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ, ದೇಶದಲ್ಲಿ ಕೊರೊನಾದಿಂದಾಗಿ ಮೃತಪಟ್ಟವರ ಒಟ್ಟು ಸಂಖ್ಯೆ 1,47,622 ಕ್ಕೆ ಏರಿದೆ. ಇದೀಗ ದೇಶದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 1,01,87,850ಕ್ಕೆ ತಲುಪಿದೆ. ಅದರಲ್ಲಿ, ಸಕ್ರಿಯ ಕೇಸ್ಗಳ ಸಂಖ್ಯೆ ಕೇವಲ 2,78,690.
ಕರ್ನಾಟಕದ ಕೊವಿಡ್-19 ವರದಿ ಇತ್ತ, ಕರ್ನಾಟಕದಲ್ಲಿ ಇದುವರೆಗೆ ಒಟ್ಟು 9,14,488 ಸೋಂಕಿನ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ, ಸಕ್ರಿಯ ಪ್ರಕರಣಗಳ ಸಂಖ್ಯೆ ಕೇವಲ 13,394 . ರಾಜ್ಯದಲ್ಲಿ ಇದುವರೆಗೆ ಒಟ್ಟು 12,044 ಜನರು ಸೋಂಕಿಗೆ ಕೊನೆಯುಸಿರೆಳೆದಿದ್ದಾರೆ. ಸದ್ಯ, ಪ್ರತಿನಿತ್ಯ ಸರಾಸರಿ ಒಂದು ಸಾವಿರದಷ್ಟು ಹೊಸ ಕೊವಿಡ್-19 ಪ್ರಕರಣಗಳು ಮಾತ್ರ ದಾಖಲಾಗುತ್ತಿವೆ. ಆ ಮೂಲಕ ಹೊಸ ಕೊವಿಡ್ ಕೇಸ್ಗಳ ಸಂಖ್ಯೆ ಇಳಿಕೆ ಕಂಡಿದೆ.
Published On - 11:39 am, Sun, 27 December 20