ಬಾಗಲಕೋಟೆ: ಕೊವಿಡ್ನಿಂದ ಮೃತರಿಗೆ ಸರ್ಕಾರ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ಕೆಲವು ಅವ್ಯವಹಾರ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ನಕಲಿ ಆರ್ಟಿಪಿಸಿಆರ್ ವರದಿ ಪ್ರಕರಣ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಎರಡು ತಿಂಗಳು ಹಿಂದೆ ತೀರಿಕೊಂಡಿದ್ದ ಮಹಿಳೆಗೆ ಇದೀಗ ಆರ್ಟಿಪಿಸಿಆರ್ ಪಾಸಿಟಿವ್ ರಿಪೋರ್ಟ್ ತಯಾರಿ ಮಾಡಿರುವುದು ಕಂಡುಬಂದಿದೆ.
ಕೊವಿಡ್ನಿಂದ ಮೃತಪಟ್ಟವರಿಗೆ ಕರ್ನಾಟಕ ಸರ್ಕಾರ ಪರಿಹಾರ ಘೋಷಣೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ನಕಲಿ RTPCR ವರದಿ ಮಾಡಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. 2 ತಿಂಗಳ ಹಿಂದೆ ಮೃತಪಟ್ಟ ಮಹಿಳೆಗೆ ಇದೀಗ ಪಾಟಿಟಿವ್ ರಿಪೋರ್ಟ್ ನೀಡಲಾಗಿದೆ. ಬಾಗಲಕೋಟೆ ಜಿಲ್ಲಾಸ್ಪತ್ರೆ ಸಿಬ್ಬಂದಿಯಿಂದ ಗೋಲ್ಮಾಲ್ ನಡೆದಿರುವ ಬಗ್ಗೆ ಮಾಹಿತಿ ದೊರಕಿದೆ.
ಪ್ರಕರಣಕ್ಕೆ ಸಂಬಂಧಿಸಿ ಸ್ಕ್ಯಾನಿಂಗ್ ವಿಭಾಗದ ಸ್ಟಾಫ್ನರ್ಸ್ ಬಸವರಾಜ್ ಬಿಲಕೇರಿ, ಡಾಟಾ ಎಂಟ್ರಿ ಆಪರೇಟರ್ ಬಸನಗೌಡ ಗಿರಿಯಪ್ಪಗೌಡ ಸೆರೆಯಾಗಿದ್ದಾರೆ. ಬಾಗಲಕೋಟೆಯ ನವನಗರ ಠಾಣೆ ಪೊಲೀಸರಿಂದ ಆರೋಪಿಗಳ ಬಂಧನವಾಗಿದೆ.
ಮೇ 2ರಂದು ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಬಿದರಿ ಗ್ರಾಮದ ಶೇಖವ್ವ ರೂಗಿ (53) ಎಂಬವರು ಮೃತಪಟ್ಟಿದ್ದರು. ಜಿಲ್ಲಾಸ್ಪತ್ರೆಯಲ್ಲಿ ಉಸಿರಾಟದ ಸಮಸ್ಯೆಯಿಂದ ಅವರು ಮೃತಪಟ್ಟಿದ್ದರು. ಸಿಟಿ ಸ್ಕ್ಯಾನ್ನಲ್ಲಿ ಕೊವಿಡ್ ಇದ್ದರೂ ಟೆಸ್ಟ್ ಮಾಡಿಸಿರಲಿಲ್ಲ. ಶೇಖವ್ವ ರೂಗಿಗೆ ಆರ್ಟಿಪಿಸಿಆರ್ ಟೆಸ್ಟ್ ಮಾಡಿಸಿರಲಿಲ್ಲ. ಆದರೆ, ಈಗ ಸರ್ಕಾರ ಪರಿಹಾರ ಘೋಷಣೆ ಮಾಡಿದ ನಂತರ ನಕಲಿ ದಾಖಲೆ ಸೃಷ್ಟಿ ಮಾಡಲಾಗಿದೆ.
ಮೇ 1ರಂದು ಗಂಟಲು ದ್ರವ ಸಂಗ್ರಹಿಸಲಾಗಿತ್ತೆಂದು ದಾಖಲು ಮಾಡಿ, ಬಾಗಲಕೋಟೆ ಜಿಲ್ಲಾಸ್ಪತ್ರೆ ಸಿಬ್ಬಂದಿ ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಆದರೆ ಜುಲೈ 15ರಂದು ಪಾಸಿಟಿವ್ ಬಂದಿದೆ ಎಂದು ನಮೂದು ಮಾಡಲಾಗಿದೆ. 2 ತಿಂಗಳು ತಡವಾಗಿದ್ದರಿಂದ ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಬಳಿಕ, ಅಧಿಕಾರಿಗಳು ತಪಾಸಣೆ ನಡೆಸಿದಾಗ ಗೋಲ್ಮಾಲ್ ಬೆಳಕಿಗೆ ಬಂದಿದೆ.
ಡಾಟಾ ಎಂಟ್ರಿ ಆಪರೇಟರ್ ಯೂಸರ್ ಐಡಿ ದುರುಪಯೋಗ ಮಾಡಿರುವುದು, ಪಾಸ್ ವರ್ಡ್ ದುರ್ಬಳಕೆ ಮಾಡಿಕೊಂಡು ಕೊವಿಡ್ ವರದಿ ನೀಡಿ, ಸರ್ಕಾರಕ್ಕೆ ವಂಚಿಸಿದ ಆರೋಪದಡಿ ಆರೋಪಿಗಳಿಬ್ಬರ ಸೆರೆಯಾಗಿದೆ. ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಪ್ರಕಾಶ್ ಬಿರಾದರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Delta Variant: ಕೊರೊನಾ ಲಸಿಕೆ ಪಡೆದ ನಂತರವೂ ಹಬ್ಬಿದ ಸೋಂಕಿನಲ್ಲಿ ಶೇ.86.09 ಪಾಲು ಡೆಲ್ಟಾ ತಳಿಯದ್ದು – ಐಸಿಎಂಆರ್
ಕೊರೊನಾ ಆತಂಕದ ಮಧ್ಯೆ ಕಾಣಿಸಿಕೊಂಡ ಮಂಕಿಪಾಕ್ಸ್; ಕಳೆದ 20 ದಶಕಗಳಲ್ಲಿ ಪತ್ತೆಯಾದ ಮೊದಲ ಪ್ರಕರಣ