ಕೊವಿಡ್ 3ನೇ ಅಲೆ ಎದುರಿಸಲು ಸಿದ್ಧತೆ; ವಾರದೊಳಗೆ ಕಾರ್ಯಪಡೆಯಿಂದ ವರದಿ ಸಲ್ಲಿಕೆ
ಒಂದು ವಾರದೊಳಗೆ ಕಾರ್ಯಪಡೆ ತನ್ನ ವರದಿ ಸಲ್ಲಿಸುತ್ತದೆ ಎಂದು ತಜ್ಞರ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಹೇಳಿಕೆ ನೀಡಿದರು. ಸಣ್ಣ ಆಸ್ಪತ್ರೆಗಳಿಗೆ ಸರ್ಕಾರವೇ ಲಸಿಕೆ ಪೂರೈಸಿದರೆ ಉತ್ತಮ ಎಂದು ತಜ್ಞರ ಸಮಿತಿ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದೆ.
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು (ಜೂನ್ 2) ಕೊವಿಡ್ 3ನೇ ಅಲೆಗೆ ಸಂಬಂಧಿಸಿದ ಪೂರ್ವ ಸಿದ್ಧತೆ ಕುರಿತಂತೆ ರಚಿಸಲಾಗಿರುವ ಡಾ. ದೇವಿಪ್ರಸಾದ್ ಶೆಟ್ಟಿ ನೇತೃತ್ವದ ಕಾರ್ಯಪಡೆಯೊಂದಿಗೆ ಸಭೆ ನಡೆಸಿ, ಚರ್ಚಿಸಿದರು. ಕೊವಿಡ್ 3ನೇ ಅಲೆ ತಡೆಗಟ್ಟಲು ಸಿದ್ಧತೆಗಳು ಇತ್ಯಾದಿಗಳ ಬಗ್ಗೆ ಮಾತುಕತೆ ನಡೆಸಿದರು.
ಕೊವಿಡ್ 3ನೇ ಅಲೆಯನ್ನು ತಡೆಗಟ್ಟಲು ಕೈಗೊಳ್ಳಬೇಕಾಗಿರುವ ಮುಂಜಾಗರೂಕತಾ ಕ್ರಮಗಳು, ಕಲ್ಪಿಸಬೇಕಾದ ಮೂಲಸೌಕರ್ಯ ಹಾಗೂ ಚಿಕಿತ್ಸಾ ಸೌಲಭ್ಯಗಳು, ಅಗತ್ಯವಿರುವ ಮಾನವ ಸಂಪನ್ಮೂಲ, ಔಷಧಗಳು ಮೊದಲಾದ ವಿಷಯಗಳ ಕುರಿತು ಚರ್ಚಿಸಲಾಯಿತು. ಒಂದು ವಾರದೊಳಗೆ ಕಾರ್ಯಪಡೆಯು ತನ್ನ ವರದಿಯನ್ನು ಸಲ್ಲಿಸಲಾಗುವುದು ಎಂದು ಡಾ. ದೇವಿ ಪ್ರಸಾದ್ ಶೆಟ್ಟಿ ತಿಳಿಸಿದರು.
ಕಾರ್ಯಪಡೆಯ ಶಿಫಾರಸುಗಳನ್ನು ಆಧರಿಸಿ, ಸರ್ಕಾರವು ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು. ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್, ಆರೋಗ್ಯ ಸಚಿವ ಡಾ. ಸುಧಾಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ, ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಮತ್ತು ಇತರ ಅಧಿಕಾರಿಗಳು ಭಾಗವಹಿಸಿದ್ದರು.
ಮುಖ್ಯಮಂತ್ರಿ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಸಭೆ ಮುಕ್ತಾಯಗೊಂಡಿದೆ. ಒಂದು ವಾರದೊಳಗೆ ಕಾರ್ಯಪಡೆ ತನ್ನ ವರದಿ ಸಲ್ಲಿಸುತ್ತದೆ ಎಂದು ತಜ್ಞರ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಹೇಳಿಕೆ ನೀಡಿದರು. ಸಣ್ಣ ಆಸ್ಪತ್ರೆಗಳಿಗೆ ಸರ್ಕಾರವೇ ಲಸಿಕೆ ಪೂರೈಸಿದರೆ ಉತ್ತಮ ಎಂದು ತಜ್ಞರ ಸಮಿತಿ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದೆ.
ಲಾಕ್ಡೌನ್ ಬಗ್ಗೆ ಶನಿವಾರ ನಿರ್ಧಾರ ಶನಿವಾರ ಮತ್ತೊಮ್ಮೆ ಸಭೆ ನಡೆಸಿ ಲಾಕ್ಡೌನ್ ಮುಂದುವರಿಕೆ ಅಥವಾ ಅನ್ಲಾಕ್ ಪ್ರಕ್ರಿಯೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿದುಬಂದಿದೆ. ಜೂನ್ 5ರಂದು ನಡೆಯುವ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಲಾಕ್ಡೌನ್ ವಿಸ್ತರಿಸಬೇಕಾ ಬೇಡವಾ ಎಂದು ನಿರ್ಧರಿಸಲಾಗುವುದು ಎಂದು ಮಾಹಿತಿ ಲಭ್ಯವಾಗಿದೆ. ಇಂದಿನ ಸಭೆಯಲ್ಲಿ ಚರ್ಚೆ ನಡೆಸಿರುವ ಸಿಎಂ ಬಿಎಸ್ವೈ ಜೂನ್ 5ರಂದು ಅಂತಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಒಂದು ವಾರ ಲಾಕ್ಡೌನ್ ಮುಂದುವರಿಕೆಗೆ ನಿರ್ಧಾರ? ಕೊವಿಡ್ ಉಸ್ತುವಾರಿಗಳು, ಅಧಿಕಾರಿಗಳು ಭಾಗವಹಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ಒಂದು ವಾರ ಲಾಕ್ಡೌನ್ ಮುಂದುವರಿಕೆಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರದಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ನಾಳೆಯೇ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದೂ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: ಕೊರೊನಾದಿಂದ ಮೃತಪಟ್ಟ ಸಾವಿರಕ್ಕೂ ಹೆಚ್ಚು ಮಂದಿಯ ಅಸ್ಥಿ ವಿಸರ್ಜನೆ; ಸರ್ಕಾರದ ಪರವಾಗಿ ಸಂಕಲ್ಪಕ್ಕೆ ಕುಳಿತ ಆರ್ ಅಶೋಕ್
ಕೊರೊನಾ ಸಂಕಷ್ಟ: ತಂದೆ ಅಂತ್ಯಸಂಸ್ಕಾರದ ವೇಳೆ ಮಗನೂ ಸಾವು; ಮತ್ತೊಂದೆಡೆ ತಂದೆ-ತಾಯಿ ಕಳೆದುಕೊಂಡ 8 ಮಕ್ಕಳು
Published On - 6:29 pm, Wed, 2 June 21