ಬೆಂಗಳೂರು: ಈ ಬಾರಿಯ ಕನ್ನಡ ರಾಜ್ಯೋತ್ಸವ ಆಚರಣೆ ಹಿನ್ನೆಲೆ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಕೊವಿಡ್ ತಾಂತ್ರಿಕ ಸಮಿತಿಯಿಂದ ಸೂಕ್ತ ನಿಯಮಾವಳಿಗಳನ್ನು ಶಿಫಾರಸು ಮಾಡಲಾಗಿದೆ. ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರಿಂದ ಶಿಫಾರಸು ನವೆಂಬರ್ 1ರಂದು ನಡೆಯುವ ರಾಜ್ಯೋತ್ಸವಕ್ಕೆ ನಿಯಮಾವಳಿ ಸೂಚಿಸಲಾಗಿದೆ. ಹೊರಾಂಗಣ ಕಾರ್ಯಕ್ರಮಗಳಲ್ಲಿ ಜನ ಸೇರ್ಪಡೆಗೆ ನಿರ್ಬಂಧ ವಿಧಿಸಿ ಸೂಚನೆ ಕೊಡಲಾಗಿದೆ. 500ಕ್ಕೂ ಹೆಚ್ಚು ಜನರು ಸೇರುವಂತಿಲ್ಲ. ಕಾರ್ಯಕ್ರಮಕ್ಕೆ ಬರುವವರಿಗೆ 2 ಡೋಸ್ ಲಸಿಕೆ ಆಗಿರಬೇಕು. ಕೊವಿಡ್ ಲಕ್ಷಣ ರಹಿತರಿಗೆ ಮಾತ್ರ ಭಾಗಿಯಾಗಲು ಅವಕಾಶ. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕಡ್ಡಾಯವಾಗಿ ಸ್ಯಾನಿಟೈಸೇಷನ್ ಮಾಡಲೇಬೇಕು. ಎಲ್ಲರೂ ದೈಹಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಕೊವಿಡ್ ತಾಂತ್ರಿಕ ಸಲಹಾ ಸಮಿತಿಯಿಂದ ನಿಯಮ ಶಿಫಾರಸು ಮಾಡಲಾಗಿದೆ.
ಮುಂದೆ ಕೊರೊನಾ ಅಲೆ ಅಪಾಯದ ಬಗ್ಗೆ ಗಮನ ಇಟ್ಟುಕೊಂಡು ನಿಯಮಗಳನ್ನು ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿದೆ. ಕನ್ನಡ ರಾಜ್ಯೋತ್ಸವ ಆಚರಣೆಗೆ ನಿಯಮಗಳೇನು ? ಕನ್ನಡ ರಾಜ್ಯೋತ್ಸವ ಆಚರಣೆಗೆ ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿರೋ ಅಂಶಗಳೇನು ?
– ಹೊರಾಂಗಣ ಕಾರ್ಯಕ್ರಮಗಳಲ್ಲಿ 500 ಜನಕ್ಕೂ ಹೆಚ್ಚು ಸೇರುವಂತಿಲ್ಲ
– ಕಾರ್ಯಕ್ರಮದಲ್ಲಿ ಭಾಗಿಯಾಗುವ ವ್ಯಕ್ತಿ ಎರಡು ಡೋಸ್ ವ್ಯಾಕ್ಸಿನ್ ಪಡೆದಿರಬೇಕು. ಅದರ ಸರ್ಟಿಫಿಕೇಟ್ ಇರಬೇಕು
– ಥರ್ಮಲ್ ಸ್ಕ್ರೀನಿಂಗ್ ಆಗಬೇಕು. ಲಕ್ಷಣ ರಹಿತ ವ್ಯಕ್ತಿಗಳಿಗೆ ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕೊಡಬೇಕು
– ಮಾಸ್ಕ್ ಕಡ್ಡಾಯವಾಗಿ ಹಾಕಬೇಕು
– ಕಡ್ಡಾಯವಾಗಿ ಸ್ಯಾನಿಟೈಸೇಷನ್ ಮಾಡಲೇಬೇಕು
– ಒಂದು ಮೀಟರ್ ಅಷ್ಟು ದೂರ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು
– ಕಾರ್ಯಕ್ರಮದಲ್ಲಿ ಹ್ಯಾಂಡ್ ಸ್ಯಾನಿಟೈಸರ್ ವ್ಯವಸ್ಥೆ ಮಾಡಲೇಬೇಕು
ಬೆಳಗಾವಿ: ಅದ್ದೂರಿ ರಾಜ್ಯೋತ್ಸವ ಮೆರವಣಿಗೆಗೆ ಒತ್ತಾಯ
ಇಲ್ಲಿನ ಸರ್ಕಾರಿ, ಅರೆಸರ್ಕಾರಿ ಕಚೇರಿಗಳ ಮೇಲೆ ಕನ್ನಡ ಧ್ವಜ ಹಾರಾಡಿಸಲು ಆಗ್ರಹ ಕೇಳಿಬಂದಿದೆ. ಈ ಸಂಬಂಧ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕನ್ನಡಪರ ಸಂಘಟನೆಗಳು ಧರಣಿ ನಡೆಸಿವೆ. ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್ ನೇತೃತ್ವದಲ್ಲಿ ಧರಣಿ ನಡೆಸಲಾಗಿದೆ. ಬೆಳಗಾವಿಯಲ್ಲಿ ಅದ್ಧೂರಿ ರಾಜ್ಯೋತ್ಸವ ಮೆರವಣಿಗೆಗೂ ಒತ್ತಾಯ ಕೇಳಿಬಂದಿದೆ. ನಾಡತಾಯಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಧರಣಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿ ಡಿಸಿ ಎಂ.ಜಿ. ಹಿರೇಮಠ ಮನವಿ ಸ್ವೀಕರಿಸಿದ್ದಾರೆ. ನಿನ್ನೆ ಎಂಇಎಸ್ ಪ್ರತಿಭಟನೆ ವೇಳೆ ನಾಡದ್ರೋಹಿ ಘೋಷಣೆ ವಿಚಾರವಾಗಿ ಪ್ರತಿಕ್ರಿಯೆ ಕೇಳಿಬಂದಿದೆ. ಎಡಿಸಿಗೆ ಅವಮಾನ ಮಾಡಿದ ಪುಂಡರ ವಿರುದ್ಧ ಕೇಸ್ ದಾಖಲಿಸಲು ಆಗ್ರಹ ವ್ಯಕ್ತವಾಗಿದೆ. ಸೂಕ್ತ ಕ್ರಮ ಕೈಗೊಳ್ಳುವುದಾಗಿ ಡಿಸಿ ಎಂ.ಜಿ. ಹಿರೇಮಠ ಭರವಸೆ ನೀಡಿದ್ದಾರೆ.
ಇದನ್ನೂ ಓದಿ: ಕನ್ನಡ ರಾಜ್ಯೋತ್ಸವಕ್ಕೆ ಕೊಡುಗೆ! ನವೆಂಬರ್‌ನಿಂದ ಬದಲಾಗಲಿದೆ ಸರ್ಕಾರದ ಆಡಳಿತ ವೈಖರಿ, ಆಡಳಿತದ ವೆಚ್ಚ ಕಡಿತಗೊಳಿಸಲು ಹೊಸ ಕ್ರಮ
ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ ವಿಶೇಷ: ಕನ್ನಡ ಕೈಬರಹದ ರಾಷ್ಟ್ರಮಟ್ಟದ ಸ್ಪರ್ಧೆ ಆಯೋಜಿಸಿದ ಭಾಷಾ ಭಾರತಿ ಪ್ರಾಧಿಕಾರ
Published On - 2:44 pm, Tue, 26 October 21