ಕೋವಿಶೀಲ್ಡ್​ ಪಡೆದವರು ತಂಪುಪಾನಿಯ, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ

ಕೊರೊನಾ ಸಂದರ್ಭದಲ್ಲಿ ಕೋವಿಶೀಲ್ಡ್ ​ಲಸಿಕೆ ಪಡೆದವರು ಫ್ರಿಜ್​ ನೀರು, ಐಸ್​ ಕ್ರೀಮ್​ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು ಎಂದು ಶುಕ್ರವಾರ ಸಾಮಾಜಿಕ ಜಾಲತಾಣಗಳಲ್ಲಿ ಖಾಸಗಿ ಕಾಲೇಜಿನ ನೋಟಿಸ್​ ವೈರಲ್​ ಆಗಿತ್ತು. ಇದಕ್ಕೆ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

ಕೋವಿಶೀಲ್ಡ್​ ಪಡೆದವರು ತಂಪುಪಾನಿಯ, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on: May 04, 2024 | 11:49 AM

ಬೆಂಗಳೂರು, ಮೇ 04: ಕೊರೊನಾ (Covid) ಸಂದರ್ಭದಲ್ಲಿ ಕೋವಿಶೀಲ್ಡ್ (Covishield)​ ಲಸಿಕೆ ಪಡೆದವರು ಫ್ರಿಜ್​ ನೀರು, ಐಸ್​ ಕ್ರೀಮ್​ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು ಎಂಬುವುದು ಸುಳ್ಳು ಸುದ್ದಿಯಾಗಿದೆ ಎಂದು ಆರೋಗ್ಯ ಇಲಾಖೆ (Health Department) ತಿಳಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ರೀತಿಯ ಸುದ್ದಿ ಸುಳ್ಳಾಗಿದ್ದು, ಇಂತಹ ಯಾವುದೇ ಸುತ್ತೋಲೆ ಇಲಾಖೆ ಹೊರಡಿಸಿಲ್ಲ. ಗಾಬರಿ ಗೊಳ್ಳದಿರಿ, ತಪ್ಪು ಮಾಹಿತಿ ಬಗ್ಗೆ ಜಾಗೃತಿ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಈ ರೀತಿ ಸೂಚನೆ ನೀಡಿರುವ ಕಾಲೇಜುಗಳಿಗೆ ಕಾರಣ ಕೇಳಿ ಆರೋಗ್ಯ ಇಲಾಖೆ ನೋಟಿಸ್ ನೀಡಿದೆ.

ಸುಳ್ಳು ಸುದ್ದಿ

ಆರೋಗ್ಯ ಇಲಾಖೆಯು ತಿಳಿಸಿರುವ ಮಾಹಿತಿಯ ಪ್ರಕಾರ, ಎಲ್ಲ ವಿದ್ಯಾರ್ಥಿಗಳು ಹಾಗೂ ಪೋಷಕರು ಯಾವುದೇ ರೀತಿಯ ಫ್ರಿಜ್​ ನೀರು, ಐಸ್​ ಕ್ರೀಮ್​ ಮತ್ತಯ ತಂಪು ಪಾನೀಯಗಳನ್ನು ಕುಡಿಯಬಾರದು. ಏಕೆಂದರೆ ಕೊರೊನಾ ಸಂದರ್ಭದಲ್ಲಿ ಕೋವಿಶೀಲ್ಡ್​​ ಲಸಿಕೆ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು ದಿಢೀರ್​ ಹೃದಯಾಘಾತ ಸಂಭವಿಸಿ ಪ್ರಾಣ ಹಾನಿಯಾಗುತ್ತಿದೆ. ಹೀಗಾಗಿ ಮೇಲೆ ತಿಳಿಸಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವುದು ಎಂದು ಖಾಸಗಿ ಕಾಲೇಜು ಸುತ್ತೋಲೆ ಹೊರಡಿಸಿತ್ತು.

ಇದನ್ನೂ ಓದಿ: ಈ ಸೆಲೆಬ್ರಿಟಿಗಳ ಸಾವಿಗೆ ಕೋವಿಶೀಲ್ಡ್​ ಅಡ್ಡಪರಿಣಾಮ ಕಾರಣ? ಸೋಶಿಯಲ್ ಮೀಡಿಯಾದಲ್ಲಿ ಶುರುವಾಗಿದೆ ಚರ್ಚೆ

ಖಾಸಗಿ ಕಾಲೇಜೊಂದು ಈ ರೀತಿಯಾಗಿ ನೋಟಿಸ್​ ಹೊರಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಶುಕ್ರವಾರ ಹರದಾಡಲು ಆರಂಭಿಸಿತು. ಇದರಿಂದ ಎಚ್ಚತ್ತ ಆರೋಗ್ಯ ಇಲಾಖೆ ಇದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಿದೆ.

ಕೋವಿಶೀಲ್ಡ್​ನಿಂದ ಅಡ್ಡ ಪರಿಣಾಮ

ಅಸ್ಟ್ರಾಜೆನೆಕಾ ಕೋವಿಡ್ ಲಸಿಕೆ ಪಡೆದ ಬಳಿಕ ಮೆದುಳು ಅಥವಾ ದೇಹದ ಇತರೆ ರಕ್ತನಾಳಗಳಲ್ಲಿ ರಕ್ತಹೆಪ್ಪುಗಟ್ಟುವುದು, ಪ್ಲೇಟ್ ಲೆಟ್​ಗಳ ಸಂಖ್ಯೆ ಕಡಿಮೆಯಾಗುವುದ ಬಗ್ಗೆ ಬ್ರಿಟನ್ ನಿವಾಸಿ ಜೆಮಿ ಸ್ಕಾಟ್​ ದೂರು ನೀಡಿದ್ದರು.

ಈ ಪ್ರಕರಣದ ವಿಚಾರಣೆ ವೇಳೆ ಆಸ್ಟ್ರಾಜೆನೆಕಾದ ವಕೀಲರು ಲಿಖಿತ ಹೇಳಿಕೆ ಸಲ್ಲಿಸಿದ್ದು ಅದರಲ್ಲಿ ಕಂಪನಿ ಅಭಿವೃದ್ಧಿಪಡಿಸಿರುವ ಲಸಿಕೆಯು ಅಪರೂಪದ ಪ್ರಕರಣಗಳಲ್ಲಿ ಅಡ್ಡಪರಿಣಾಮಗಳಿಗೆ ಕಾರಣವಾಗುವುದು ನಿಜ. ಲಸಿಕೆ ಪಡೆದವರು ಥ್ರೊಂಬೋಸಿಸ್‌ ಎಂಬ ಆರೋಗ್ಯ ಸಮಸ್ಯೆಗೆ ತುತ್ತಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಈ ಸಮಸ್ಯೆಗೆ ತುತ್ತಾದವರು ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್‌ಲೆಟ್‌ಗಳ ಸಂಖ್ಯೆಯಲ್ಲಿ ಕಡಿಮೆಯ ತೊಂದರೆಗೆ ಒಳಗಾಗುತ್ತಾರೆ. ಅತ್ಯಂತ ಸೂಕ್ಷ್ಮ ಪ್ರಕರಣಗಳಲ್ಲಿ ವ್ಯಕ್ತಿಯು ಸಾವನ್ನಪ್ಪುವ ಸಾಧ್ಯತೆಯೂ ಇರುತ್ತದೆ’ ಎಂಬುದಾಗಿ ಸಂಸ್ಥೆ ತಪ್ಪೊಪ್ಪಿಕೊಂಡಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ