​​ಶಿರಚ್ಛೇದ ಮಾಡಿದ ರೀತಿಯಲ್ಲಿ ಹಸುವಿನ ಕರು ಪತ್ತೆ: ಚಿರತೆ ದಾಳಿಯೋ? ದುಷ್ಕೃತ್ಯವೋ?

Edited By:

Updated on: Dec 01, 2025 | 3:43 PM

ಗದಗ ನಗರದ ಎಪಿಎಂಸಿ ಜಾನುವಾರು ಮಾರುಕಟ್ಟೆ ಬಳಿಯೇ ಹಸು ಕರುವಿನ ಮೃತದೇಹ ಪತ್ತೆಯಾಗಿದೆ. ಶಿರಚ್ಛೇದ ಮಾಡಿರುವ ರೀತಿಯಲ್ಲಿ ಕರು ಪತ್ತೆಯಾಗಿದ್ದು, ಘಟನೆ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಚಿರತೆ ದಾಳಿಯಿಂದ ಹಸು ಮೃತಪಟ್ಟಿದೆಯೋ? ಅಥವಾ ದುಷ್ಟರು ನಡೆಸಿರುವ ಅಟ್ಟಹಾಸವೋ? ಎಂಬ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಲಾಗಿದೆ.

ಗದಗ, ಡಿಸೆಂಬರ್ 01: ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ​​ಶಿರಚ್ಛೇದ ಮಾಡಿದ ರೀತಿಯಲ್ಲಿ ಹಸುವಿನ ಕರು ಪತ್ತೆಯಾಗಿದೆ. ಘಟನೆ ಬೆನ್ನಲ್ಲೇ ಇದು ಚಿರತೆ ದಾಳಿಯಾಗಿರಬಹುದು ಎಂದು ಅಂದಾಜಿಲಾಗಿತ್ತು. ಆದರೆ, ಹಸುವಿನ ಕರು ತಲೆ ಕಡಿದು ಚೀಲದಲ್ಲಿ ತುಂಬಿಕೊಂಡು ಬಂದು ನಿರ್ಜನ ಪ್ರದೇಶದಲ್ಲಿ ಎಸಿದಿರುವ ಬಗ್ಗೆಯೂ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಎಪಿಎಂಸಿ ಜಾನುವಾರು ಮಾರುಕಟ್ಟೆ ಬಳಿಯೇ ಕರುವಿನ ಮೃತದೇಹ ಪತ್ತೆಯಾಗಿದ್ದು, ಘಟನೆಗೆ ಕಾರಣ ಏನೆಂದು ತನಿಖೆ ನಡೆಸಬೇಕೆಂಬ ಒತ್ತಾಯ ಕೇಳಿಬಂದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Dec 01, 2025 03:41 PM
Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More