ಮುಯ್ಯಿಗೆ ಮುಯ್ಯಿ: ಅಂದು ತಾಯಿ…ಇಂದು ಮಗನಿಗೆ ಸೋಲುಣುಸಿದ ಯೋಗೇಶ್ವರ್​…!

ನಾನಾ..ನೀನಾ ಅನ್ನೋ ಜಿದ್ದು...ಎರಡು ದೈತ್ಯ ಕುಟುಂಬಗಳ ನಡುವೆ ಪ್ರತಿಷ್ಠೆಯ ಫೈಟು. ಡಿಕೆ ಶಿವಕುಮಾರ್‌ ವರ್ಸಸ್‌ ಹೆಚ್‌ಡಿ ಕುಮಾರಸ್ವಾಮಿ ಅಂತಾನೇ ನಡೆದಿದ್ದ ಚನ್ನಪಟ್ಟಣ ಅಖಾಡದಲ್ಲಿ ಡಿಕೆ ಬ್ರದರ್ಸ್‌ ಗೆದ್ದು ಬೀಗಿದ್ದಾರೆ. ಜೆಡಿಎಸ್‌ ಭದ್ರಕೋಟೆ ಅಂತಾ ಅತಿಯಾದ ಆತ್ಮವಿಶ್ವಾಸದಲ್ಲಿದ್ದ ಕೇಂದ್ರ ಸಚಿವ ಹೆಚ್‌ಡಿಕೆ ಮುಖಭಂಗ ಅನುಭವಿಸಿದ್ದಾರೆ. ರಾಜ್ಯದ ಗಮನ ಸೆಳೆದಿದ್ದ ಚನ್ನಪಟ್ಟಣದಲ್ಲಿ ಯೋಗೇಶ್ವರ್​ ಜಯಭೇರಿ ಬಾರಿಸಿ ಮತ್ತೊಮ್ಮೆ ದೊಡ್ಡಗೌಡ ಕುಟುಂಬಕ್ಕೆ ಶಾಕ್ ಕೊಟ್ಟಿದ್ದಾರೆ.

ಮುಯ್ಯಿಗೆ ಮುಯ್ಯಿ: ಅಂದು ತಾಯಿ...ಇಂದು ಮಗನಿಗೆ ಸೋಲುಣುಸಿದ ಯೋಗೇಶ್ವರ್​...!
Follow us
ರಮೇಶ್ ಬಿ. ಜವಳಗೇರಾ
|

Updated on:Nov 23, 2024 | 7:47 PM

ಬೆಂಗಳೂರು, (ನವೆಂಬರ್ 23) : ಕರ್ನಾಟಕದ ಮೂವರ ರಾಜೀನಾಮೆಯಿಂದ ತೆರವಾದ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದರೂ ರಾಜ್ಯದ ಮಟ್ಟಿಗೆ ಹೆಚ್ಚು ಸದ್ದು ಮಾಡಿದ್ದು ಹೈವೋಲ್ಟೇಜ್ ಕಣ ಚನ್ನಪಟ್ಟಣ. ತುರುಸಿನ ಸ್ಪರ್ಧೆಯಲ್ಲಿ ಎಲ್ಲರ ಲೆಕ್ಕಾಚಾರಗಳನ್ನು ತಲೆ ಕೆಳಗೆ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ (CP Yogeshwar) ಗೆಲುವಿನ ನಗಾರಿ ಬಾರಿಸಿದ್ದಾರೆ. ಕಾಂಗ್ರೆಸ್ ರೂಪಿಸಿದ ಚಕ್ರವ್ಯೂಹ ಬೇಧಿಸುವಲ್ಲಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) 3ನೇ ಬಾರಿ ವಿಫಲರಾಗಿದ್ದಾರೆ. ಈ ಮೂಲಕ ಯೋಗೇಶ್ವರ್​ ಅಂದು ತಾಯಿಯನ್ನು ಸೋಲಿಸಿದ್ದ ಯೋಗೇಶ್ವರ್ ಈಗ ಪುತ್ರನನ್ನು ಸೋಲಿಸಿ ಮನೆಗೆ ಕಳುಹಿಸಿದ್ದಾರೆ.

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ. ಪಿ. ಯೋಗೇಶ್ವರ 1,12,642 ಮತಗಳನ್ನು ಪಡೆದು 25,413 ಮತಗಳ ಅಂತರದಿಂದ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯನ್ನು (87,229 ಮತ) ಸೋಲಿಸಿದ್ದಾರೆ.

ಇದನ್ನೂ ಓದಿ: ಅಪ್ಪನ ಕ್ಷೇತ್ರ ಚನ್ನಪಟ್ಟಣದಲ್ಲಿ ಪುತ್ರ ನಿಖಿಲ್ ಸೋಲಿಗೆ ಕಾರಣಗಳೇನು? ಎನ್​ಡಿಎ ಎಡವಿದ್ದೆಲ್ಲಿ?

ಸಿಪಿ ಯೋಗೇಶ್ವರ್ ಅವರು ಕಳೆದ ಎರಡೂ ಬಾರಿ ಕುಮಾರಸ್ವಾಮಿ ವಿರುದ್ಧ ಸೋಲುಕಂಡಿದ್ದರೂ ಸಹ ಅನಿತಾ ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಿದ್ದಾರೆ. ಅದರಲ್ಲೂ 2024ರ ಉಪ ಚುನಾವಣೆಯನ್ನು ಎಚ್. ಡಿ. ಕುಮಾರಸ್ವಾಮಿ ಪ್ರತಿಷ್ಠೆಯಾಗಿ ತೆಗೆದುಕೊಂಡು ಪುತ್ರನನ್ನು ಗೆಲ್ಲಿಸಬೇಕು ಎಂದು ಪಣ ತೊಟ್ಟಿದ್ದರು. ಆದರೆ ಡಿಕೆ ಬ್ರದರ್ಸ್​​ ಹೆಣೆದ ತಂತ್ರದಿಂದ ದಳಪತಿಗಳ ಎಲ್ಲಾ ಲೆಕ್ಕಚಾರಗಳು ಉಲ್ಟಾ ಆಗಿದೆ.

ಕುಮಾರಸ್ವಾಮಿ ವಿರುದ್ಧ ಎರಡು ಬಾರಿ ಸೋಲು

ಯೋಗೇಶ್ವರ್​ ಅವರು ಕುಮಾರಸ್ವಾಮಿ ವಿರುದ್ಧ ಇದೇ ಚನ್ನಪಟ್ಟಣದಲ್ಲಿ ಎರಡು ಬಾರಿ ಸೋತ್ತಿದ್ದರು. 2018ರ ಚುನಾವಣೆಯಲ್ಲಿ ಜೆಡಿಎಸ್‌ನ ಎಚ್. ಡಿ. ಕುಮಾರಸ್ವಾಮಿ 87,995 ಮತಗಳನ್ನು ಪಡೆದಿದ್ದರು. ಬಿಜೆಪಿಯ ಸಿ. ಪಿ. ಯೋಗೇಶ್ವರ 66,465 ಮತಗಳನ್ನು ಪಡೆದು ಕುಮಾರಸ್ವಾಮಿ ವಿರುದ್ಧ ಸೋಲು ಕಂಡಿದ್ದರು. 2023ರಲ್ಲಿ ಸಿ. ಪಿ. ಯೋಗೇಶ್ವರ ಬಿಜೆಪಿಯಿಂದ ಕಣಕ್ಕಿಳಿದು 80,677 ಮತಗಳನ್ನು ಪಡೆದಿದ್ದರೆ, ಎಚ್. ಡಿ. ಕುಮಾರಸ್ವಾಮಿ 96,592 ಮತಗಳನ್ನು ಪಡೆದು ಜಯಗಳಿಸಿದ್ದರು.

ಎಚ್​ಡಿಕೆ ವಿರುದ್ಧದ 2 ಸೋಲಿನ ಸೇಡು ತೀರಿಸಿಕೊಂಡ ಸೈನಿಕ

ಚನ್ನಪಟ್ಟಣದಲ್ಲಿ ಸಿ. ಪಿ. ಯೋಗೇಶ್ವರ 2013ರ ಚುನಾವಣೆಯಲ್ಲಿ ಜೆಡಿಎಸ್​​ ಅಭ್ಯರ್ಥಿಯಾಗಿದ್ದ ಅನಿತಾ ಕುಮಾರಸ್ವಾಮಿಯನ್ನು ಸೋಲಿಸಿದ್ದರು. ಅನಿತಾ ಕುಮಾರಸ್ವಾಮಿ 73,635 ಮತಗಳನ್ನು ಪಡೆದುಕೊಂಡಿದ್ದರೆ, ಸಮಾಜವಾದಿ ಪಕ್ಷದಿಂದ ಕಣಕ್ಕಿಳಿದಿದ್ದ ಸಿ. ಪಿ. ಯೋಗೇಶ್ವರ 80,099 ಮತಗಳನ್ನು ಪಡೆದು ಜಯಗಳಿಸಿದ್ದರು. ನಂತರ ಕುಮಾರಸ್ವಾಮಿ 2018 ಮತ್ತು 2023 ವಿಧಾನಸಭೆ ಚುನಾವಣೆಯಲ್ಲಿ ಯೋಗೇಶ್ವರ್​ ಅವರನ್ನು ಸೋಲಿಸಿದ್ದರು. ಇದೀಗ ಉಪಚುನಾವಣೆಯಲ್ಲಿ ಯೋಗೇಶ್ವರ್ ಮತ್ತೆ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಅವರನ್ನು​ ಸೋಲಿಸಿದ್ದಾರೆ. ತಾಯಿ ಮಗನಿಗೆ ಸೋಲಿನ ರುಚಿ ತೋರಿಸುವ ಮೂಲಕ ಕುಮಾರಸ್ವಾಮಿ ವಿರುದ್ಧದ 2 ಸೋಲಿಗೆ ಸೇಡು ತೀರಿಸಿಕೊಂಡಿದ್ದಾರೆ. ಅಲ್ಲಿಗೆ ಲೆಕ್ಕ ಚುಪ್ತವಾದಂತಾಗಿದೆ.

Published On - 7:36 pm, Sat, 23 November 24

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್