ಕೊವಿಡ್ ನಿಯಮ ಉಲ್ಲಂಘಿಸಿದ ಸಚಿವ ಸಿ.ಪಿ.ಯೋಗೇಶ್ವರ್; ದೇವಸ್ಥಾನದಲ್ಲಿ ಕೇಕ್ ಕತ್ತರಿಸಿ ಪತ್ನಿ ಹುಟ್ಟುಹಬ್ಬ ಆಚರಣೆ

ಕೊವಿಡ್ ಲಾಕ್​ಡೌನ್​ನಿಂದಾಗಿ ದೇವಾಲಯಗಳು ಬಾಗಿಲು ಮುಚ್ಚಿವೆ. ನಾಲ್ಕಕ್ಕಿಂತ ಹೆಚ್ಚು ಮಂದಿ ಒಟ್ಟಿಗೆ ಸೇರುವಂತಿಲ್ಲ ಎಂಬ ನಿಯಮಗಳನ್ನು ಬಿಜೆಪಿ ಸರಕಾರವೇ ವಿಧಿಸಿದೆ. ಆದರೆ ಸಚಿವರು ತಮ್ಮ ಪತ್ನಿಯ ಹುಟ್ಟುಹಬ್ಬಕ್ಕಾಗಿ ಈ ಎಲ್ಲ ನಿಮಯಗಳನ್ನು ಉಲ್ಲಂಘಿಸಿದ್ದಾರೆ.

ಕೊವಿಡ್ ನಿಯಮ ಉಲ್ಲಂಘಿಸಿದ ಸಚಿವ ಸಿ.ಪಿ.ಯೋಗೇಶ್ವರ್; ದೇವಸ್ಥಾನದಲ್ಲಿ ಕೇಕ್ ಕತ್ತರಿಸಿ ಪತ್ನಿ ಹುಟ್ಟುಹಬ್ಬ ಆಚರಣೆ
ಸಿ.ಪಿ.ಯೋಗೇಶ್ವರ್
Follow us
TV9 Web
| Updated By: sandhya thejappa

Updated on:Jun 21, 2021 | 5:43 PM

ರಾಮನಗರ: ಕೊವಿಡ್ ನಿಯಮಗಳನ್ನು ಪಾಲಿಸಬೇಕಿದ್ದ ಸಚಿವರೆ, ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಅದು ತಮ್ಮ ಪತ್ನಿಯ ಹುಟ್ಟುಹಬ್ಬಕ್ಕಾಗಿ ಕೊವಿಡ್ ನಿಯಮ ಉಲ್ಲಂಘಿಸಿರುವುದು ವಿವಾದಕ್ಕೀಡಾಗಿದೆ. ಸಚಿವ ಸಿ.ಪಿ.ಯೋಗೇಶ್ವರ್ ಅವರ ಪತ್ನಿ ಶೀಲಾ ಯೋಗೇಶ್ವರ್ ಅವರು ಭಾನುವಾರ ತಮ್ಮ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಅದು ರಾಮನಗರ ಜಿಲ್ಲೆ ಚನ್ನಪಟ್ಟಣ ನಗರದ ಮಹದೇಶ್ವರ ದೇವಾಲಯದ ಆವರಣದಲ್ಲಿ. ಇದಕ್ಕೆ ಹತ್ತಾರು ಮಂದಿ ಕಾರ್ಯಕರ್ತರು ಸಹ ಸಾಕ್ಷಿಯಾಗಿದ್ದರು. ಈ ಪ್ರಕರಣ ಸದ್ಯ ವಿವಾದಕ್ಕೆ ಕಾರಣವಾಗಿದೆ.

ಕೊವಿಡ್ ಲಾಕ್​ಡೌನ್​ನಿಂದಾಗಿ ದೇವಾಲಯಗಳು ಬಾಗಿಲು ಮುಚ್ಚಿವೆ. ನಾಲ್ಕಕ್ಕಿಂತ ಹೆಚ್ಚು ಮಂದಿ ಒಟ್ಟಿಗೆ ಸೇರುವಂತಿಲ್ಲ ಎಂಬ ನಿಯಮಗಳನ್ನು ಬಿಜೆಪಿ ಸರಕಾರವೇ ವಿಧಿಸಿದೆ. ಆದರೆ ಸಚಿವರು ತಮ್ಮ ಪತ್ನಿಯ ಹುಟ್ಟುಹಬ್ಬಕ್ಕಾಗಿ ಈ ಎಲ್ಲ ನಿಮಯಗಳನ್ನು ಉಲ್ಲಂಘಿಸಿದ್ದಾರೆ. ಸಾರ್ವಜನಿಕರು ತಿಳಿಯದೇ ರಸ್ತೆಗಿಳಿದರೂ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಅದರಂತೆ ಇದೀಗ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿ ಬಂದಿದೆ.

ಹುಟ್ಟುಹಬ್ಬದ ಸಮಾರಂಭದಲ್ಲಿ ಭಾಗವಹಿಸಿದ್ದ ಬಿಜೆಪಿ ಕಾರ್ಯಕರ್ತರು ಹಾಗು ಸಿಪಿವೈ ಬೆಂಬಲಿಗರಲ್ಲಿ ಯಾರೊಬ್ಬರು ಸಹ ಮಾಸ್ಕ್ ಧರಿಸಿರಲಿಲ್ಲ. ಸಾಮಾಜಿಕ ಅಂತರವನ್ನು ಕಾಪಾಡಿಕೊಂಡಿರಲಿಲ್ಲ ಎಂಬುದು ವಿರ್ಪಯಾಸವಾಗಿದೆ. ಪತ್ನಿ ಜೊತೆ ಕೇಕ್ ಕಟ್ ಮಾಡಿದ ನಂತರ ಸಚಿವ ಯೋಗೇಶ್ವರ್ ದೇವಸ್ಥಾನದ ಆವರಣದಲ್ಲಿ ಕಾರ್ಯಕರ್ತರ ಸಭೆ ಕೂಡ ನಡೆಸಿದ್ದಾರೆ. ಈ ಬಗ್ಗೆ ಸಚಿವರು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಸಚಿವ ಸಿ.ಪಿ.ಯೋಗೇಶ್ವರ್ ಅವರು ದೇವಸ್ಥಾನದಲ್ಲಿ ಹುಟ್ಟು ಆಚರಿಸುವ ಬಗ್ಗೆ ಮಾಹಿತಿ ಬಂದಿದೆ. ಈ ಬಗ್ಗೆ ಪರಿಶೀಲನೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ರಾಮನಗರ ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ

ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ: ಡಿಸಿ ನಿವಾಸ ನವೀಕರಣ, ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣಕ್ಕೆ ಹೊಸ ತಿರುವು

ನಮ್ಮಲ್ಲಿರುವುದು ಒಂದೇ ಅಖಿಲ ಭಾರತ ಕಾಂಗ್ರೆಸ್ ಬಣ; ನಾನೆಲ್ಲೂ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿಲ್ಲ: ಸಿದ್ದರಾಮಯ್ಯ

(CP Yogeshwar celebrates birthday of his wife in violation of covid rules in ramanagar)

Published On - 5:40 pm, Mon, 21 June 21

‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ