AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್​ವೈರನ್ನು ಟಾರ್ಗೆಟ್ ಮಾಡಿದರೆ ನಾವೇ ಸುಟ್ಟು ಹೋಗ್ತೀವಿ; ಸಚಿವ ಸಿ.ಪಿ.ಯೋಗೇಶ್ವರ್

ಪರೀಕ್ಷೆ ಬರೆದು ಉತ್ತರಕ್ಕಾಗಿ ನಾನು ಅಂಜನಾದ್ರಿಗೆ ಭೇಟಿ ನೀಡಿಲ್ಲ. ಅದಕ್ಕೂ ಇದಕ್ಕೂ ಸಂಬಂಧ ಇಲ್ಲ ಎಂದ ಯೋಗೇಶ್ವರ್, ಪರೀಕ್ಷೆ ಫಲಿತಾಂಶ ಯಾವಾಗ ಬರತ್ತದೆ ಎಂದು ಗೊತ್ತಿಲ್ಲ. ದೊಡ್ಡವರು ತೀರ್ಮಾನ ಮಾಡುತ್ತಾರೆ ಎಂದರು. ನಾನು, ಬಸನಗೌಡ ಪಾಟೀಲ್ ಯತ್ನಾಳ್ ಸಮಕಾಲೀನರು. ಹೀಗಾಗಿ ಅವರ ಕ್ಷೇತ್ರಕ್ಕೆ ಹೋಗಿ ಭೇಟಿ ಮಾಡಿದ್ದೇನೆ ಎಂದು ತಿಳಿಸಿದರು.

ಬಿಎಸ್​ವೈರನ್ನು ಟಾರ್ಗೆಟ್ ಮಾಡಿದರೆ ನಾವೇ ಸುಟ್ಟು ಹೋಗ್ತೀವಿ; ಸಚಿವ ಸಿ.ಪಿ.ಯೋಗೇಶ್ವರ್
ಸಚಿವ ಸಿ.ಪಿ.ಯೋಗೇಶ್ವರ್
TV9 Web
| Edited By: sandhya thejappa|

Updated on:Jun 30, 2021 | 10:54 AM

Share

ಕೊಪ್ಪಳ: ಯಡಿಯೂರಪ್ಪ ಬೀಳಿಸಲು ರಾಜಕೀಯ ವಿರೋಧಿಗಳು ಒಂದಾಗುತ್ತೀರಾ ಎಂದು ಟಿವಿ9 ಕೇಳಿದ ಪ್ರಶ್ನೆಗೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಟಾರ್ಗೆಟ್ ಮಾಡಿದರೆ ನಾವೇ ಸುಟ್ಟು ಹೋಗ್ತೀವಿ ಎಂದು ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತದಲ್ಲಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದರು. ಯಡಿಯೂರಪ್ಪ ಪದಚ್ಯುತಿ ಮಾಡುವ ಕೆಲಸ ಮಾಡುತ್ತಿಲ್ಲ. ನಮ್ಮ ಆಂತರಿಕ ಸಮಸ್ಯೆ ಹೇಳಿಕೊಳ್ಳಲು ಹೋಗುತ್ತಿದ್ದೇವೆ. ಡಿ.ಕೆ.ಶಿವಕುಮಾರ್ ಎಂದಿಗೂ ರಾಜಕೀಯ ವಿರೋಧಿಗಳೇ ಎಂದು ತಿಳಿಸಿದರು.

ಪರೀಕ್ಷೆ ಬರೆದು ಉತ್ತರಕ್ಕಾಗಿ ನಾನು ಅಂಜನಾದ್ರಿಗೆ ಭೇಟಿ ನೀಡಿಲ್ಲ. ಅದಕ್ಕೂ ಇದಕ್ಕೂ ಸಂಬಂಧ ಇಲ್ಲ ಎಂದ ಯೋಗೇಶ್ವರ್, ಪರೀಕ್ಷೆ ಫಲಿತಾಂಶ ಯಾವಾಗ ಬರತ್ತದೆ ಎಂದು ಗೊತ್ತಿಲ್ಲ. ದೊಡ್ಡವರು ತೀರ್ಮಾನ ಮಾಡುತ್ತಾರೆ ಎಂದರು. ನಾನು, ಬಸನಗೌಡ ಪಾಟೀಲ್ ಯತ್ನಾಳ್ ಸಮಕಾಲೀನರು. ಹೀಗಾಗಿ ಅವರ ಕ್ಷೇತ್ರಕ್ಕೆ ಹೋಗಿ ಭೇಟಿ ಮಾಡಿದ್ದೇನೆ ಎಂದು ತಿಳಿಸಿದರು.

ರಮೇಶ್ ಜಾರಕಿಹೊಳಿ ದೆಹಲಿಗೆ ಹೋಗಿರುವುದು ನನಗೆ ಗೊತ್ತಿಲ್ಲ. ಜಾರಕಿಹೊಳಿ ನನಗೆ ಸಿಕ್ಕಿಲ್ಲ. ಆದರೆ ಸಂಪರ್ಕದಲ್ಲಿದ್ದಾರೆ. ಅವರಿಗೆ ಬಿಜೆಪಿಯಲ್ಲಿ ಯಾರು ಅನ್ಯಾಯ ಮಾಡಿದ್ದಾರೆ ಎಂಬುವದನ್ನು ಅವರ ಬಳಿಯೇ ಕೇಳಬೇಕು ಎಂದು ಸಚಿವರು ತಿಳಿಸಿದರು.

ಅಂಜನಾದ್ರಿಗೆ ದೇಶದ್ಯಾಂತ ಪ್ರವಾಸಿಗರ ದಂಡು ಬರುತ್ತಿದೆ. ಇದರ ಸಂಪೂರ್ಣ ಅಭಿವೃದ್ದಿ ಆಗಬೇಕಿದೆ. ಹನುಮ ಹುಟ್ಟಿದ್ದು ಇಲ್ಲೆ ಎನ್ನುವುದಕ್ಕೆ ಅನೇಕ ದಾಖಲೆಗಳಿವೆ. ಎಲ್ಲ ಪುರಾವೆಗಳು, ಕುರುಹುಗಳಿವೆ. ಟಿಟಿಡಿ ಅವರ ವಾದ ಇರಬಹುದು. ಆದರೆ ಅಂಜನಾದ್ರಿನೇ ಹನುಮ ಹುಟ್ಟಿದ ಮೂಲ ಸ್ಥಳ. ಅಂಜನಾದ್ರಿ ಅಭಿವೃದ್ಧಿಗೆ ಸರ್ಕಾರ ಯೋಚನೆ ಮಾಡುತ್ತಿದೆ. ಇದಕ್ಕೆ ಸಣ್ಣ ಪುಟ್ಟ ಹಣ ಸಾಲಲ್ಲ. ಪ್ರವಾಸೋದ್ಯಮ, ಧಾರ್ಮಿಕ ದೃಷ್ಟಿಯಿಂದ ಇದು ಮಹತ್ವದ ಕ್ಷೇತ್ರ ಎಂದು ಯೋಗೇಶ್ವರ್ ಅಭಿಪ್ರಾಯಪಟ್ಟರು.

ನಿಯಮ ಉಲ್ಲಂಘಿಸಿ ದೇವಾಲಯಕ್ಕೆ ಭೇಟಿ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸಿದ ಸಚಿವ ಸಿ.ಪಿ.ಯೋಗೇಶ್ವರ್ ಕೊರೊನಾ ನಿಯಮ ಉಲ್ಲಂಘಿಸಿದ್ದಾರೆ. ಕೊರೊನಾ ಹಿನ್ನೆಲೆ ಜಿಲ್ಲಾಡಳಿತ ದೇವಾಲಯಕ್ಕೆ ಜನರ ಭೇಟಿಗೆ ನಿಷೇಧ ಹೇರಿತ್ತು. ಜಿಲ್ಲಾಡಳಿತ ನಿಷೇಧ ವಿಧಿಸಿದ್ದರೂ ಸಿ.ಪಿ.ಯೋಗೇಶ್ವರ್ ದೇವಾಲಯಕ್ಕೆ ಹೋಗಿದ್ದಾರೆ. ಇವರಿಗೆ ಸ್ಥಳೀಯ ಬಿಜೆಪಿ ಮುಖಂಡರು ಸಾಥ್ ನೀಡಿದ್ದಾರೆ.

ಇದನ್ನೂ ಓದಿ

Coronavirus cases in India: 45,951 ಹೊಸ ಕೊವಿಡ್ ಪ್ರಕರಣ ಪತ್ತೆ, 5.57 ಲಕ್ಷಕ್ಕೆ ಇಳಿದ ಸಕ್ರಿಯ ಪ್ರಕರಣ

ಹೃದಯವೇ ಇಲ್ಲದೆ 555 ದಿನ ಕಳೆದ ಪುಣ್ಯಾತ್ಮ; ಕೃತಕ ಹೃದಯ ಹೊತ್ತು ದಾನಿಗಳಿಗೆ ಕಾದವನು ಕೊನೆಗೂ ಗೆದ್ದೇಬಿಟ್ಟ

(CP Yogeshwar says if BS Yediyurappa is targeted we will burn ourselves in koppal)

Published On - 10:53 am, Wed, 30 June 21

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?