ಚನ್ನಪಟ್ಟಣ ಕೈ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ: ದಳ ಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಇದೇ ಶಕ್ತಿ ಪ್ರದರ್ಶನಕ್ಕಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ದಾಳ ಉರುಳಿಸಿದ್ದರು. ಸಿಪಿ ಯೋಗೇಶ್ವರ್‌ರನ್ನ ಪಕ್ಷಕ್ಕೆ ಕರೆತರುವಲ್ಲಿ ಅವರ ಆಪರೇಷನ್‌ ಯಶಸ್ವಿಯಾಗಿದೆ. ಇದೀಗ ದಳಪತಿಗಳ ಕೋಟೆಯಲ್ಲಿ ಪವರ್ ಶೋ ನಡೆಸಿ, ಜೆಡಿಎಸ್ ನಾಯಕರಿಗೆ ಟಕ್ಕರ್ ಕೊಟ್ಟಿದ್ದಾರೆ. ಯೋಗೇಶ್ವರ್ ಕಾಂಗ್ರೆಸ್​ನಿಂದ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಚನ್ನಪಟ್ಟಣ ಕೈ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ: ದಳ ಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ
ಕಾಂಗ್ರೆಸ್ ರೋಡ್ ಶೋ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: Digi Tech Desk

Updated on:Oct 24, 2024 | 2:51 PM

ಚನ್ನಪಟ್ಟಣ, ಅಕ್ಟೋಬರ್ 24: ಬಿಜೆಪಿ, ಜೆಡಿಎಸ್ ಮಿತ್ರಪಕ್ಷಗಳ ನಾಯಕರ ಟಿಕೆಟ್ ಗುದ್ದಾಟವನ್ನೇ ಅಸ್ತ್ರ ಮಾಡಿಕೊಂಡ ಕಾಂಗ್ರೆಸ್ ಪಡೆ ಸಿಪಿ ಯೋಗೇಶ್ವರ್‌ರನ್ನ ಪಕ್ಷಕ್ಕೆ ಸೆಳೆದಿದ್ದರ ಜತೆಗೆ, ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ದಳಪತಿಗಳ ಸಾಮ್ರಾಜ್ಯ ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದು, ಅಸಲಿ ಯುದ್ಧಕ್ಕೆ ರಣಕಹಳೆ ಊದಿದ್ದಾರೆ.

ಚನ್ನಪಟ್ಟಣದಲ್ಲೇ ತಂಗಿದ್ದ ಸಿಪಿವೈ ಮಂಗಳವಾರಪೇಟೆಯಲ್ಲಿರುವ ಬಸವನಗುಡಿಯಲ್ಲಿ ಪೂಜೆ ಸಲ್ಲಿಸಿ ಒಂದೂವರೆ ಕಿಲೋ ಮೀಟರ್ ಱಲಿ ನಡೆಸಿದರು. ಱಲಿಯಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡರು. ಱಲಿಯುದ್ದಕ್ಕೂ ಘೋಷಣೆ ಮೊಳಗಿಸಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಂಸದ ಡಿಕೆ ಸುರೇಶ್ ಱಲಿಯಲ್ಲಿ ಪಾಲ್ಗೊಂಡರು.

ರೋಡ್‌ ಶೋ ವೇಳೆ ಹಿಂದೆ ನಿಂತಿದ್ದ ಸಿಪಿ ಯೋಗೇಶ್ವರ್‌ರನ್ನ ಗಮನಿಸಿದ ಸಿಎಂ ಮುಂದೆ ಕರೆದರು. ಈ ವೇಳೆ, ‘ಇರಲಿ ಪರವಾಗಿಲ್ಲ ನಿಲ್ಲಿ ಸರ್’ ಅಂತಾ ಯೋಗೇಶ್ವರ್ ಹೇಳಿದ್ದಾರೆ.

ರೋಡ್ ಶೋ ಮೂಲಕ ಚನ್ನಪಟ್ಟಣ ತಾಲೂಕು ಕಚೇರಿಗೆ ಆಗಮಿಸಿದ ಸಿಪಿ ಯೋಗೇಶ್ವರ್ ಉಮೇದುವಾರಿಕೆ ಸಲ್ಲಿಸಿದರು. ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರು ಶಾಸಕರು ಉಪಸ್ಥಿತರಿದ್ದರು.

ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ: ಸಿಪಿ ಯೋಗೇಶ್ವರ್

ನಾಮಪತ್ರ ಸಲ್ಲಿಕೆಗೂ ಮುನ್ನ ‘ಟಿವಿ9’ ಜೊತೆ ಎಕ್ಸ್‌ಕ್ಲೂಸಿವ್ ಆಗಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್, ಬಿಜೆಪಿ ನನಗೆ ಟಿಕೆಟ್ ಕೊಡಲ್ಲ ಎಂಬುದು ಗೊತ್ತಿತ್ತು. ನಿನ್ನೆವರೆಗೂ ಕಾದಿದ್ದೆ ಎಂದರು. ಅಲ್ಲದೆ, ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿತ್ತು. ಒಂದೆರಡು ದಿನ ಕಾದಿದ್ದರೆ, ರಾಜಕೀಯವಾಗಿ ನನ್ನ ಮುಗಿಸುವ ಸಂಚು ಹೂಡಲಾಗಿತ್ತು ಎಂದು ಆರೋಪಿಸಿದರು.

ಸಿಪಿವೈ ಬಂದಿದ್ದಕ್ಕೆ ಚನ್ನಪಟ್ಟಣ ಕಾಂಗ್ರೆಸ್‌ನಲ್ಲಿ ಅಸಮಾಧಾನ ಎಂಬ ಚರ್ಚೆಗೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಸುರೇಶ್, ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದರು. ಚನ್ನಪಟ್ಟಣದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು.

ಇದನ್ನೂ ಓದಿ: ಚನ್ನಪಟ್ಟಣ, ಸಂಡೂರು ಬೈ ಎಲೆಕ್ಷನ್​: ಸಿಪಿ ಯೋಗೇಶ್ವರ್‌, ಅನ್ನಪೂರ್ಣ ತುಕಾರಾಂಗೆ ಕಾಂಗ್ರೆಸ್​ ಟಿಕೆಟ್‌

ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ ನಾಮಪತ್ರ

ಸಂಡೂರು ಅಖಾಡದಿಂದ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ ನಾಮಪತ್ರ ಸಲ್ಲಿಸಿದ್ದಾರೆ. ಸಂಡೂರಿನ ಎಪಿಎಂಸಿಯಿಂದ ತಾಲೂಕು ಕಚೇರಿವರೆಗೆ ಬೃಹತ್ ರೋಡ್ ಶೋ ನಡೆಸಿ ಶಕ್ತಿ ಪ್ರದರ್ಶನ ಮಾಡಿದರು. ಈ ವೇಳೆ ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್, ಸಚಿವ ಸಂತೋಷ್ ಲಾಡ್, ಸಂಸದ ತುಕಾರಾಂ ಮಾಜಿ ಸಚಿವ ನಾಗೇಂದ್ರ, ಸೇರಿದಂತೆ ಕೈ ನಾಯಕರು ಭಾಗಿಯಾಗಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:40 pm, Thu, 24 October 24

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ