ಮನೆ ಮೇಲೆ ತುಂಡಾಗಿ ಬಿದ್ದ ಕ್ರೇನ್: ಐವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ
ಬೃಹತ್ ಗಾತ್ರದ ಕ್ರೇನ್ ಮುರಿದು ಮನೆ ಮೇಲೆ ಬಿದ್ದ ಪರಿಣಾಮ ಐವರು ಗಾಯಗೊಂಡು, ಓರ್ವನ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಬೆಂಗಳೂರಿನ ಕೆ.ಆರ್.ಪುರಂನಲ್ಲಿ ನಡೆದಿದೆ. ನವಸತಿ ಪ್ರದೇಶದಲ್ಲಿ ಅನುಮತಿಯಿಲ್ಲದೆ ಕಾರ್ಯನಿರ್ವಹಿಸುತ್ತಿದ್ದ ಕ್ರೇನ್ ಬಗ್ಗೆ ಹತ್ತಾರು ಬಾರಿ ಪೊಲೀಸ್ ಠಾಣೆ, ಪಾಲಿಕೆ ಅಧಿಕಾರಿಗಳಿಗೆ ದೂರು ನೀಡಲಾಗಿತ್ತು. ಆದರೂ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳದ ಕಾರಣ ಅನಾಹುತ ನಡೆದಿದೆ ಎಂದು ಸ್ಥಳೀಯರು ದೂರಿದ್ದಾರೆ.
ಬೆಂಗಳೂರು, ಅಕ್ಟೋಬರ್ 12: ಬೃಹತ್ ಗಾತ್ರದ ಕ್ರೇನ್ ತುಂಡಾಗಿ ಮನೆ ಮೇಲೆ ಬಿದ್ದ ಪರಿಣಾಮ ಐವರು ಗಾಯಗೊಂಡು, ಓರ್ವನ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಬೆಂಗಳೂರಿನ ಕೆ.ಆರ್. ಪುರಂನಲ್ಲಿ ನಡೆದಿದೆ. ಲಾಲು (30), ಕುರ್ಬನ್ (19), ಇಲಿಯಾಜ್ (38), ಸಮೀಮ್ (28) ಮತ್ತು ಶಾಮದೇವ್ (52) ಗಾಯಗೊಂಡವರಾಗಿದ್ದು, ಭಟ್ಟರಹಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಜನವಸತಿ ಪ್ರದೇಶದಲ್ಲಿ ಅನುಮತಿಯಿಲ್ಲದೆ ಕಾರ್ಯನಿರ್ವಹಿಸುತ್ತಿದ್ದ ಕ್ರೇನ್ ಬಗ್ಗೆ ಹತ್ತಾರು ಬಾರಿ ಪೊಲೀಸ್ ಠಾಣೆ, ಪಾಲಿಕೆ ಅಧಿಕಾರಿಗಳಿಗೆ ದೂರು ನೀಡಲಾಗಿತ್ತು. ಆದರೂ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳದ ಕಾರಣ ಅನಾಹುತ ನಡೆದಿದೆ ಎಂದು ಸ್ಥಳೀಯರು ದೂರಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
