AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣ ಸುಡೋಕು ಹೆಣಗಾಟ ಶುರು? ಬೇಡಿಕೆ ಈಡೇರಿಲ್ಲ ಅಂದರೆ ಹೋರಾಟ ಮಾಡ್ತೀವಿ ಎಂದ ಚಿತಾಗಾರ ಸಿಬ್ಬಂದಿ!

ಹಲವು ಬೇಡಿಕೆ ಈಡೇರಿಸುವಂತೆ ಚಿತಾಗಾರ ಸಿಬ್ಬಂದಿಗಳ ಪಟ್ಟು ಹಿಡಿದಿದ್ದಾರೆ. ಬೇಡಿಕೆಯನ್ನು ಬಿಬಿಎಂಪಿ ಮುಂದಿಟ್ಟಿದ್ದಾರೆ. ಬೇಡಿಕೆ ಈಡೇರಿಸದಿದ್ದರೆ ಮೃತದೇಹ ದಹನ ಮಾಡದೇ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಹೆಣ ಸುಡೋಕು ಹೆಣಗಾಟ ಶುರು? ಬೇಡಿಕೆ ಈಡೇರಿಲ್ಲ ಅಂದರೆ ಹೋರಾಟ ಮಾಡ್ತೀವಿ ಎಂದ ಚಿತಾಗಾರ ಸಿಬ್ಬಂದಿ!
ಚಿತಾಗಾರ (ಪ್ರಾತಿನಿಧಿಕ ಚಿತ್ರ)
Follow us
ಆಯೇಷಾ ಬಾನು
|

Updated on: Apr 23, 2021 | 11:14 AM

ಬೆಂಗಳೂರು: ಕಣ್ಣಿಗೆ ಕಾಣದಂತೆ ಗುಪ್ತಗಾಮಿನಿಯಂತೆ ಎಲ್ಲೆಡೆ ಹರಿದಾಡುತ್ತಿರುವ ಕೊರೊನಾ ತನ್ನ 2ನೇ ಅಲೆಯಲ್ಲಿ ಹೆಚ್ಚಿನ ಪ್ರಭಾವ ಬೀರುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಇದರ ಪ್ರತಾಪ ಹೆಚ್ಚಾಗಿದ್ದು ಸಾವು-ನೋವುಗಳು ಹೆಚ್ಚಿವೆ. ಇದರ ಜೊತೆಗೆ ಇನ್ನು ಮುಂದೆ ಮೃತದೇಹ ಸುಡೋದಕ್ಕು ಹೆಣಗಾಟ ಶುರುವಾಗಬಹುದು ಏಕೆಂದರೆ ಉಗ್ರ ಹೋರಾಟ ಮಾಡುವುದಾಗಿ ಚಿತಾಗಾರ ಸಿಬ್ಬಂದಿ ಎಚ್ಚರಿಕೆ ಕೊಟ್ಟಿದ್ದಾರೆ.

ನಿನ್ನೆ ಬೆಂಗಳೂರಿನಲ್ಲಿ ಒಂದೇ ದಿನ ಬರೋಬ್ಬರಿ 15,244 ಜನರಿಗೆ ಕೊರೊನಾ ಸೋಂಕು ತಗುಲಿದ್ದು 68 ಮಂದಿ ಬಲಿಯಾಗಿದ್ದಾರೆ. ನಗರದಲ್ಲಿ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಬೆಂಗಳೂರಿನಲ್ಲಿ 7 ಚಿತಾಗಾರಗಳಲ್ಲಿ ನಿರಂತರವಾಗಿ ಶವ ಸಂಸ್ಕಾರ ಮಾಡಲಾಗುತ್ತಿದೆ. ರಾತ್ರಿ ಹಗಲು ಶವಗಳನ್ನು ವಿದ್ಯುತ್‌ ಚಿತಾಗಾರದಲ್ಲಿ ಸುಡಲಾಗುತ್ತಿದೆ. ಮೇಡಿ ಅಗ್ರಹಾರ ಚಿತಾಗಾರದಲ್ಲಿ ಹತ್ತಕ್ಕೂ ಹೆಚ್ಚು ಆ್ಯಂಬುಲೆನ್ಸ್‌ಗಳು ಕ್ಯೂ ನಿಂತಿರುತ್ತವೆ. ಬನಶಂಕರಿಯ ಚಿತಾಗಾರದಲ್ಲಿ ಇದೇ ಪರಿಸ್ಥಿತಿ ಇಂದು ಕಂಡುಬರುತ್ತಿತ್ತು. ಮತ್ತೊಂದೆಡೆ ಸುಮ್ಮನಹಳ್ಳಿಯ ಚಿತಾಗಾರದಲ್ಲಿ ಪ್ರತಿದಿನ 30ಕ್ಕೂ ಹೆಚ್ಚು ಶವ ಸಂಸ್ಕಾರ ನಡೆಸಿದ್ರೂ ಕ್ಯೂ ಕಡಿಮೆಯಾಗುತ್ತಿಲ್ಲ. ಈ ನಡುವೆ ಹಲವು ಬೇಡಿಕೆ ಈಡೇರಿಸುವಂತೆ ಚಿತಾಗಾರ ಸಿಬ್ಬಂದಿಗಳ ಪಟ್ಟು ಹಿಡಿದಿದ್ದಾರೆ. ಬೇಡಿಕೆಯನ್ನು ಬಿಬಿಎಂಪಿ ಮುಂದಿಟ್ಟಿದ್ದಾರೆ.

ಬೇಡಿಕೆ ಈಡೇರಿಲ್ಲ ಅಂದರೆ ಹೋರಾಟ ಮಾಡ್ತೀವಿ ಚಿತಾಗಾರ ಸಿಬ್ಬಂದಿ ಬಿಬಿಎಂಪಿ ಮುಂದೆ ಹಲವು ಬೇಡಿಕೆಗಳನ್ನು ಇಟ್ಟಿದ್ದು‌ ಈಡೇರಿಸದಿದ್ದರೆ ಮೃತದೇಹ ದಹನ ಮಾಡದೇ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕೊವಿಡ್ನಿಂದ ಸತ್ತರೇ ವಾರವಿಡೀ ಮೃತದೇಹ ಇಟ್ಟು ಕಾಯುವ‌ ಸ್ಥಿತಿ ಬಂದರೂ ಬರಬಹುದು. ಬಿಬಿಎಂಪಿ ಎಚ್ವೆತ್ತಿಲ್ಲ ಅಂದರೆ ಸಂಕಷ್ಟ ಗ್ಯಾರಂಟಿ ಎಂದು ರುದ್ರಭೂಮಿ ನೌಕರರು ಬಿಬಿಎಂಪಿ ಮುಂದೆ ಹಲವು ಬೇಡಿಕೆ ಇಟ್ಟು ಎಚ್ಚರಿಕೆ ನೀಡಿದ್ದಾರೆ. ಸದ್ಯ 15 ದಿನದೊಳಗೆ ಬೇಡಿಕೆ ಈಡೇರಿಕೆ ಆಯುಕ್ತರು ಭರವಸೆ ಕೊಟ್ಟಿದ್ದಾರೆ. ಆದ್ರೆ ಬೇಡಿಕೆ ಈಡೇರದಿದ್ದರೆ ಚಿತಾಗಾರ ಬಂದ್ ಮಾಡಿ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈಗ ಮನೆ ಬಿಟ್ಟು ರಾತ್ರಿ ಇಡೀ ದಹನ ಕಾರ್ಯ ಮಾಡ್ತಿದ್ದೀವಿ. ಇದ್ದಕ್ಕಿದ್ದಂತೆ ಕೆಲಸ ನಿಲ್ಲಿಸಿದ್ರೆ ಜನರಿಗೆ ತೊಂದರೆ ಆಗುತ್ತದೆ. ಹಾಗಾಗಿ ಮಾನವೀಯತೆ ದೃಷ್ಟಿಯಿಂದ ಕೆಲಸ ಮಾಡ್ತಿದ್ದೀವಿ. 15 ದಿನ ಸಮಯಾವಕಾಶ ಕೂಡ ಕೊಟ್ಟಿದ್ದೀವಿ. ಬೇಡಿಕೆ ಈಡೇರಿಲ್ಲ ಅಂದರೆ ಹೋರಾಟ ಮಾಡ್ತೀವಿ ಎಂದು ಚಿತಾಗಾರ ಸಿಬ್ಬಂದಿ ರವಿ ತಿಳಿಸಿದ್ದಾರೆ.

ಬೇಡಿಕೆಗಳು – ರುದ್ರಭೂಮಿ ನೌಕರರನ್ನು ಡಿ ನೌಕರರಾಗಿ ಪರಿಣಗಣಿಸುವಂತೆ ಒತ್ತಾಯ -ಹೆಚ್ಚಿನ ವೇತನ, ಸಹಾಯಧನ, ಮನೆ, ಮಕ್ಕಳ ಉಚಿತ ವಿದ್ಯಾಭ್ಯಾಸ ನೀಡಬೇಕೆಂದು ಒತ್ತಾಯ -ಸಂಬಳ ಕೂಡ ಸರಿಯಾದ ಸಮಯಕ್ಕೆ ಆಗ್ತಾ ಇಲ್ಲ. ಹೀಗಾಗಿ ಅದು ನಿಗಧಿತ‌ಸಮಯಕ್ಕೆ ಆಗಬೇಕು.. ಇತ್ಯಾದಿ

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೆಚ್ಚಾಯ್ತು ಕೊರೊನಾ ಸೋಂಕಿತರ ಮರಣ ಪ್ರಮಾಣ; ಅಂತ್ಯಸಂಸ್ಕಾರಕ್ಕೆ 13 ಚಿತಾಗಾರಗಳಿಗೆ ಅನುಮತಿ ನೀಡಿದ ಸರ್ಕಾರ

ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು