KMF Nandini Logo: ಕೆಎಂಎಫ್​​ ನಂದಿನಿ ಲೋಗೋ ಇರುವ ಜೆರ್ಸಿ ಅನಾವರಣಗೊಳಿಸಿದ ಕ್ರಿಕೆಟ್ ಸ್ಕಾಟ್ಲೆಂಡ್

T20 World Cup 2024: ಮುಂಬರುವ ಟಿ20 ವಿಶ್ವಕಪ್‌ನಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಕ್ರಿಕೆಟ್ ತಂಡಗಳ ಪ್ರಾಯೋಜಕತ್ವವನ್ನು ಕರ್ನಾಟಕದ ಕೆಎಂಎಫ್​ ವಹಿಸಿಕೊಂಡಿದೆ. ಅದರಂತೆ, ನಂದಿನಿ ಲೋಗೋ ಇರುವ ಜೆರ್ಸಿಯನ್ನು ‘ಕ್ರಿಕೆಟ್ ಸ್ಕಾಟ್ಲೆಂಡ್’ ಬುಧವಾರ ಅನಾವರಣಗೊಳಿಸಿದೆ. ಇದೇ ವೇಳೆ, ಟೂರ್ನಿಯ ವೇಳೆ ಹಮ್ಮಿಕೊಳ್ಳಲಾಗುವ ಕಾರ್ಯಕ್ರಮಗಳ ಬಗ್ಗೆಯೂ ಕೆಎಂಎಫ್‌ನ ವ್ಯವಸ್ಥಾಪಕ ನಿರ್ದೇಶಕ ಎಂಕೆ ಜಗದೀಶ್ ಮಾಹಿತಿ ನೀಡಿದ್ದಾರೆ.

KMF Nandini Logo: ಕೆಎಂಎಫ್​​ ನಂದಿನಿ ಲೋಗೋ ಇರುವ ಜೆರ್ಸಿ ಅನಾವರಣಗೊಳಿಸಿದ ಕ್ರಿಕೆಟ್ ಸ್ಕಾಟ್ಲೆಂಡ್
ಕೆಎಂಎಫ್​​ ನಂದಿನಿ ಲೋಗೋ ಇರುವ ಜೆರ್ಸಿ ಅನಾವರಣಗೊಳಿಸಿದ ಕ್ರಿಕೆಟ್ ಸ್ಕಾಟ್ಲೆಂಡ್Image Credit source: @CricketScotland
Follow us
| Updated By: Digi Tech Desk

Updated on:May 16, 2024 | 12:31 PM

ಬೆಂಗಳೂರು, ಮೇ 16: ಕರ್ನಾಟಕ ಹಾಲು ಒಕ್ಕೂಟದ (KMF) ನಂದಿನಿ ಲೋಗೋ ಇರುವ (Nandini Logo) ಟಿ20 (T20 Team) ತಂಡದ ಜೆರ್ಸಿಯನ್ನು ‘ಕ್ರಿಕೆಟ್ ಸ್ಕಾಟ್ಲೆಂಡ್’ ಅನಾವರಣಗೊಳಿಸಿದೆ. ಬುಧವಾರ ನಡೆದ ಜಂಟಿ ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ ನಂದಿನಿ ಲೋಗೋ ಇರುವ ಜೆರ್ಸಿಯನ್ನು ಅನಾವರಣಗೊಳಿಸಲಾಯಿತು. 2024 ರ ಟಿ20 ವಿಶ್ವಕಪ್‌ನಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಕ್ರಿಕೆಟ್ ತಂಡಗಳ ಪ್ರಾಯೋಜಕತ್ವ ವಹಿಸುವುದಾಗಿ ಏಪ್ರಿಲ್ 21 ರಂದು ಕೆಎಂಎಫ್ ಘೋಷಿಸಿತ್ತು. ನಂದಿನಿಯ ಲೋಗೋವನ್ನು ಸ್ಕಾಟ್ಲೆಂಡ್ ತಂಡದ ಜೆರ್ಸಿಯ ತೋಳಿನ ಭಾಗದಲ್ಲಿ ಮುದ್ರಿಸಲಾಗಿದೆ.

ಸ್ಕಾಟ್ಲೆಂಡ್ ಪುರುಷರ ಟಿ20 ಕ್ರಿಕೆಟ್ ತಂಡದ ಉಪನಾಯಕ ಮ್ಯಾಥ್ಯೂ ಕ್ರಾಸ್ ಮತ್ತು ಬಲಗೈ ಮಧ್ಯಮ ವೇಗಿ ಕ್ರಿಸ್ ಸೋಲ್ ಜೆರ್ಸಿಯನ್ನು ಅನಾವರಣಗೊಳಿಸಿದರು.

ಟಿ20 ವಿಶ್ವಕಪ್​ನಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಕ್ರಿಕೆಟ್ ತಂಡಗಳ ಪ್ರಾಯೋಜಕತ್ವ ವಹಿಸುವುದು ಜಾಗತಿಕ ಮಾರುಕಟ್ಟೆಯಲ್ಲಿ ಉತ್ಪನ್ನಗಳ ಮಾರಾಟ ಹೆಚ್ಚಿಸುವ ದೃಷ್ಟಿಯಿಂದ ಪ್ರಮುಖ ನಿರ್ಧಾರವಾಗಿದೆ. ಬ್ರ್ಯಾಂಡ್ ಬಿಲ್ಡಿಂಗ್ ಪ್ರಕ್ರಿಯೆಯ ಪ್ರಮುಖ ತಂತ್ರಗಾರಿಕೆಯಾಗಿದೆ. ಪಂದ್ಯಾವಳಿಯ ಮೊದಲು ಮತ್ತು ಪಂದ್ಯ ನಡೆಯುತ್ತಿರುವ ಸಮಯದಲ್ಲಿ ಹಲವಾರು ಮಾಧ್ಯಮ ಚಟುವಟಿಕೆಗಳನ್ನು ಯೋಜಿಸಲಾಗಿದೆ. ಡೈರಿ ಉತ್ಪನ್ನಗಳಾದ ತುಪ್ಪ ಮತ್ತು ಸಿಹಿತಿಂಡಿಗಳನ್ನು ಅಮೆರಿಕಕ್ಕೆ ರವಾನಿಸಲಾಗುತ್ತದೆ ಎಂದು ಕೆಎಂಎಫ್‌ನ ವ್ಯವಸ್ಥಾಪಕ ನಿರ್ದೇಶಕ ಎಂಕೆ ಜಗದೀಶ್ ತಿಳಿಸಿದ್ದಾರೆ.

ಕ್ರಿಕೆಟ್ ಸ್ಕಾಟ್ಲೆಂಡ್ ಎಕ್ಸ್​ ಸಂದೇಶ

ನಾವು ಜಾಗತಿಕ ಬ್ರ್ಯಾಂಡ್‌ನೊಂದಿಗೆ ಪಾಲುದಾರಿಕೆ ಹೊಂದಿದ್ದೇವೆ. ಇದು ಇಂದು ನಾವು ಎಲ್ಲಿದ್ದೇವೆ ಮತ್ತು ಭವಿಷ್ಯದಲ್ಲಿ ನಾವು ಎಲ್ಲಿಗೆ ತಲುಪಲಿದ್ದೇವೆ ಎಂಬುದನ್ನು ಪ್ರತಿಬಿಂಬಿಸುತ್ತದೆ ಎಂದು ಕ್ರಿಕೆಟ್ ಸ್ಕಾಟ್ಲೆಂಡ್​​​ನ ಕಾರ್ಯಾಚರಣೆ ಮತ್ತು ವಾಣಿಜ್ಯ ವಿಭಾಗದ ಮುಖ್ಯಸ್ಥ ಪಾಲ್ ಮಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಟಿ20 ವಿಶ್ವಕಪ್​ನ 2 ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಜೆರ್ಸಿಗಳ ಛಾಯಾಚಿತ್ರಗಳು ಅಧಿಕೃತವಾಗಿ ಇಂದು ಬಿಡುಗಡೆಯಾಗುವ ನಿರೀಕ್ಷೆ ಇದೆ.

ಈ ಬಾರಿಯ ವಿಶ್ವಕಪ್​ ಟೂರ್ನಿಯನ್ನು ವೆಸ್ಟ್ ಇಂಡೀಸ್ ಹಾಗೂ ಅಮೆರಿಕ ಜಂಟಿಯಾಗಿ ಆಯೋಜಿಸಲಿದೆ. ಜೂನ್ 1 ರಿಂದ ಆರಂಭವಾಗಲಿರುವ ಟೂರ್ನಿಯ ಫೈನಲ್ ಪಂದ್ಯವು ಜೂನ್ 29 ರಂದು ನಡೆಯಲಿದೆ.

ಇದನ್ನೂ ಓದಿ: Nandini Milk: ಕೆಎಂಎಫ್​ಗೆ ಈಗ 50 ವರ್ಷದ ಇತಿಹಾಸ; ನಂದಿನಿ ಬ್ರ್ಯಾಂಡ್ ಶುರುವಾದ ಕಥೆ; ಅಮೂಲ್ ಅನ್ನು ಮೀರಿಸಬಲ್ಲುದಾ?

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:27 am, Thu, 16 May 24