ಕೋಲಾರದ ಲಕ್ಷ್ಮೀ ಖಾಸಗಿ ಆಸ್ಪತ್ರೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಕ್ರಿಕೆಟಿಗ ಇರ್ಫಾನ್ ಪಠಾನ್
ಕೋಲಾರದ ಲಕ್ಷ್ಮೀ ಖಾಸಗಿ ಆಸ್ಪತ್ರೆ ಬಗ್ಗೆ ಕ್ರಿಕೆಟಿಗ ಇರ್ಫಾನ್ ಪಠಾನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರುಗಾಳಾದ ಡಾ.ಗುಣ ಪ್ರಕಾಶ್, ಡಾ.ಜಗಮೋಹನ್. ಡಾ.ರಾಧ ಅವರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.
ಕೋಲಾರ: ಮಾಜಿ ಭಾರತೀಯ ಕ್ರಿಕೆಟಿಗ ಇರ್ಫಾನ್ ಪಠಾನ್ ಕೋಲಾರದ ಖಾಸಗಿ ಆಸ್ಪತ್ರೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಮೆಚ್ಚುಗೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೋಲಾರದ ಲಕ್ಷ್ಮೀ ಖಾಸಗಿ ಆಸ್ಪತ್ರೆ ಬಗ್ಗೆ ಕ್ರಿಕೆಟಿಗ ಇರ್ಫಾನ್ ಪಠಾನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರುಗಾಳಾದ ಡಾ.ಗುಣ ಪ್ರಕಾಶ್, ಡಾ.ಜಗಮೋಹನ್. ಡಾ.ರಾಧ ಅವರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಅದರಲ್ಲೂ ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಈ ವೈದ್ಯರುಗಳು ತಮ್ಮ ಕುಟುಂಬದಿಂದ ದೂರ ಉಳಿದುಕೊಂಡು ಕೊರೊನಾ ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡಿದ್ದಾರೆ, ಈ ಮೂಲಕ ಹಲವರು ಜನರ ಪ್ರಾಣಗಳನ್ನು ಉಳಿಸಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇರ್ಫಾನ್ ಪಠಾನ್ ಹೇಳಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇತ್ತೀಚಿಗೆ ವೈದ್ಯರಾದ ಗುಣಪ್ರಕಾಶ್ ಇರ್ಫಾನ್ ಪಠಾನ್ ಅವರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಕೋಲಾರದಲ್ಲಿನ ಕೊರೊನಾ ಪರಿಸ್ಥಿತಿಯನ್ನು ಪಠಾನ್ ಅವರಿಗೆ ವಿವರಿಸಿದ್ದರಂತೆ, ಜೊತೆಗೆ ಇವರು ಸ್ವತಃ ವೈದ್ಯರಾಗಿ ಸಲ್ಲಿಸುತ್ತಿರುವ ಸೇವೆ ಹಾಗೂ ಕಾರ್ಯವೈಖರಿ ವಿವರಿಸಿದಾಗ ಆಶ್ಚರ್ಯಗೊಂಡ ಇರ್ಪಾನ್ ಫಠಾನ್ ಕೋಲಾರದ ಲಕ್ಷ್ಮೀ ಆಸ್ಪತ್ರೆ ಹಾಗೂ ಅಲ್ಲಿನ ವೈದ್ಯರ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿ ವಿಡಿಯೋ ಮಾಡಿ ಕಳಿಸಿದ್ದಾರೆ. ಸದ್ಯ ಕೋಲಾರದ ಲಕ್ಷ್ಮೀ ಆಸ್ಪತ್ರೆ ಬಗ್ಗೆ ಇರ್ಫಾನ್ ಪಠಾನ್ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ: ಅಲರ್ಜಿ ಮತ್ತು ಕೊವಿಡ್ ಲಕ್ಷಣಗಳ ಮಧ್ಯೆ ಗೊಂದಲವೇ? ಪರಿಹಾರಕ್ಕಾಗಿ ಇಲ್ಲಿದೆ ಸರಳ ಸಲಹೆಗಳು