ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ: ನಾಲ್ವರು ಯುವಕರು ಸಾವು

ಹಾವೇರಿ ಜಿಲ್ಲೆಯ ಶಿಗ್ಗಾಂವಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕೆ ಹೊಡೆದು ನಾಲ್ವರು ಯುವಕರು ಸಾವನ್ನಪ್ಪಿರುವಂತಹ ಘಟನೆ ಇಂದು ಬೆಳಗ್ಗೆ ನಡೆದಿದೆ. ಬೇರೆ ವಾಹನ ಓವರ್​​ಟೇಕ್ ಮಾಡಲು ಹೋಗಿ ಅಪಘಾತವಾಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಶಿಗ್ಗಾಂವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ: ನಾಲ್ವರು ಯುವಕರು ಸಾವು
ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ: ನಾಲ್ವರು ಸಾವು
Follow us
ಗಂಗಾಧರ​ ಬ. ಸಾಬೋಜಿ
|

Updated on:Jul 13, 2024 | 4:08 PM

ಹಾವೇರಿ, ಜುಲೈ 13: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ (accident) ಹೊಡೆದ ಪರಿಣಾಮ ನಾಲ್ವರು ಯುವಕರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶಿಗ್ಗಾಂವಿ (Shiggaon) ಬಳಿ ಇಂದು ಬೆಳಗ್ಗೆ ನಡೆದಿದೆ. ನೀಲಪ್ಪ ಮೂಲಿಮನಿ(23), ಸುದೀಪ್ ಕೋಟಿ(18) ಸ್ಥಳದಲ್ಲೇ ಮೃತಪಟ್ಟಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೇ ಶಿವನಗೌಡ ಯಲ್ಲನಗೌಡ್ರ(20), ಕಲ್ಮೇಶ ಮಾನೋಜಿ (26) ಮೃತರು. ಮೃತರು ಸವಣೂರು ತಾಲೂಕಿನ ಬೇವಿನಹಳ್ಳಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.

ಇಂದು ಬೆಳಿಗ್ಗೆ 7 ಯುವಕರ ತಂಡ ಸ್ವಿಫ್ಟ್​ ಕಾರಿನಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕು ನಂದಗಡಕ್ಕೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೇವಿನಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಬೇರೆ ವಾಹನ ಓವರ್​​ಟೇಕ್ ಮಾಡಲು ಹೋಗಿ ಅಪಘಾತ ಶಂಕೆ ವ್ಯಕ್ತವಾಗಿದೆ. ಶಿಗ್ಗಾಂವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: 9ನೇ ಕ್ಲಾಸ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್: ಶಿಕ್ಷಕ ಆರೀಫ್​ವುಲ್ಲಾ ಪತ್ನಿ ಕಿರುಕುಳಕ್ಕೆ ಅರ್ಚನಾ ಬಲಿ

ಅಪಘಾತ ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಶಿಗ್ಗಾಂವಿ ಪೊಲೀಸರಿಂದ ರಕ್ಷಣಾ ಕಾರ್ಯಚರಣೆ ಮಾಡಿದ್ದು, ಗಂಭೀರವಾಗಿ ಗಾಯಗೊಂಡ ಗಾಯಳನ್ನು ಶಿಗ್ಗಾಂವಿ ತಾಲೂಕು ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಕೂಡ ಸಾವನ್ನಪ್ಪಿದ್ದಾರೆ.

ಬೊಲೆರೋ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಗುಡಿಬಂಡೆ ತಾಲೂಕಿನಲ್ಲಿ ಬೊಲೆರೋ ವಾಹನಕ್ಕೆ ಬೈಕ್​ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಹೊಸಕೋಟೆ ತಾಲೂಕಿನ ಬಿದರಹಳ್ಳಿ ಗ್ರಾಮದ ಮಲ್ಲಿಕಾರ್ಜುನ ರೆಡ್ಡಿ (23) ಮೃತ ಬೈಕ್ ಸವಾರ.

ಇದನ್ನೂ ಓದಿ: ಬೀದರ್ ತಹಸೀಲ್ದಾರ್ ಕಚೇರಿಯಲ್ಲೇ ಶಿರಸ್ತೇದಾರ್​​ಗೆ ಚಾಕು ಇರಿತ

ಸ್ನೇಹಿತರ ಜೊತೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಪೆರೇಸಂದ್ರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹಿಟ್​ ಆ್ಯಂಡ್​ ರನ್​ಗೆ ಇಬ್ಬರು ಬೈಕ್​ ಸವಾರರು ಸಾವು

ಹುಬ್ಬಳ್ಳಿ: ಹಿಟ್​ ಆ್ಯಂಡ್​ ರನ್​ಗೆ ಇಬ್ಬರು ಬೈಕ್​ ಸವಾರರು ಸಾವನ್ನಪ್ಪಿರುವಂತಹ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಆನಂದ್​(34), ಈರಣ್ಣ ಬಡಿಗೇರ(36) ದುರ್ಮರಣ. ಮೃತರು ಕಲಘಟಗಿ ತಾಲೂಕಿನ ಆಸ್ತಕಟ್ಟಿ ನಿವಾಸಿಗಳು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ದಕ್ಷಿಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:50 pm, Sat, 13 July 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ