ಕ್ಷುಲ್ಲಕ ಕಾರಣಕ್ಕೆ ಬಾರ್​​ಲ್ಲಿ ಗಲಾಟೆ: ಕುಡಿದ ಅಮಲಿನಲ್ಲಿ ಗುರಾಯಿಸಿದ್ದಕ್ಕೆ ವ್ಯಕ್ತಿಯ ಕೊಲೆ

ಬೆಂಗಳೂರಿನ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಕೆರೆಯ ನೈಟ್ ಸಫಾರಿ ಬಾರ್​ನಲ್ಲಿ ಕುಡಿದ ಅಮಲಿನಲ್ಲಿ ಗುರಾಯಿಸಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ ನಡೆದಿರುವಂತಹ ಘಟನೆ ನಡೆದಿದೆ. ಕಲ್ಕೆರೆ ನಿವಾಸಿ ನವೀನ್​ ಕೊಲೆಯಾದ ವ್ಯಕ್ತಿ. ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಸದ್ಯ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಬಾರ್​​ಲ್ಲಿ ಗಲಾಟೆ: ಕುಡಿದ ಅಮಲಿನಲ್ಲಿ ಗುರಾಯಿಸಿದ್ದಕ್ಕೆ ವ್ಯಕ್ತಿಯ ಕೊಲೆ
ಕ್ಷುಲ್ಲಕ ಕಾರಣಕ್ಕೆ ಬಾರ್​​ಲ್ಲಿ ಗಲಾಟೆ: ಕುಡಿದ ಅಮಲಿನಲ್ಲಿ ಗುರಾಯಿಸಿದ್ದಕ್ಕೆ ವ್ಯಕ್ತಿಯ ಕೊಲೆ
Follow us
ರಾಮು, ಆನೇಕಲ್​
| Updated By: ಗಂಗಾಧರ​ ಬ. ಸಾಬೋಜಿ

Updated on: Jun 26, 2024 | 10:06 PM

ಆನೇಕಲ್​, ಜೂನ್​ 26: ಕುಡಿದ ಅಮಲಿನಲ್ಲಿ ಗುರಾಯಿಸಿದ್ದಕ್ಕೆ ವ್ಯಕ್ತಿಯ ಕೊಲೆ ಮಾಡಿರುವಂತಹ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಕೆರೆಯ ನೈಟ್ ಸಫಾರಿ ಬಾರ್​ನಲ್ಲಿ (bar) ನಡೆದಿದೆ. ನವೀನ್ (35) ಮೃತ ವ್ಯಕ್ತಿ (death). ಇಂದು ಸಂಜೆ ಬಾರ್​ಗೆ ಮದ್ಯ ಸೇವಿಸಲು ಹೋಗಿದ್ದಾರೆ. ಇದೇ ವೇಳೆ ಪಕ್ಕದ ಟೇಬಲ್​ನಲ್ಲಿಯೇ ಕುಳಿತಿದ್ದ ಆರೋಪಿಗಳು ಯಾಕೋ ಗುರಾಯಿಸುತ್ತೀಯ ಎಂದು ವ್ಯಕ್ತಿ​ ಮೇಲೆ ಬಿಯರ್​ ಬಾಟಲ್​ನಿಂದ ತಲೆಗೆ ಹೊಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡು ವ್ಯಕ್ತಿ​​ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬನ್ನೇರುಘಟ್ಟ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡೆತ್ ನೋಟ್ ಬರೆದಿಟ್ಟು ಯುವಕ ಅತ್ಮಹತ್ಯೆ

ಮೈಸೂರು: ಸಾಯಿ ಗಾರ್ಮೆಂಟ್ಸ್​​​ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಕಿರಣ್(28) ಡೆತ್​ ನೋಟ್​​ ಬರೆದಿಟ್ಟು ಆತ್ಮಹತ್ಯೆ ಮಾಡಿರುವಂತಹ ಘಟನೆ ನಿನ್ನೆ ಸಂಜೆ ಟಿ.ನರಸೀಪುರದಲ್ಲಿ ನಡೆದಿದೆ. ಮೃತ ಕಿರಣ್​ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಗ್ರಾಮದ ನಿವಾಸಿ.

ಇದನ್ನೂ ಓದಿ: ಹನಿಟ್ರ್ಯಾಪ್​ ಮೂಲಕ ಶಾಸಕ ಹರೀಶ್​ಗೌಡಗೆ ಬ್ಲ್ಯಾಕ್​ ಮೇಲ್​ ಮಾಡಿದ್ದ ಆರೋಪಿಗಳ ಬಂಧನ

ನನ್ನ ಸಾವಿಗೆ ಕಂಪನಿಯ ಕ್ವಾಲಿಟಿ ಎಜಿಎಂ ಲೋಕೇಶ್, ಹೆಚ್ಆರ್​​ ಎಜಿಎಂ ಅನಿಲ್ ಕಾರಣ. ಉದ್ದೇಶಪೂರ್ವಕವಾಗಿಯೇ ನನ್ನನ್ನು ಕೆಲಸದಿಂದ ತೆಗೆದು, ಕೆಲಸ ಸಿಗದ ರೀತಿ ಮಾಡಿದ್ದಾರೆಂದು ಡೆತ್​ ನೋಟ್​​​ನಲ್ಲಿ ಉಲ್ಲೇಖಿಸಿದ್ದಾನೆ​. ​​ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಎಸ್​ಆರ್​ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ: ಸವಾರ ಸಾವು

ಕೆಎಸ್​ಆರ್​ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವಂತಹ ಘಟನೆ ಮೈಸೂರು ಹೆಚ್.ಡಿ ಕೋಟೆ ರಸ್ತೆಯಲ್ಲಿ ನಡೆದಿದೆ. ಕುಮಾರ್ (30) ಮೃತ ದುರ್ದೈವಿ. ಸ್ಥಳಕ್ಕೆ ಹುಣಸೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮನೆ ಮೇಲ್ಚಾವಣಿ ಕುಸಿದು ವ್ಯಕ್ತಿ ಸಾವು

ಚಿತ್ರದುರ್ಗ: ಮನೆ ಮೇಲ್ಚಾವಣಿ ಕುಸಿದು ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿ ನಡೆದಿದೆ. ಹಳೇ ಮನೆ ದುರಸ್ತಿ ವೇಳೆ ಮೇಲ್ಚಾವಣಿ ಕುಸಿದು ದುರಂತ ಸಂಭವಿಸಿದೆ. ರಾಮಜೋಗಿಹಳ್ಳಿಯ ಮುರುಳೀಧರ್(45) ದುರ್ಮರಣ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ