ಕಾವೇರಿ ನದಿಯಲ್ಲಿ ತೇಲಿ ಬಂದ ಮಹಿಳೆ-ಪುರುಷನ ಮೃತದೇಹ: ನೋಡಲು ಮುಗಿಬಿದ್ದ ಜನರು
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸಂತೆಮಾಳದ ಬಳಿ ಅನುಮಾನಾಸ್ಪದ ರೀತಿಯಲ್ಲಿ ಕಾವೇರಿ ನದಿಯಲ್ಲಿ ಅಪರಿಚಿತ ಮಹಿಳೆ ಮತ್ತು ಪುರುಷನ ಶವ ಪತ್ತೆ ಆಗಿದೆ. ನದಿಯಲ್ಲಿ ತೇಲುತ್ತಿದ್ದ ಜೋಡಿ ಶವ ನೋಡಲು ಜನರು ಮುಗಿಬಿದಿದ್ದರು. ಮತ್ತೊಂದು ಪ್ರಕರಣದಲ್ಲಿ ಸಾಲಭಾದೆಗೆ ಬೇಸತ್ತ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಗಾಜನೂರು ಗ್ರಾಮದಲ್ಲಿ ನಡೆದಿದೆ.
ಮಂಡ್ಯ, ಜೂನ್ 03: ಕಾವೇರಿ ನದಿಯಲ್ಲಿ (Kaveri River) ಅಪರಿಚಿತ ಮಹಿಳೆ ಮತ್ತು ಪುರುಷನ ಶವ ಪತ್ತೆ (Dead body) ಆಗಿರುವಂತಹ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದ ಸಂತೆಮಾಳದ ಬಳಿ ನಡೆದಿದೆ. ಅನುಮಾನಾಸ್ಪದ ರೀತಿಯಲ್ಲಿ ಪತ್ತೆ ಆಗಿದ್ದು, ನದಿಯಲ್ಲಿ ತೇಲುತ್ತಿದ್ದ ಜೋಡಿ ಶವ ನೋಡಲು ಜನರು ಮುಗಿಬಿದಿದ್ದರು. ಸ್ಥಳಕ್ಕೆ ಶ್ರೀರಂಗಪಟ್ಟಣ ಟೌನ್ ಠಾಣೆ ಪೊಲೀಸರು ಭೇಟಿ ನೀಡಿದ್ದು, ನದಿಯಿಂದ ಶವಗಳನ್ನು ಹೊರ ತೆಗೆದು ಗುರುತು ಪತ್ತೆಗಾಗಿ ತನಿಖೆ ನಡೆಸಿದ್ದಾರೆ. ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಸಾಲಭಾದೆಗೆ ಬೇಸತ್ತು ಆತ್ಮಹತ್ಯೆಗೆ ಶರಣಾದ ರೈತ ಮಹಿಳೆ
ಸಾಲಭಾದೆಗೆ ಬೇಸತ್ತ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗಾಜನೂರು ಗ್ರಾಮದಲ್ಲಿ ನಡೆದಿದೆ. ನಾಗರಾಜಮ್ಮ(52) ಆತ್ಮಹತ್ಯೆಗೆ ಶರಣಾ ರೈತ ಮಹಿಳೆ. ಒಂದೂವರೆ ಎಕರೆ ಜಮೀನು ಹೊಂದಿದ್ದರು.
ಇದನ್ನೂ ಓದಿ: ತಾಯಿ ಸಮಾನ ಅತ್ತಿಗೆ ಜೊತೆಗಿನ ಲವ್ವಿಡವ್ವಿಗಾಗಿ ಸ್ವಂತ ಅಣ್ಣನನ್ನೇ ಕೊಂದ ಕಾಮುಕ ತಮ್ಮ
ಗಂಡ ಮೃತಪಟ್ಟಿದ್ದ ಹಿನ್ನಲೆ ನಾಗರಾಜಮ್ಮ ಕೃಷಿಯನ್ನೆ ನಂಬಿದ್ದರು. ಕೃಷಿ ಹಾಗೂ ರೇಷ್ಮೆ ಹುಳು ಸಾಕಾಣಿಕೆಗಾಗಿ ಲಕ್ಷಾಂತರ ರೂ. ಸಾಲ ಮಾಡಿದ್ದರು. ಬ್ಯಾಂಕ್, ಪ್ರಾಥಮಿಕ ಕೃಷಿ ಪರಿಷತ್ತಿನ ಸಂಘ, ಶ್ರೀಶಕ್ತಿ ಸಂಘ ಹಾಗೂ ಖಾಸಗಿಯವರಿಂದ ಸುಮಾರು 10 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದಾರೆ. ಸಾಲಭಾದೆ ತಾಳಲಾರದೆ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿದ ಲೈನ್ಮನ್ ಸಾವು
ಉಡುಪಿ: ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಪ್ರವಾಹಿಸಿ ಮೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದ ಹೆಗ್ಗೇರಿಯಲ್ಲಿ ನಡೆದಿದೆ. ಸಲೀಂ (38) ಮೃತ ಮೆಸ್ಕಾಂ ಸಿಬ್ಬಂದಿ.
ಇದನ್ನೂ ಓದಿ: Cyber Crime: ಸೈಬರ್ ವಂಚನೆಯಲ್ಲಿ 2 ಕೋಟಿ ರೂ. ಕಳೆದುಕೊಂಡ ಕಾಫಿ ಬೆಳಗಾರ
ಉತ್ತರ ಕರ್ನಾಟಕದ ಮುಂಡಗೋಡು ನಿವಾಸಿಯಾಗಿರುವ ಸಲೀಂ, ಬೈಂದೂರು ಮೆಸ್ಕಾಂನಲ್ಲಿ ಕಳೆದ ಎಂಟು ವರ್ಷದಿಂದ ಸೇವೆ ಸಲ್ಲಿಸುತ್ತಿದ್ದರು. ಬೈಂದೂರು ಪರಿಸರದ ಜನಸ್ನೇಹಿ ಮೆಸ್ಕಾಂ ಸಿಬ್ಬಂದಿ ಆಗಿದ್ದಾರೆ. ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.