ಮನೆ ಕಾಯಬೇಕಿದ್ದವನಿಂದಲೇ ದರೋಡೆ, ಲಕ್ಷಾಂತರ ರೂ. ಹಣ, ಚಿನ್ನ ದೋಚಿದ ಸೆಕ್ಯೂರಿಟಿ ಗಾರ್ಡ್
ಸೆಕ್ಯೂರಿಟಿ ಗಾರ್ಡ್ನಿಂದಲೇ ಮನೆ ದರೋಡೆ ಮಾಡಿರುವಂತಹ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರದ ರಾಮರೆಡ್ಡಿ ಕಾಂಪ್ಲೆಕ್ಸ್ ಬಳಿ ನಡೆದಿದೆ. ಮಧುಸೂದನ್ ರೆಡ್ಡಿ ಎಂಬುವವರ ಮನೆಯಲ್ಲಿ 30 ಲಕ್ಷ ರೂ. ಹಣ ಮತ್ತು 250 ಗ್ರಾಂ ಗೋಲ್ಡ್ ದೋಚಿ ಪರಾರಿ ಆಗಿದ್ದಾರೆ.
ಆನೇಕಲ್, ಮಾರ್ಚ್ 03: ಸೆಕ್ಯೂರಿಟಿ ಗಾರ್ಡ್ (Security guard) ನಿಂದಲೇ ಮನೆ ದರೋಡೆ ಮಾಡಿರುವಂತಹ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರದ ರಾಮರೆಡ್ಡಿ ಕಾಂಪ್ಲೆಕ್ಸ್ ಬಳಿ ನಡೆದಿದೆ. ಮಧುಸೂದನ್ ರೆಡ್ಡಿ ಎಂಬುವವರ ಮನೆಯಲ್ಲಿ 30 ಲಕ್ಷ ರೂ. ಹಣ ಮತ್ತು 250 ಗ್ರಾಂ ಗೋಲ್ಡ್ ದೋಚಿ ಪರಾರಿ ಆಗಿದ್ದಾರೆ. ಮಧುಸೂದನ್ ರೆಡ್ಡಿ ಮನೆಯಲ್ಲಿ ಒಂಟಿಯಾಗಿದ್ದರು. ಇದನ್ನು ತಿಳಿದಿದ್ದ ಸೆಕ್ಯೂರಿಟಿ ಗಾರ್ಡ್ ರೋಶನ್, ರಾತ್ರಿ ನಾಲ್ವರು ಸ್ನೇಹಿತರನ್ನು ಕರೆಸಿಕೊಂಡು ಮಧುಸೂದನ್ ರೆಡ್ಡಿಯ ಕೈಕಾಲು ಕಟ್ಟಿ ಹಾಕಿ ದರೋಡೆ ಮಾಡಿದ್ದಾರೆ.
ರೋಶನ್ ಕಳೆದ ಮೂರು ತಿಂಗಳಿಂದ ಪತ್ನಿ ಜೊತೆ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದ. ಕಳೆದ ಎರಡು ದಿನಗಳ ಹಿಂದೆ ಸಂಪ್ ಕ್ಲೀನ್ ಮಾಡಲು ಓರ್ವ ಆರೋಪಿ ಬಂದಿದ್ದ. ತಡರಾತ್ರಿ ಸೆಕ್ಯೂರಿಟಿ ಗಾರ್ಡ್ ವಾಸವಿದ್ದ ಕೊಠಡಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದು, ಬಳಿಕ ಮನೆ ದೋಚಿ ರೋಶನ್ ಆ್ಯಂಡ್ ಗ್ಯಾಂಗ್ ಪರಾರಿಯಾಗಿದ್ದಾರೆ. ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಐವರು ದರೋಡೆಕೋರರ ಬಂಧನ
ಬೆಂಗಳೂರು ಗ್ರಾಮಾಂತರ: ಒಂಟಿಯಾಗಿ ಬರುವವರನ್ನ ಥಳಿಸಿ ದರೋಡೆ ಮಾಡುತ್ತಿದ್ದ ಐವರು ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್ ಶಶಿಕುಮಾರ್, ನಾಗರಾಜ್, ಸಂತೋಷ, ವೀರಭದ್ರ, ಲೋಕೇಶ್ ಬಂಧಿತರು.
ಇದನ್ನೂ ಓದಿ: ಹೈಕೋರ್ಟ್‌ನಲ್ಲಿ ಜಡ್ಜ್ ಮುಂದೆಯೇ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ? ಆ ವ್ಯಕ್ತಿ ಯಾರು? ಇಲ್ಲಿದೆ ವಿವರ
ಗಂಗೊಂಡಹಳ್ಳಿ ಬ್ರಿಡ್ಜ್ ಕೆಳಗೆ ಮಾರಕಾಸ್ತ್ರ ಹಿಡಿದು ದರೋಡೆಗೆ ಹೊಂಚು ಹಾಕುತ್ತಿದ್ದ ವೇಳೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮಚ್ಚು, ರಾಡ್, ದೊಣ್ಣೆ, ಖಾರದಪುಡಿ, ಬೈಕ್ನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಜಮೀನಿಗೆ ನುಗ್ಗಿದ ಬಸ್: ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ, ಆಸ್ಪತ್ರೆಗೆ ದಾಖಲು
ಬಳ್ಳಾರಿ: ಚಾಲಕನ ನಿಯಂತ್ರಣ ತಪ್ಪಿದ ಸರ್ಕಾರಿ ಬಸ್ ಜಮೀನಿಗೆ ನುಗ್ಗಿದ್ದು, ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. ಜಿಲ್ಲೆಯ ಸಿರುಗುಪ್ಪ ತಾಲೂಕಿನ ದೇವಿನಗರದ ಬಳಿ ನಡೆದಿದೆ. ಬಸ್ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಕೆಲವೊಬ್ಬರಿಗೆ ಸಣ್ಣಪುಟ್ಟ ಗಾಯಾಗಳಾಗಿದ್ದು, ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತೆಕ್ಕಲಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:55 pm, Wed, 3 April 24