Crime: ಬೀರೂರಿನಲ್ಲಿ ತಂದೆಯಿಂದ ಮಗಳ ಕೊಲೆ, ಶ್ರೀನಿವಾಸಪುರದಲ್ಲಿ ಅಪಘಾತ, ಚಡಚಣದಲ್ಲಿ ಕಬ್ಬಿನಗದ್ದೆಗೆ ಬೆಂಕಿ

ತನ್ನ ಇಚ್ಛೆಗೆ ವಿರುದ್ಧವಾಗಿ ವ್ಯಕ್ತಿಯೊಬ್ಬನನ್ನು ಪ್ರೀತಿಸಿದ ಮಗಳನ್ನು ಅಪ್ಪನೇ ಕೊಲೆ ಮಾಡಿರುವ ಘಟನೆ ಬೀರೂರು ಪಟ್ಟಣದಲ್ಲಿ ನಡೆದಿದೆ.

Crime: ಬೀರೂರಿನಲ್ಲಿ ತಂದೆಯಿಂದ ಮಗಳ ಕೊಲೆ, ಶ್ರೀನಿವಾಸಪುರದಲ್ಲಿ ಅಪಘಾತ, ಚಡಚಣದಲ್ಲಿ ಕಬ್ಬಿನಗದ್ದೆಗೆ ಬೆಂಕಿ
ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಉಮರಜ ಗ್ರಾಮದಲ್ಲಿ ಕಬ್ಬಿನ ಗದ್ದೆ ಬೆಂಕಿಗೆ ಆಹುತಿಯಾಗಿದೆ.
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 28, 2021 | 10:43 PM

ಚಿಕ್ಕಮಗಳೂರು: ತನ್ನ ಇಚ್ಛೆಗೆ ವಿರುದ್ಧವಾಗಿ ವ್ಯಕ್ತಿಯೊಬ್ಬನನ್ನು ಪ್ರೀತಿಸಿದ ಮಗಳನ್ನು ಅಪ್ಪನೇ ಕೊಲೆ ಮಾಡಿರುವ ಘಟನೆ ಬೀರೂರು ಪಟ್ಟಣದಲ್ಲಿ ನಡೆದಿದೆ. 18 ವರ್ಷದ ಮಗಳ ಕುತ್ತಿಗೆಗೆ ವೇಲ್ ಬಿಗಿದು ಅಪ್ಪನೇ ಕೊಲೆ ಮಾಡಿದ್ದಾನೆ. ಬೀರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯು ಶಿಕಾರಿಪುರ ತಾಲ್ಲೂಕಿನ ಕೆಂಚೇಗೌಡನಕೊಪ್ಪಲು ಮೂಲದವನು ಎಂದು ಪೊಲೀಸರು ತಿಳಿಸಿದ್ದಾರೆ.

ಕಬ್ಬಿನಗದ್ದೆ ಬೆಂಕಿಗೆ ಆಹುತಿ ವಿಜಯಪುರ: ವಿದ್ಯುತ್​ ಶಾರ್ಟ್​​ ಸರ್ಕೀಟ್​ನಿಂದ ಕಬ್ಬಿನ ಗದ್ದೆಗೆ ಬೆಂಕಿಬಿದ್ದಿದ್ದು, ನಾಲ್ಕು ಎಕರೆ ಕಬ್ಬು ಬೆಂಕಿಗೆ ಆಹುತಿಯಾಗಿದೆ. ಚಡಚಣ ತಾಲ್ಲೂಕಿನ ಉಮರಜ ಗ್ರಾಮದಲ್ಲಿ ದುರ್ಘಟನೆ ನಡೆದಿದ್ದು, ಮಲ್ಲಪ್ಪ ಇರಮಾಣಿ, ಉಮೇಶ್​​​ ಕಾಶೀನಾಥ ಅವರಿಗೆ ಸೇರಿದ ಬೆಳೆ ಭಸ್ಮವಾಗಿದೆ. ರೈತರಿಗೆ ಸುಮಾರು ₹ 8 ಲಕ್ಷ ನಷ್ಟವಾಗಿರಬಹುದು ಎಂದು ಅಂದಾಜಿಸಲಾಗಿದೆ. ಚಡಚಣ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬಸ್-ಬೈಕ್ ಡಿಕ್ಕಿ: ವ್ಯಕ್ತಿ ಸಾವು ಕೋಲಾರ: ಖಾಸಗಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿಯಾಗಿ ದ್ವಿಚಕ್ರ ವಾಹನ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಪಾತಬಲ್ಲಪಲ್ಲಿ ಬಳಿ ನಡೆದಿದೆ. ಮೃತನನ್ನು ಆಂಧ್ರ ಮೂಲದ ಸತೀಶ್ ಎಂದು ಗುರುತಿಸಲಾಗಿದೆ. ಖಾಸಗಿ ಬಸ್ ಬೆಂಗಳೂರಿನಿಂದ ಪುಂಗನೂರಿಗೆ ಹೋಗುತ್ತಿತ್ತು. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮೊಬೈಲ್ ಕಸಿದು ಪರಾರಿ ನೆಲಮಂಗಲ: ಬೈಕ್​ನಲ್ಲಿ ತೆರಳುತ್ತಿದ್ದ ಜೋಡಿಯೊಂದು ಮಾತನಾಡುತ್ತಾ ತೆರಳುತ್ತಿದ್ದ ಯುವತಿಯಿಂದ ಮೊಬೈಲ್ ಕಸಿದು ಪರಾರಿಯಾಗಿರುವ ಘಟನೆ ಹೆಸರಘಟ್ಟ ರಸ್ತೆಯ ಸೌಂದರ್ಯ ಕಾಲೇಜು ಬಳಿ ನಡೆದಿದೆ. ಪಲ್ಸರ್​ ಬೈಕ್​ನಲ್ಲಿ ಬಂದಿದ್ದ ಯುವಕ, ಯುವತಿ ಈ ಕೃತ್ಯ ಎಸಗಿದ್ದಾರೆ. ಮುನಿಕೊಂಡಪ್ಪ ಲೇಔಟ್​ನ ಶಿಲ್ಪಾ ಮೊಬೈಲ್ ಕಳೆದುಕೊಂಡವರು. ಬೆಂಗಳೂರಿನ ಬಾಗಲಗುಂಟೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಒಟ್ಟಿಗೇ ಮದ್ಯಪಾನ ಮಾಡಲು ಲಿಕ್ಕರ್​ ಶಾಪ್​​​ಗೆ ಹೋದ ಸ್ನೇಹಿತರು; 10 ರೂ.ಗಾಗಿ ನಡೆದೇ ಹೋಯ್ತು ಭೀಕರ ಕೊಲೆ ಇದನ್ನೂ ಓದಿ: ರೈತರು ಪ್ರತಿಭಟನೆ ನಡೆಸುತ್ತಿದ್ದ ಜಾಗದಲ್ಲಿ ಭೀಕರ ಅಪಘಾತ; ಟ್ರಕ್​ ಹರಿದು ಮೂವರು ರೈತ ಮಹಿಳೆಯರ ದುರ್ಮರಣ

Published On - 10:42 pm, Thu, 28 October 21

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು