ನಿನ್ನೆ ರಾತ್ರಿ ಸ್ನೇಹಿತರ ಜೊತೆ ಮಧು ಮಾತನಾಡುತ್ತಿದ್ದಾಗ ಮೂವರು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಬಳಿಕ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಮಧು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾಗ ಸ್ಥಳದಲ್ಲಿದ್ದವರು ತಕ್ಷಣವೇ ಅವರನ್ನು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲು ಸಿದ್ಧತೆ ನಡೆಸಿದ್ದಾರೆ. ಆದರೆ, ಯಾವುದೇ ಪ್ರಯತ್ನ ಸಫಲವಾಗದೇ ದಾರಿಯಲ್ಲಿಯೇ ಮಧು ಅವರು ಕೊನೆಯುಸಿರು ಎಳೆದಿದ್ದಾರೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಯಚೂರು; ಕಲ್ಲು ಕ್ವಾರಿ ನೀರಲ್ಲಿ ಮುಳುಗಿ ಯುವಕ ಸಾವು
ದೇವದುರ್ಗ ತಾಲೂಕಿನ ಗಬ್ಬುರ ಬಳಿ ಕ್ವಾರಿಯಲ್ಲಿ ಬುಧವಾರ ಶಿವಾರಜ ಎಂಬ ಯುವಕ ಮುಳುಗಿ ಸಾವನ್ನಪ್ಪಿದ್ದಾನೆ. ಕಲ್ಲುಕ್ವಾರಿ ನೀರಿನಲ್ಲಿ ಮುಳುಗಿ ಯುವಕ ಶಿವರಾಜ ಮರಣ ಹೊಂದಿರುವ ಘಟನೆ ನಡೆದಿದೆ. ಯುವಕನ ಶವ ಇನ್ನೂ ಪತ್ತೆಯಾಗಿಲ್ಲ. ಈ ಕುರಿತಾಗಿ ಶವ ಶೋಧ ಮಾಡುವಲ್ಲಿ ಬೇಜವಾಬ್ದಾರಿ ತೋರಿದ್ದಾರೆ ಎಂದು ಕಂದಾಯ ಪೊಲೀಸ್ ಅಧಿಕಾರಿಗಳ ವಿರುದ್ದ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಗಬ್ಬೂರ ಗ್ರಾಮದ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಮತ್ತು ಸ್ಥಳೀಯರ ನಡುವೆ ವಾಗ್ವಾದ ನಡೆದಿದೆ.
ಬಳ್ಳಾರಿ; ಎರಡು ಕಾರುಗಳು ಡಿಕ್ಕಿಯಾಗಿ ಸ್ಥಳದಲ್ಲೇ ಒಬ್ಬರು ಸಾವು
ಇನೋವಾ ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಓರ್ವ ಮರಣಹೊಂದಿರುವ ಘಟನೆ ನಡೆದಿದೆ. ಕಾರಿನಲ್ಲಿದ್ದ ಕೆಲವರಿಗೆ ಗಂಭೀರ ಗಾಯವಾಗಿದೆ. ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ. ಗಾಯಗೊಂಡವರಿಗೆ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು ಸ್ಥಳಕ್ಕೆ ಮರಿಯಮ್ಮನಹಳ್ಳಿ ಠಾಣೆಯ ಪೊಲೀಸರ ಭೇಟಿ ನೀಡಿದ್ದಾರೆ.
ಇದನ್ನೂ ಓದಿ: ಗದಗದಲ್ಲಿ 14 ವರ್ಷದ ಬಾಲಕಿ ಕೊಲೆ ಪ್ರಕರಣ; ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಚಿವ ಸಿ.ಸಿ.ಪಾಟೀಲ್
ಆರ್.ಟಿ. ನಗರದಲ್ಲಿ ಬಾರ್ ಡ್ಯಾನ್ಸರ್ ಬರ್ಬರ ಹತ್ಯೆ; ಕೊಲೆಯ ಹಿಂದಿನ ಕಾರಣ ನಿಗೂಢ