ಬನ್ನೇರುಘಟ್ಟ ಸಮೀಪದಲ್ಲಿ ಕಾಣಿಸಿಕೊಂಡ ಮೊಸಳೆ; ಸೆರೆ ಹಿಡಿದ ಜೈವಿಕ ಉದ್ಯಾನವನ ಸಿಬ್ಬಂದಿ

ಕೆಲ ದಿನಗಳ ಹಿಂದೆ ಸುರಿದ ಮಳೆಯಿಂದಾಗಿ ನೀರಿನಲ್ಲಿ ಮೊಸಳೆ ಕೊಚ್ಚಿ ಕೊಂಡು ಬಂದಿರುವ ಸಾಧ್ಯತೆ ಹೆಚ್ಚಿದೆ. ಸದ್ಯ ಬನ್ನೇರುಘಟ್ಟ ಜೈವಿಕ ಉದ್ಯಾನವನ ಸಿಬ್ಬಂದಿ ಮೊಸಳೆಯನ್ನು ಹಿಡಿದು ಅರಣ್ಯ ಮದ್ಯದಲ್ಲಿರುವ ಕೆರೆಗೆ ಬಿಟ್ಟಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಬನ್ನೇರುಘಟ್ಟ ಸಮೀಪದಲ್ಲಿ ಕಾಣಿಸಿಕೊಂಡ ಮೊಸಳೆ; ಸೆರೆ ಹಿಡಿದ ಜೈವಿಕ ಉದ್ಯಾನವನ ಸಿಬ್ಬಂದಿ
ಮೊಸಳೆಯನ್ನು ಕೈಯಲ್ಲಿ ಹಿಡಿದಿರುವ ಉದ್ಯಾನವನ ಸಿಬ್ಬಂದಿ

ಆನೇಕಲ್: ಬನ್ನೇರುಘಟ್ಟ ಸಮೀಪದ ಭೂತಾನಹಳ್ಳಿ ಕೆರೆಯಲ್ಲಿ ಮೊಸಳೆ ಕಾಣಿಸಿಕೊಂಡಿದ್ದು, ಮೊಸಳೆಯನ್ನು ಸೆರೆ ಹಿಡಿಯುವಲ್ಲಿ ಉದ್ಯಾನವನ ಸಿಬ್ಬಂದಿ ಯಶಸ್ವಿಯಾಗಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನವನ ಸಿಬ್ಬಂದಿ ಮೊಸಳೆಯನ್ನು ಸೆರೆ ಹಿಡಿದಿದ್ದಾರೆ. ಭೂತಾನಹಳ್ಳಿ ಕೆರೆ ಅಲ್ಲಿನ ಗ್ರಾಮಸ್ಥರಿಗೆ ನೀರಿನ ಮೂಲವಾಗಿದೆ. ಆದರೆ ಆ ಕೆರೆಯಲ್ಲಿ ಮೊಸಳೆ ಕಾಣಿಸಿಕೊಂಡಿದ್ದು, ಜನರಿಗೆ ಆತಂಕ ಸೃಷ್ಟಿಸಿತ್ತು.

ಕೆಲ ದಿನಗಳ ಹಿಂದೆ ಸುರಿದ ಮಳೆಯಿಂದಾಗಿ ನೀರಿನಲ್ಲಿ ಮೊಸಳೆ ಕೊಚ್ಚಿ ಕೊಂಡು ಬಂದಿರುವ ಸಾಧ್ಯತೆ ಹೆಚ್ಚಿದೆ. ಸದ್ಯ ಬನ್ನೇರುಘಟ್ಟ ಜೈವಿಕ ಉದ್ಯಾನವನ ಸಿಬ್ಬಂದಿ ಮೊಸಳೆಯನ್ನು ಹಿಡಿದು ಅರಣ್ಯ ಮದ್ಯದಲ್ಲಿರುವ ಕೆರೆಗೆ ಬಿಟ್ಟಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಡಿಕ್ಕಿಯಾಗಿ ಕರಡಿ ಸಾವು
ದಾವಣಗೆರೆ: ಅಪರಿಚಿತ ವಾಹನ ಡಿಕ್ಕಿಯಾಗಿ ಕರಡಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಮಾದಮತ್ತೇನಹಳ್ಳಿ ಬಳಿ ಸಂಭವಿಸಿದೆ. ಆಹಾರಕ್ಕಾಗಿ ಕರಡಿ ರಸ್ತೆ ದಾಟುತ್ತಿತ್ತು. ರಸ್ತೆ ದಾಟುವಾಗ ವಾಹನವೊಂದು ಕರಡಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕರಡಿ ಸಾವನ್ನಪ್ಪಿದೆ. ಮಾದಮತ್ತೇನಹಳ್ಳಿ ಅತಿ ಹೆಚ್ಚು ಕರಡಿಗಳು ಇರುವ ಪ್ರದೇಶವಾಗಿದ್ದು, ಇಲ್ಲೊಂದು ಕರಡಿ ಧಾಮ ಆಗಬೇಕೆಂದು ಸ್ಥಳೀಯರು ಸರ್ಕಾರಕ್ಕೆ ಆಗ್ರಹಿಸುತ್ತಿದ್ದಾರೆ. ಸ್ಥಳಕ್ಕೆ ಜಗಳೂರು ಪೊಲೀಸರು ಭೇಟಿ ನೀಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ

ಅವಸಾನದ ಅಂಚಿನಲ್ಲಿ ಗದಗದ ಐತಿಹಾಸಿಕ ಜೈನ ಬಸದಿ; ಜೀರ್ಣೋದ್ಧಾರಕ್ಕಾಗಿ ಸ್ಥಳೀಯರಿಂದ ಒತ್ತಾಯ

ಭೀಕರ ಮಹಾಮಾರಿ ನಡುವೆ ವೈದ್ಯರ ನಿರ್ಲಕ್ಷ್ಯ.. ಕೊರೊನಾ ದೃಢವಾಗುತ್ತಿದ್ದಂತೆ ಡಿಸ್ಚಾರ್ಜ್, ಆಸ್ಪತ್ರೆಗಳ ಮುಂದೆ ನರಳಾಟ

(crocodile near bannerghatta has been arrested by the zoo staff)

Click on your DTH Provider to Add TV9 Kannada