ಬೆಳಗಾವಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ CRPF ಯೋಧ ವಿಧಿವಶ

ಹೊಂಬಳ ಗ್ರಾಮದ ಸಿಆರ್​ಪಿಎಫ್ ಯೋಧ ಮೌಲಾಹುಸೇನ್ ಕಲೇಬಾಯಿ (40) ಮರಣ ಹೊಂದಿದ್ದಾರೆ.

ಬೆಳಗಾವಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ CRPF ಯೋಧ ವಿಧಿವಶ
ಸಿಆರ್​ಪಿಎಫ್ ಯೋಧ ಮೌಲಾಹುಸೇನ್ ಕಲೇಬಾಯಿ
Follow us
shruti hegde
|

Updated on:Mar 21, 2021 | 1:04 PM

ಗದಗ: ಹೊಂಬಳ ಗ್ರಾಮದ ಸಿಆರ್​ಪಿಎಫ್ ಯೋಧ ಮೌಲಾಹುಸೇನ್ ಕಲೇಬಾಯಿ (40) ವಿಧಿವಶರಾಗಿದ್ದಾರೆ. ಇವರು ಬೆಳಗಾವಿ ಕೋಬ್ರಾ ಬೆಟಾಲಿಯನ್​ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಅನಾರೋಗ್ಯದ ಹಿನ್ನೆಲೆ ನಿನ್ನೆ(ಮಾರ್ಚ್​ 20) ವಿಧಿವಶರಾಗಿದ್ದಾರೆ. ಯೋಧ ಮೌಲಾಹುಸೇನ್ ಕಲೇಬಾಯಿ ಅವರ ಸ್ವಗ್ರಾಮಕ್ಕೆ ಪಾರ್ಥಿವ ಶರೀರ ಇಂದು (ಮಾರ್ಚ್​ 21) ಮಧ್ಯಾಹ್ನ ಬರಲಿದೆ. ಹೊಂಬಳ ಗ್ರಾಮದಲ್ಲಿ 2 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ.

ಮೈಸೂರಿನಲ್ಲಿ ಸಾಲಬಾಧೆ ಹಿನ್ನೆಲೆಯಲ್ಲಿ ರೈತ ಆತ್ಮಹತ್ಯೆ

ಸಾಲಬಾಧೆ ಹಿನ್ನೆಲೆಯಲ್ಲಿ ಪಿರಿಯಾಪಟ್ಟಣ ತಾಲೂಕಿನ ಕಾನೂರು ಗ್ರಾಮದಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕ್ರಿಮಿನಾಶಕ ಸೇವಿಸಿ ರೈತ ಚಲುವೇಗೌಡ(69) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೈತ ಚಲುವೇಗೌಡ, 8 ಲಕ್ಷ ರೂಪಾಯಿಗೂ ಹೆಚ್ಚು ಸಾಲ ಮಾಡಿಕೊಂಡಿದ್ದರು. ತಮ್ಮ 5 ಎಕರೆ ಜಮೀನಿನಲ್ಲಿ ಬೆಳೆದಿದ್ದ ತಂಬಾಕು ಮತ್ತು ಶುಂಠಿ ಬೆಳೆ ಕೈಕೊಟ್ಟಿತ್ತು. ಇದರಿಂದ ನೊಂದು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಕ್ಷಣ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಿಸದೆ ರೈತ ಸಾವು ಸಂಭವಿಸಿದೆ. ಬೆಟ್ಟದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಧಾರವಾಡದಲ್ಲಿ ಕೌಟುಂಬಿಕ ಕಲಹದಿಂದ ವಿಷ ಸೇವಿಸಿ ಯುವಕ ಆತ್ಮಹತ್ಯೆ ಕವಲಗೇರಿ ಗ್ರಾಮದಲ್ಲಿ ನಿನ್ನೆ(ಮಾರ್ಚ್ 20) ರಾತ್ರಿ ವಿಷ ಸೇವಿಸಿ ಶಿವುಕುಮಾರ ಹುಬ್ಬಳ್ಳಿ(20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕ ಖಿನ್ನತೆಗೆ ಶಿವುಕುಮಾರ ಸಿಲುಕಿದ್ದರು. ಹೀಗಾಗಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮರಣ ಹೊಂದಿದ್ದಾರೆ. ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ; 4 ಮಂದಿ ಸಾವು, ಒಬ್ಬನಿಗೆ ಗಂಭೀರ ಗಾಯ

ಹಾಸನದಲ್ಲಿ ಕೆಮಿಕಲ್ ಸಾಗಿಸುತ್ತಿದ್ದ ಲಾರಿ ಪಲ್ಟಿ; ಮೂವರ ದುರ್ಮರಣ

Published On - 12:57 pm, Sun, 21 March 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ