ಗದಗ: ಹೊಂಬಳ ಗ್ರಾಮದ ಸಿಆರ್ಪಿಎಫ್ ಯೋಧ ಮೌಲಾಹುಸೇನ್ ಕಲೇಬಾಯಿ (40) ವಿಧಿವಶರಾಗಿದ್ದಾರೆ. ಇವರು ಬೆಳಗಾವಿ ಕೋಬ್ರಾ ಬೆಟಾಲಿಯನ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಅನಾರೋಗ್ಯದ ಹಿನ್ನೆಲೆ ನಿನ್ನೆ(ಮಾರ್ಚ್ 20) ವಿಧಿವಶರಾಗಿದ್ದಾರೆ. ಯೋಧ ಮೌಲಾಹುಸೇನ್ ಕಲೇಬಾಯಿ ಅವರ ಸ್ವಗ್ರಾಮಕ್ಕೆ ಪಾರ್ಥಿವ ಶರೀರ ಇಂದು (ಮಾರ್ಚ್ 21) ಮಧ್ಯಾಹ್ನ ಬರಲಿದೆ. ಹೊಂಬಳ ಗ್ರಾಮದಲ್ಲಿ 2 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ.
ಮೈಸೂರಿನಲ್ಲಿ ಸಾಲಬಾಧೆ ಹಿನ್ನೆಲೆಯಲ್ಲಿ ರೈತ ಆತ್ಮಹತ್ಯೆ
ಸಾಲಬಾಧೆ ಹಿನ್ನೆಲೆಯಲ್ಲಿ ಪಿರಿಯಾಪಟ್ಟಣ ತಾಲೂಕಿನ ಕಾನೂರು ಗ್ರಾಮದಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕ್ರಿಮಿನಾಶಕ ಸೇವಿಸಿ ರೈತ ಚಲುವೇಗೌಡ(69) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರೈತ ಚಲುವೇಗೌಡ, 8 ಲಕ್ಷ ರೂಪಾಯಿಗೂ ಹೆಚ್ಚು ಸಾಲ ಮಾಡಿಕೊಂಡಿದ್ದರು. ತಮ್ಮ 5 ಎಕರೆ ಜಮೀನಿನಲ್ಲಿ ಬೆಳೆದಿದ್ದ ತಂಬಾಕು ಮತ್ತು ಶುಂಠಿ ಬೆಳೆ ಕೈಕೊಟ್ಟಿತ್ತು. ಇದರಿಂದ ನೊಂದು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಕ್ಷಣ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಿಸದೆ ರೈತ ಸಾವು ಸಂಭವಿಸಿದೆ. ಬೆಟ್ಟದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಧಾರವಾಡದಲ್ಲಿ ಕೌಟುಂಬಿಕ ಕಲಹದಿಂದ ವಿಷ ಸೇವಿಸಿ ಯುವಕ ಆತ್ಮಹತ್ಯೆ
ಕವಲಗೇರಿ ಗ್ರಾಮದಲ್ಲಿ ನಿನ್ನೆ(ಮಾರ್ಚ್ 20) ರಾತ್ರಿ ವಿಷ ಸೇವಿಸಿ ಶಿವುಕುಮಾರ ಹುಬ್ಬಳ್ಳಿ(20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕ ಖಿನ್ನತೆಗೆ ಶಿವುಕುಮಾರ ಸಿಲುಕಿದ್ದರು. ಹೀಗಾಗಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮರಣ ಹೊಂದಿದ್ದಾರೆ. ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ; 4 ಮಂದಿ ಸಾವು, ಒಬ್ಬನಿಗೆ ಗಂಭೀರ ಗಾಯ
Published On - 12:57 pm, Sun, 21 March 21