Nandini Milk Price: ಇಂದು ಮಹತ್ವದ ಸಭೆ, ನಂದಿನಿ ಹಾಲಿನ ದರ ಏರಿಕೆ ಭವಿಷ್ಯ ಇಂದೇ ನಿರ್ಧಾರ ಸಾಧ್ಯತೆ

ಕಳೆದ ಹಲವು ದಿನಗಳಿಂದ ಚರ್ಚೆಯಾಗುತ್ತಿರುವ ಹಾಲಿನ ದರ ಹೆಚ್ಚಳ ಬಗ್ಗೆ ಇಂದು ಸಭೆಯಲ್ಲಿ ನಿರ್ಧಾರವಾಗುವ ಸಾಧ್ಯತೆ ಇದೆ.

Nandini Milk Price: ಇಂದು ಮಹತ್ವದ ಸಭೆ, ನಂದಿನಿ ಹಾಲಿನ ದರ ಏರಿಕೆ ಭವಿಷ್ಯ ಇಂದೇ ನಿರ್ಧಾರ ಸಾಧ್ಯತೆ
ಸಾಂದರ್ಭಿಕ ಚಿತ್ರ
Edited By:

Updated on: Jul 21, 2023 | 9:43 AM

ಮುಖ್ಯಾಂಶಗಳು

  • ನಂದಿನಿ ಹಾಲಿನ ದರ ಏರಿಕೆ ಭವಿಷ್ಯ ಇಂದೇ ನಿರ್ಧಾರ ಸಾಧ್ಯತೆ
  • ಹಾಲು ಒಕ್ಕೂಟಗಳು, KMF​ ಪದಾಧಿಕಾರಿಗಳ ಜೊತೆ ಸಿಎಂ ಸಭೆ
  • ಸಂಜೆ 6 ಗಂಟೆಗೆ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ

ಬೆಂಗಳೂರು, (ಜುಲೈ 21): ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಮಧ್ಯೆ ದಿನಸಿ, ತರಕಾರಿ ಬೆಲೆ ಗಗನಕ್ಕೇರಿವೆ. ಇದರ ನಡುವೆ ಇದೀಗ ಹಾಲಿನ ದರ(nandini milk )ಏರಿಕೆ ಬಗ್ಗೆಯೂ ಸರ್ಕಾರದ ಮಟ್ಟದಲ್ಲಿ ಭಾರೀ ಚರ್ಚೆಯಾಗಿತ್ತಿದೆ. ಪ್ರತಿ ಲೀಟರ್ ನಂದಿನಿ ಹಾಲಿನ ದರ 5 ರೂಪಾಯಿ ಏರಿಕೆಗೆ ಎಲ್ಲಾ ಹಾಲು ಮಾರಾಟ ಒಕ್ಕೂಟಗಳು ಪ್ರಸ್ತಾವನೆ ಸಲ್ಲಿಸಿವೆ. ಈ ಬಗ್ಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಇಂದು (ಜುಲೈ 21) ಸಂಜೆ 6 ಗಂಟೆಗೆ ಹಾಲು ಒಕ್ಕೂಟಗಳು, KMF​ ಪದಾಧಿಕಾರಿಗಳ ಜೊತೆ ಸಭೆ ನಡೆಸಲಿದ್ದು, ನಂದಿನಿ ಹಾಲಿನ ದರ ಏರಿಕೆ ಭವಿಷ್ಯ ಇಂದೇ ನಿರ್ಧಾರವಾಗುವ ಸಾಧ್ಯತೆಗಳಿವೆ.

ಇದನ್ನೂ ಓದಿ: ನಂದಿನಿ ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ; ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಸುಳಿವು

ಇಂದು ಸಂಜೆ 6 ಗಂಟೆಗೆ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ನಡೆಯಲರಿಉವ ಮಹತ್ವದ ಸಭೆಯಲ್ಲಿ ಕೆಎಂಎಫ್ ಆಡಳಿತ ಮಂಡಳಿ, ಅಧಿಕಾರಿಗಳು​ ಭಾಗಿಯಾಗಲಿದ್ದು, ನಂದಿನಿ ಹಾಲಿನ ದರ ಏರಿಕೆ ಭವಿಷ್ಯ ಇಂದೇ ನಿರ್ಧಾರ ಸಾಧ್ಯತೆ ಇದೆ.

ಪ್ರತಿದಿನ ಬೆಂಗಳೂರಿಗೆ 13 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತಿದೆ. ಇದರಿಂದ ಪ್ರತಿದಿನ 15 ರಿಂದ 16 ಲಕ್ಷ ಪ್ರತಿನಿತ್ಯ ನಷ್ಟವಾಗುತ್ತೆ. ಪ್ರತಿ ಲೀ ಗೆ ಮಾರಾಟ ದರದ ಮೇಲೆ 5 ರುಪಾಯಿ ಹೆಚ್ಚಳ ಮಾಡಲು ಅವಕಾಶ ಕೊಡಬೇಕು. ಹೆಚ್ಚಳ ಮಾಡದಿದ್ದರೆ ಒಕ್ಕೂಟಗಳು ಸಾಲದ ಸುಳಿಯಲ್ಲಿ ಸಿಲುಕುತ್ತವೆ. ಹೀಗಾಗಿ ಈ ಬಾರಿ ಹಾಲಿನ ದರ ಪರಿಷ್ಕರಣೆ ಮಾಡುವಂತೆ ಒಕ್ಕೂಟಗಳು ಸರ್ಕಾರಕ್ಕೆ ಒತ್ತಾಯ ಮಾಡಿವೆ.

ರಾಜ್ಯದಲ್ಲಿ ಕಳೆದ ಎರಡು ವರ್ಷದಿಂದ ಹಾಲಿದ ದರ ಪರಿಷ್ಕರಣೆ ಮಾಡಿಲ್ಲ. ಹೀಗಾಗಿ 15 ಒಕ್ಕೂಟಗಳು ನಷ್ಟದ ಪರಿಸ್ಥಿತಿಯಲ್ಲಿವೆ. ಸದ್ಯ ಹಾಲು ಮಾರಾಟ ಪ್ರತಿ ಲೀಟರ್ 39 ರೂಪಾಯಿ ಇದೆ ( ಲೀ ಟೋನ್ಡ್ ಹಾಲು ). ಇದರಲ್ಲಿ ಹಾಲು ಉತ್ಪಾದಕರ ಸಂಘಕ್ಕೆ 35.50 ಪೈಸೆ ಹೋಗುತ್ತಿದೆ. ಮಾರಾಟಗಾರರಿಗೆ ಪ್ರತಿ ಲೀಟರ್ ಗೆ 2 ರೂ ಕಮೀಷನ್. ಉಳಿದ 1.50 ಪೈಸೆ ಲಾಭದಿಂದ ವ್ಯವಹಾರ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುವುದು ಒಕ್ಕೂಟಗಳ ಅಭಿಪ್ರಾಯ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:40 am, Fri, 21 July 23

ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More
Loading...
Unable to load recommendations.
Follow Us