AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSIR-NAL Recruitment: ಬೆಂಗಳೂರಿನ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರಿಸ್‌ನಲ್ಲಿ ಉದ್ಯೋಗವಕಾಶ; ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ!

ಬೆಂಗಳೂರಿನ CSIR-NAL ಸಂಸ್ಥೆಯು ಪ್ರಾಜೆಕ್ಟ್ ಸ್ಟಾಫ್ ಹುದ್ದೆಗಳಿಗೆ ನೇರ ಸಂದರ್ಶನಗಳನ್ನು ಆಯೋಜಿಸಿದೆ. ತಾಂತ್ರಿಕ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶ. ಜೂನ್ 19, 22, 24, 29 ರಂದು ನಡೆಯುವ ಸಂದರ್ಶನದಲ್ಲಿ ಭಾಗವಹಿಸಿ. ಹೆಚ್ಚಿನ ಮಾಹಿತಿ ಹಾಗೂ ಅರ್ಹತೆಗಳಿಗಾಗಿ ಅಧಿಕೃತ ವೆಬ್‌ಸೈಟ್ www.nal.res.in ಗೆ ಭೇಟಿ ನೀಡಿ.

CSIR-NAL Recruitment: ಬೆಂಗಳೂರಿನ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರಿಸ್‌ನಲ್ಲಿ ಉದ್ಯೋಗವಕಾಶ; ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ!
ಕೇಂದ್ರ ಸರ್ಕಾರಿ ಸಂಸ್ಥೆಯಲ್ಲಿ ಉದ್ಯೋಗ
ಅಕ್ಷತಾ ವರ್ಕಾಡಿ
|

Updated on: Jun 18, 2026 | 3:22 PM

Share

ಬೆಂಗಳೂರಿನಲ್ಲಿ ತಾಂತ್ರಿಕ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಪ್ರತಿಭಾವಂತ ಮತ್ತು ಅರ್ಹ ಅಭ್ಯರ್ಥಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಕೇಂದ್ರ ಸರ್ಕಾರದ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರೀಯಲ್ ರಿಸರ್ಚ್ (CSIR) ಅಧೀನಕ್ಕೆ ಒಳಪಡುವ ಪ್ರತಿಷ್ಠಿತ ರಾಷ್ಟ್ರೀಯ ಬಾಹ್ಯಾಕಾಶ ಪ್ರಯೋಗಾಲಯಗಳು (NAL) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದೆ. ಈ ಪ್ರಕಟಣೆಯ ಪ್ರಕಾರ, ಬೆಂಗಳೂರಿನ ಹೆಚ್.ಎ.ಎಲ್ ಏರ್‌ಪೋರ್ಟ್ ರಸ್ತೆಯ ಕೊಡಿಹಳ್ಳಿಯಲ್ಲಿರುವ ಸಂಸ್ಥೆಯ ಕ್ಯಾಂಪಸ್‌ನಲ್ಲಿ ನೇರ ಸಂದರ್ಶನವನ್ನು (Walk-in-interview) ಆಯೋಜಿಸಲಾಗಿದೆ.

ವಿವಿಧ ಪ್ರಾಜೆಕ್ಟ್ ಸ್ಟಾಫ್ ಹುದ್ದೆಗಳ ಭರ್ತಿ:

ಸಿಎಸ್ಐಆರ್-ಎನ್ಎಎಲ್ ಸಂಸ್ಥೆಯು ತನ್ನ ವಿವಿಧ ನಡೆಡುತ್ತಿರುವ ಸಂಶೋಧನೆ ಹಾಗೂ ಅಭಿವೃದ್ಧಿ ಯೋಜನೆಗಳಿಗಾಗಿ (Projects) ಈ ನೇಮಕಾತಿಯನ್ನು ಮಾಡಿಕೊಳ್ಳುತ್ತಿದೆ. ಪ್ರಕಟಣೆ ಸಂಖ್ಯೆ 12/2026/PS ಅಡಿಯಲ್ಲಿ ‘ಪ್ರಾಜೆಕ್ಟ್ ಸ್ಟಾಫ್’ (Project Staff) ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಗತ್ಯ ಶೈಕ್ಷಣಿಕ ಅರ್ಹತೆ ಮತ್ತು ಕೌಶಲ್ಯ ಹೊಂದಿರುವ ಆಸಕ್ತ ಉದ್ಯೋಗಾಕಾಂಕ್ಷಿಗಳು ಈ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ನೇರ ಸಂದರ್ಶನ ನಡೆಯುವ ಪ್ರಮುಖ ದಿನಾಂಕಗಳು:

ಈ ಉದ್ಯೋಗ ನೇಮಕಾತಿಯ ಸಂದರ್ಶನಗಳನ್ನು ವಿವಿಧ ಹಂತಗಳಲ್ಲಿ ನಡೆಸಲು ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಅರ್ಹ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ಜೂನ್ 19, ಜೂನ್ 22,ಜೂನ್ 24 ಮತ್ತು ಜೂನ್ 29 ರಂದು ನಡೆಯುವ ವಾಕ್-ಇನ್ ಇಂಟರ್ವ್ಯೂಗೆ ಹಾಜರಾಗಲು ಸೂಚಿಸಲಾಗಿದೆ. ಪ್ರತಿಯೊಂದು ಹುದ್ದೆಯ ಅವಶ್ಯಕತೆಗೆ ತಕ್ಕಂತೆ ನಿಗದಿತ ದಿನಗಳಂದು ಸಂದರ್ಶನ ಪ್ರಕ್ರಿಯೆಗಳು ಜರುಗಲಿವೆ.

ಇದನ್ನೂ ಓದಿ: ಲಿಖಿತ ಪರೀಕ್ಷೆಯಿಲ್ಲದೆ ಸಿಗಲಿದೆ ತಿಂಗಳಿಗೆ 2.25 ಲಕ್ಷ ರೂ. ಸಂಬಳದ ಉದ್ಯೋಗ! ಅರ್ಜಿ ಸಲ್ಲಿಸುವುದು ಹೇಗೆ?

ಹೆಚ್ಕಿನ ಮಾಹಿತಿ ಮತ್ತು ಅಧಿಕೃತ ವೆಬ್‌ಸೈಟ್ ವಿವರ:

ಈ ಹುದ್ದೆಗಳಿಗೆ ಇರಬೇಕಾದ ನಿಖರವಾದ ಶೈಕ್ಷಣಿಕ ಅರ್ಹತೆ, ವಯೋಮಿತಿ, ಮಾಸಿಕ ವೇತನ ಮತ್ತು ಸಂದರ್ಶನ ನಡೆಯುವ ನಿಖರ ಸಮಯದ ಸಂಪೂರ್ಣ ವಿವರಗಳನ್ನು ತಿಳಿಯಲು ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ. ಹೆಚ್ಚಿನ ಮಾಹಿತಿಗಾಗಿ ಮತ್ತು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಅಭ್ಯರ್ಥಿಗಳು www.nal.res.in ವೆಬ್‌ಸೈಟ್‌ಗೆ ಭೇಟಿ ನೀಡುವಂತೆ ಸಿಎಸ್ಐಆರ್-ಎನ್ಎಎಲ್ ನ ಆಡಳಿತದ ಹಿರಿಯ ನಿಯಂತ್ರಕರು (Sr. Controller of Administration) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್