ಸಿಟಿ ರವಿ ಕೇಸ್​ ಬೆಳೆಸುವುದು ಬೇಡವೆಂದು ಸಿಎಂ, ಗೃಹ ಸಚಿವರು ಹೇಳಿಲ್ವಾ? ವಿ ಸೋಮಣ್ಣ ಹೊಸ ಬಾಂಬ್

ಕೇಂದ್ರ ಸಚಿವ ವಿ. ಸೋಮಣ್ಣ ಅವರು ಸಿಟಿ ರವಿ ಅಶ್ಲೀಲ ಪದ ಬಳಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ. ಪರಮೇಶ್ವರ್ ಅವರ ಪಾತ್ರವನ್ನು ಪ್ರಶ್ನಿಸಿದ್ದಾರೆ. ಈ ಪ್ರಕರಣ ಬೆಳೆಸುವುದು ಬೇಡ, ಇಲ್ಲಿಗೆ ಬಿಟ್ಟು ಬಿಡಿ ಎಂದು ಸಿಎಂ, ಗೃಹಸಚಿವರು ಹೇಳಿಲ್ಲವಾ? ಇಬ್ಬರು ಅವರ ಆತ್ಮಸಾಕ್ಷಿ ಸಮೇತ ಹೇಳಲಿ ಎಂದಿದ್ದಾರೆ.

ಸಿಟಿ ರವಿ ಕೇಸ್​ ಬೆಳೆಸುವುದು ಬೇಡವೆಂದು ಸಿಎಂ, ಗೃಹ ಸಚಿವರು ಹೇಳಿಲ್ವಾ? ವಿ ಸೋಮಣ್ಣ ಹೊಸ ಬಾಂಬ್
ಸಿಟಿ ರವಿ ಕೇಸ್​ ಬೆಳೆಸುವುದು ಬೇಡವೆಂದು ಸಿಎಂ, ಗೃಹ ಸಚಿವರು ಹೇಳಿಲ್ವಾ? ವಿ ಸೋಮಣ್ಣ ಹೊಸ ಬಾಂಬ್
Follow us
ರಾಮ್​, ಮೈಸೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Dec 23, 2024 | 8:14 PM

ಮೈಸೂರು, ಡಿಸೆಂಬರ್​ 23: ಸಿಟಿ ರವಿ ಅಶ್ಲೀಲ ಪದ ಬಳಕೆ ಆರೋಪ ಪ್ರಕರಣ ನಾನಾ ಸ್ವರೂಪ ಮತ್ತು ಪೊಲಿಟಿಕಲ್ ಟರ್ನ್​ ಪಡೆದುಕೊಳ್ಳುತ್ತಿರುವ ಮಧ್ಯೆ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಗೃಹ ಸಚಿವ ಜಿ. ಪರಮೇಶ್ವರ್​ ಅವರಿಗೆ ಪ್ರಕರಣ ಬೆಳಸಬಾರದು ಎಂಬ ನಿಲ್ಲುವಿತ್ತು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಪ್ರಕರಣ ವಿಚಾರವಾಗಿ ಅವರ ನಿಲ್ಲುವು ಏನಿತ್ತು ಎಂಬುದನ್ನು ತಮ್ಮ ಆತ್ಮಸಾಕ್ಷಿಯಾಗಿ ಹೇಳಿ ಎಂದು ಸವಾಲು ಹಾಕಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಶುರು ಮಾಡಿದೆ. ಸ್ಪೀಕರ್​​​ ತನಿಖೆ ಮಾಡಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಿ ನಮ್ಮದೇನು ಅಭ್ಯಂತರ ಇಲ್ಲ. ನಮ್ಮದೇ ತಪ್ಪಾಗಿದ್ದರು ನಾವು ಅದನ್ನು ಸ್ವೀಕರಿಸುತ್ತೇವೆ‌. ಅದು ಬಿಟ್ಟು ಸಿ.ಟಿ.ರವಿಗೆ ಟಾರ್ಚರ್​ ಕೊಟ್ಟಿದ್ದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್ ಯಾರಿಗೆ ಬೇಕಾದರೂ ದೂರು ಕೊಡಲಿ

ಸಿದ್ದರಾಮಯ್ಯ ಸರ್ಕಾರದಲ್ಲಿ ಖಜಾನೆ ಖಾಲಿಯಾಗಿದೆ. ರಾಜ್ಯ ಸರ್ಕಾರದಲ್ಲಿ ಬಹಳಷ್ಟು ಹುಳುಕು ಶುರುವಾಗಿವೆ. ಹುಳುಕು ಮುಚ್ಚಿಕೊಳ್ಳಲು ಈ ವಿಚಾರ ದೊಡ್ಡದು ಮಾಡುತ್ತಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್​ ಕೇಂದ್ರದಲ್ಲಿ ಯಾರಿಗಾದರೂ ದೂರು ಕೊಡಲಿ ತೊಂದ್ರೆ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾನು ಕೊಟ್ಟ ದೂರಿನ ಬಗ್ಗೆ ಯಾಕೆ ಕ್ರಮ ಕೈಗೊಂಡಿಲ್ಲ?; ಚಿಕ್ಕಮಗಳೂರಿನಲ್ಲಿ ಸಿ.ಟಿ ರವಿ ಸುದ್ದಿಗೋಷ್ಠಿ

ಸಿದ್ದರಾಮಯ್ಯ ಅವರ ಕಾಲದಲ್ಲಿ ಈ ರೀತಿಯ ರಾಜಕಾರಣ ಶುರುವಾಗಿರುವುದು ನನಗೆ ಬೇಸರ ಮೂಡಿಸುತ್ತಿದೆ. ಸದನದ ವಿಚಾರ ಸ್ಪೀಕರ್ ತೀರ್ಮಾನವೇ ಅಂತಿಮ. ಪ್ರಕರಣದಲ್ಲಿ ಯಾರದು ತಪ್ಪಿದೆ ಎಂಬುದನ್ನ ಸ್ಪೀಕರ್ ತನಿಖೆ ಮಾಡಿಸಿ ಕ್ರಮ ಕೈಗೊಳ್ಳಲಿ. ಇದು ಸದನದ ವಿಚಾರ ಅದನ್ನು ಎಲ್ಲಿ, ಹೇಗೆ ಮಾತನಾಡಬೇಕು ಎಂಬುದಕ್ಕೆ ಕಾನೂನು ಇದೆ. ಅದರ ವ್ಯಾಪ್ತಿಯಲ್ಲಿ ಎಲ್ಲರೂ ಇರಬೇಕು ಎಂದಿದ್ದಾರೆ.

ರಾಹುಲ್ ಗಾಂಧಿ ಸಂಸತ್​ನಲ್ಲಿ ಮಕ್ಕಳ ರೀತಿ ವರ್ತಿಸ್ತಿದ್ದಾರೆ

ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಅವರು, ಅಮಿತ್​ ಶಾ ಹೇಳಿಕೆ ತಿರುಚಿ ಕಾಂಗ್ರೆಸ್​ ಹೋರಾಟ ಮಾಡುತ್ತಿದೆ. ಪ್ರಧಾನಿ ಮೋದಿ ಸರ್ಕಾರದ ಬಗ್ಗೆ ಅವರಿಗೆ ಏನು ವಿಚಾರ ಇಲ್ಲ. ಬಿಜೆಪಿ ವಿರುದ್ಧ ಜನರನ್ನ ಎತ್ತಿಕಟ್ಟಲು ಈ‌ ಕೆಲಸ ನಡೆಯುತ್ತಿದೆ ಎಂದು ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸಿಟಿ ರವಿ ವಿರುದ್ಧ ರಾಷ್ಟ್ರಪತಿಗೆ ಪತ್ರ ಬರೆಯುವೆ, ಪ್ರಧಾನಿ ಮೋದಿ ಭೇಟಿ ಮಾಡುವೆ: ಲಕ್ಷ್ಮೀ ಹೆಬ್ಬಾಳ್ಕರ್

ಉತ್ತರ ಭಾರತದಲ್ಲಿ ಅಮಿತ್ ಶಾ ವಿರುದ್ಧ ಹೋರಾಟದ ಸದ್ದಿಲ್ಲ. ಜನರನ್ನ ಕಾಂಗ್ರೆಸ್​​ ದಡ್ಡರು ಎಂದು ಭಾವಿಸಿ ಸುಳ್ಳು ಹೇಳುತ್ತಿದೆ. ರಾಜ್ಯದ ಜನ ಕಾಂಗ್ರೆಸ್ ಪಕ್ಷದ ಸುಳ್ಳು ನಂಬಿ ದಡ್ಡರಾಗಿದ್ದಾರೆ. ಈ ಬಾರಿ ಆ ದಡ್ಡತನ ಮಾಡುವುದಿಲ್ಲ. ರಾಹುಲ್ ಗಾಂಧಿ ಸಂಸತ್​ನಲ್ಲಿ ಮಕ್ಕಳ ರೀತಿ ವರ್ತಿಸ್ತಿದ್ದಾರೆ. ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳ ಯಾವ ಆಟಗಳು ನಡೆಯಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜಾಮೀನು ಸಿಕ್ಕಿದ್ದಕ್ಕೆ ಚಾಮುಂಡಿ ಬೆಟ್ಟದಲ್ಲಿ ಹರಿಕೆ ತೀರಿಸಿದ ವಿಜಯಲಕ್ಷ್ಮಿ
ಜಾಮೀನು ಸಿಕ್ಕಿದ್ದಕ್ಕೆ ಚಾಮುಂಡಿ ಬೆಟ್ಟದಲ್ಲಿ ಹರಿಕೆ ತೀರಿಸಿದ ವಿಜಯಲಕ್ಷ್ಮಿ
ಸಿಟಿ ರವಿ ವಿರುದ್ಧ ರಾಷ್ಟ್ರಪತಿಗೆ ಪತ್ರ, ಮೋದಿ ಭೇಟಿ ಮಾಡುವೆ: ಹೆಬ್ಬಾಳ್ಕರ್
ಸಿಟಿ ರವಿ ವಿರುದ್ಧ ರಾಷ್ಟ್ರಪತಿಗೆ ಪತ್ರ, ಮೋದಿ ಭೇಟಿ ಮಾಡುವೆ: ಹೆಬ್ಬಾಳ್ಕರ್
ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ: ಕುಮಾರಸ್ವಾಮಿ ಗುಡ್ ನ್ಯೂಸ್
ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ: ಕುಮಾರಸ್ವಾಮಿ ಗುಡ್ ನ್ಯೂಸ್
ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
ಕೊಹ್ಲಿ, ರೋಹಿತ್ ತಂಡಗಳನ್ನು ಸೋಲಿಸಿ 25 ಸಾವಿರ ರೂ. ಗೆದ್ದ ಯುವ ಆಟಗಾರ
ಕೊಹ್ಲಿ, ರೋಹಿತ್ ತಂಡಗಳನ್ನು ಸೋಲಿಸಿ 25 ಸಾವಿರ ರೂ. ಗೆದ್ದ ಯುವ ಆಟಗಾರ
ಬಳ್ಳಾರಿ: ಮನೆಯಿಂದ ದೂರವಾಗಿ 25 ವರ್ಷಗಳ ಬಳಿಕ ಪತ್ತೆಯಾದ ಮಹಿಳೆ
ಬಳ್ಳಾರಿ: ಮನೆಯಿಂದ ದೂರವಾಗಿ 25 ವರ್ಷಗಳ ಬಳಿಕ ಪತ್ತೆಯಾದ ಮಹಿಳೆ
ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ
ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ