ಬೆಂಗಳೂರು, ಡಿಸೆಂಬರ್ 20: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬೆಳಗಾವಿ ಪೊಲೀಸರ ವಶದಲ್ಲಿರುವ ಬಿಜೆಪಿ ಎಂಎಲ್ಸಿ ಸಿಟಿ ರವಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜತೆಗೆ, ತಮಗೆ ಜೀವಕ್ಕೆ ಅಪಾಯವಿದ್ದು ಏನೇ ಆದರೂ ಅದಕ್ಕೆ ಪೊಲೀಸರು ಹಾಗೂ ಡಿಸಿಎಂ ಡಿಕೆ ಶಿವಕುಮಾರ್, ಸಚಿವೆ ಹೆಬ್ಬಾಳ್ಕರ್ ಕಾರಣ ಎಂದು ವಿಡಿಯೋ ಸಂದೇಶ ಪ್ರಕಟಿಸಿದ್ದಾರೆ. ಇಷ್ಟೇ ಅಲ್ಲದೆ, ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಸರಣಿ ಆರೋಪಗಳನ್ನು ಮಾಡಿದ್ದಾರೆ.
ಪೊಲೀಸ್ ಕಸ್ಟಡಿಯಲ್ಲಿ ತಲೆಗೆ ಆದ ಗಾಯಕ್ಕೆ ಪ್ರಥಮ ಚಿಕಿತ್ಸೆ ಕೊಡಿಸಲು ಮೂರು ಗಂಟೆ ತೆಗೆದುಕೊಂಡ ಕರ್ನಾಟಕ ಪೊಲೀಸರು, ಈಗ ಕಳೆದ ಐದಾರು ಗಂಟೆಗಳಿಂದ ಪೊಲೀಸ್ ವಾಹನದಲ್ಲಿ ಕೂರಿಸಿಕೊಂಡು ಸುತ್ತಾಡಿಸುತಿದ್ದಾರೆ. ನಿರ್ಜನ ಪ್ರದೇಶದಲ್ಲಿ ವಾಹನ ನಿಲ್ಲಿಸಿ, ಫೋನ್ನಲ್ಲಿ ಮಾತುಕತೆ ನಡೆಸುತ್ತಾ ಏನೋ ಷಡ್ಯಂತ್ರ ಮಾಡುತ್ತಿದ್ದಾರೆ. ನನಗಾಗುವ ಯಾವುದೇ ತೊಂದರೆಗೆ ಪೊಲೀಸ್ ಇಲಾಖೆ ಹಾಗು ಕಾಂಗ್ರೇಸ್ ಸರ್ಕಾರವೇ ಕಾರಣ ಎಂದು ಅವರು ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.
ಪೊಲೀಸ್ ಕಸ್ಟಡಿಯಲ್ಲಿ ತಲೆಗೆ ಆದ ಗಾಯಕ್ಕೆ ಪ್ರಥಮ ಚಿಕಿತ್ಸೆ ಕೊಡಿಸಲು ಮೂರು ಗಂಟೆ ತೆಗೆದುಕೊಂಡ ಕರ್ನಾಟಕ ಪೊಲೀಸರು. ಈಗ ಕಳೆದ ಐದಾರು ಗಂಟೆಗಳಿಂದ ಪೊಲೀಸ್ ವಾಹನದಲ್ಲಿ ಕೂರಿಸಿಕೊಂಡು ಸುತ್ತಾಡಿಸುತಿದ್ದಾರೆ.
ನಿರ್ಜನ ಪ್ರದೇಶದಲ್ಲಿ ವಾಹನ ನಿಲ್ಲಿಸಿ, ಫೋನ್ ನಲ್ಲಿ ಮಾತುಕತೆ ನಡೆಸುತ್ತಾ ಏನೋ ಷಡ್ಯಂತ್ರ ಮಾಡುತ್ತಿದ್ದಾರೆ. ನನಗಾಗುವ ಯಾವುದೇ… pic.twitter.com/kNDzbmL2Rr
— C T Ravi 🇮🇳 ಸಿ ಟಿ ರವಿ (@CTRavi_BJP) December 19, 2024
ಮತ್ತೊಂದೆಡೆ, ಬೆಳಗ್ಗೆ 5 ಗಂಟೆ ಸುಮಾರಿಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ನನ್ನನ್ನು ಖಾನಾಪುರ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಯಾವ ಮೊಕದ್ದಮೆ ದಾಖಲಾಗಿದೆ ಎಂಬ ಮಾಹಿತಿಯನ್ನೂ ನೀಡಿಲ್ಲ. ನಾನು ಕೊಟ್ಟ ದೂರನ್ನು ಗಂಟೆಗಟ್ಟಲೆ ಕಾದರೂ ತೆಗೆದುಕೊಂಡಿಲ್ಲ. ಜೀರೋ ಎಫ್ಐಆರ್ ಕೂಡ ಮಾಡಿಲ್ಲ. ಇಲ್ಲಿಂದ ಎಲ್ಲಿಗೆ ಕರೆದುಕೊಂಡು ಹೋಗುತ್ತಾರೆಂದು ಗೊತ್ತಿಲ್ಲ. ಎಫ್‌ಐಆರ್‌ನಲ್ಲಿ ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ 3 ಗಂಟೆ ಕಳೆದಿದೆ. ಪೊಲೀಸ್ ಠಾಣೆಗೆ ಮತ್ತು ನನ್ನನ್ನು ಪೊಲೀಸ್ ಠಾಣೆಗೆ ಏಕೆ ಕರೆತರಲಾಗಿದೆ ಎಂದು ಹೇಳಿಲ್ಲ, ಡಿಸಿಎಂ ಡಿಕೆ ಶಿವಕುಮಾರ್, ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ತಂಡ ನನ್ನನ್ನು ಅಪರಾಧಿಯಂತೆ ನಡೆಸಿಕೊಳ್ಳುತ್ತಿದೆ. ನಾನು ಸಚಿವನಾಗಿ ಕೆಲಸ ಮಾಡಿದ್ದೇನೆ, ಜನಪ್ರತಿನಿಧಿಯಾಗಿದ್ದೇನೆ. ಅಪರಾಧಿಯನ್ನು ನಡೆಸಿಕೊಳ್ಳುವಂತೆ ನನ್ನನ್ನು ನಡೆಸಿಕೊಳ್ಳಲಾಗುತ್ತಿದೆ. ತುರ್ತು ಪರಿಸ್ಥಿತಿಯಲ್ಲಿ ನಡೆದುಕೊಂಡ ರೀತಿಯಲ್ಲಿಯೇ ನಡೆದುಕೊಳ್ಳುತ್ತಿದ್ದಾರೆ ಎಂದು ವಿಡಿಯೋ ಸಂದೇಶದಲ್ಲಿ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಬ್ಬ ಮಾಜಿ ಸಚಿವರು, ಹಾಲಿ ಶಾಸಕರೇ ತಮ್ಮ ಜೀವಕ್ಕೆ ಅಪಾಯವಿದೆ, @INCKarnataka ಸರ್ಕಾರ ಕೊಲೆ ಮಾಡಲು ಸಂಚು ರೂಪಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಗೃಹ ಇಲಾಖೆ ತಾಲಿಬಾನಿಗಳ ಕೈಯಲ್ಲಿದೆಯೋ ಅಥವಾ ತಾಲೀಬಾನಿಗಳ ಸರ್ಕಾರ ರಾಜ್ಯದಲ್ಲಿದೆಯೋ?#WeStandWithCTRavi #Dictatorship #EmergencyInKarnataka pic.twitter.com/y2qxWQG2z0
— BJP Karnataka (@BJP4Karnataka) December 20, 2024
ಇನ್ನು ಸಿಟಿ ರವಿ ಅವರನ್ನು ಪೊಲೀಸರು ನಡೆಸಿಕೊಳ್ಳುತ್ತಿರುವ ರೀತಿ ಬಗ್ಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಒಬ್ಬ ಮಾಜಿ ಸಚಿವರು, ಹಾಲಿ ಶಾಸಕರೇ ತಮ್ಮ ಜೀವಕ್ಕೆ ಅಪಾಯವಿದೆ, ಕಾಂಗ್ರೆಸ್ ಸರ್ಕಾರ ಕೊಲೆ ಮಾಡಲು ಸಂಚು ರೂಪಿಸುತ್ತಿದೆ ಎಂದು ಆರೋಪಿಸಿದ್ದಾರೆ. ಗೃಹ ಇಲಾಖೆ ತಾಲಿಬಾನಿಗಳ ಕೈಯಲ್ಲಿದೆಯೋ ಅಥವಾ ತಾಲೀಬಾನಿಗಳ ಸರ್ಕಾರ ರಾಜ್ಯದಲ್ಲಿದೆಯೋ ಎಂದು ಬಿಜೆಪಿ ಪ್ರಶ್ನಿಸಿದೆ.
ಇದನ್ನೂ ಓದಿ: ಸಿಟಿ ರವಿ ಬಂಧನ: ರಕ್ತ ಸೋರುತ್ತಿದ್ದರೂ ರಾತ್ರಿಯೆಲ್ಲ ಕಾರಿನಲ್ಲೇ ಊರೂರು ಸುತ್ತಾಡಿಸಿದ ಪೊಲೀಸರು!
ಏತನ್ಮಧ್ಯೆ, ರವಿ ಬಂಧನ ಖಂಡಿಸಿ ಚಿಕ್ಕಮಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ ತೀವ್ರಗೊಂಡಿದೆ. ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆ ಮಾಡಲಾಗುತ್ತಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:24 am, Fri, 20 December 24