ಸಿಡಿ ಲೇಡಿಗೆ ಪೊಲೀಸರಿಂದ ಮತ್ತೊಂದು ನೋಟಿಸ್ ಜಾರಿ; ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ
ರಮೇಶ್ ಜಾರಕಿಹೊಳಿ ಸಿಡಿ ಕೇಸ್ಗೆ ಸಂಬಂಧಿಸಿದಂತೆ ಸಿಡಿ ಲೇಡಿಗೆ ಕಬ್ಬನ್ಪಾರ್ಕ್ ಠಾಣೆ ಪೊಲೀಸರಿಂದ ನೋಟಿಸ್ ಜಾರಿಯಾಗಿದೆ. ನಾಳೆ ಬೆಳಗ್ಗೆ 10ಕ್ಕೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಕೇಸ್ಗೆ ಸಂಬಂಧಿಸಿದಂತೆ ಸಿಡಿ ಲೇಡಿಗೆ ಕಬ್ಬನ್ಪಾರ್ಕ್ ಠಾಣೆ ಪೊಲೀಸರಿಂದ ನೋಟಿಸ್ ಜಾರಿಯಾಗಿದೆ. ನಾಳೆ ಬೆಳಗ್ಗೆ 10ಕ್ಕೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಸಿಡಿ ಲೇಡಿ ಪರ ವಕೀಲ ಜಗದೀಶ್ ದೂರು ನೀಡಿದ್ದ ಹಿನ್ನೆಲೆಯಲ್ಲಿ ಸಂತ್ರಸ್ತೆ ವೈದ್ಯಕೀಯ ಪರೀಕ್ಷೆಗಾಗಿ ಹಾಜರಾಗಬೇಕಿದೆ. CRPC ಸೆಕ್ಷನ್ 161ರಡಿ ತನಿಖಾಧಿಕಾರಿ ಮುಂದೆ ಹಾಜರಾಗಿ 161ರ ಅಡಿಯಲ್ಲಿ, ಮ್ಯಾಜಿಸ್ಟ್ರೇಟ್ ಮುಂದೆ 164ರ ಅಡಿಯಲ್ಲಿ ಹೇಳಿಕೆ ನೀಡಬೇಕಿದೆ. ಜೊತೆಗೆ, ಅಪರಾಧ ನಡೆದ ಸ್ಥಳ ಗುರುತಿಸುವಿಕೆ, ಪಂಚನಾಮೆ ಸಂದರ್ಭದಲ್ಲಿ ಖುದ್ದು ಹಾಜರಾಗಬೇಕಿರುವ ಅಗತ್ಯವಿರುವುದರಿಂದ ನಾಳೆ ಬೆಳಿಗ್ಗೆ 10 ಗಂಟೆಗೆ ಕಬ್ಬನ್ ಪಾರ್ಕ್ ಠಾಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ಇತ್ತ, ಯುವತಿ ಹೇಳಿಕೆ ಕೊಡಿಸಲು ಕೋರಿದ್ದ ಅರ್ಜಿ ಪರಿಗಣನೆಯಾಗಿದೆ ಎಂದು ಅರ್ಜಿ ಹಾಕಿದ್ದ ಸಂತ್ರಸ್ತೆ ಪರ ವಕೀಲ ಜಗದೀಶ್ ಅವರ ಟೀಮ್ ಟಿವಿ9ಗೆ ಮಾಹಿತಿ ನೀಡಿದೆ. ಜಡ್ಜ್ ಮುಂದೆ ಹೇಳಿಕೆ ಕೊಡಿಸಲು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಇದೀಗ, ಕೋರ್ಟ್ ಇ-ಮೇಲ್ ಸೂಚನೆಗೆ ಕಾಯಲು ತೀರ್ಮಾನ ಮಾಡಲಾಗಿದೆ ಎಂದು ಜಗದೀಶ್ ಅವರ ಟೀಂ ಮಾಹಿತಿ ನೀಡಿದೆ. ಯುವತಿ ಯಾವಾಗ ಹಾಜರುಪಡಿಸಿಬೇಕೆಂಬ ಸೂಚನೆಗಾಗಿ ಮ್ಯಾಜಿಸ್ಟ್ರೇಟ್ ಕೋರ್ಟ್ ಡೆಪ್ಯೂಟಿ ರಿಜಿಸ್ಟ್ರಾರ್‌ಗೆ ವಕೀಲ ಜಗದೀಶ್ ಅರ್ಜಿ ಸಲ್ಲಿಸಿದ್ದಾರೆ.
ಬೆಳಗಾವಿಗೆ ತೆರಳಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇತ್ತ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿಗೆ ತೆರಳಿದ್ದಾರೆ. ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮಾಜಿ ಕೇಂದ್ರ ಸಚಿವ ದಿ.ಸುರೇಶ್ ಅಂಗಡಿಯವರ ಪತ್ನಿ. ಹೀಗಾಗಿ, ಮಂಗಳಾ ಅವರ ನಾಮಪತ್ರ ಸಲ್ಲಿಕೆಯ ವೇಳೆ ರಮೇಶ್ ಉಪಸ್ಥಿತರಿರುವ ಸಾಧ್ಯತೆಯಿದೆ.
ಇದನ್ನೂ ಓದಿ: ‘ಟಗರು’ಗೆ ಮೇಕೆ ಗಿಫ್ಟ್ ಕೊಟ್ಟು ಕೇಕೆ ಹಾಕಿದ ಅಭಿಮಾನಿಗಳು; ಮೇಕೆಯನ್ನು ಕಾಂಗ್ರೆಸ್ಗೆ ಬರಮಾಡಿಕೊಂಡ ಡಿಕೆಶಿ!