ವೇಶ್ಯಾಗೃಹದ ದಾಳಿ ವೇಳೆ ಸಿಕ್ಕಿಬಿದ್ದ ಗ್ರಾಹಕನನ್ನು ಬಂಧಿಸುವಂತಿಲ್ಲ; ಕರ್ನಾಟಕ ಹೈಕೋರ್ಟ್​ ಆದೇಶ

ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ ಅರ್ಜಿದಾರರು ವೇಶ್ಯಾಗೃಹದಲ್ಲಿ ಗ್ರಾಹಕರಾಗಿದ್ದರು. ಅವರು ವೇಶ್ಯಾಗೃಹಕ್ಕೆ ಹೋದಾಗಲೇ ಅಲ್ಲಿ ದಾಳಿ ನಡೆದಿತ್ತು.

ವೇಶ್ಯಾಗೃಹದ ದಾಳಿ ವೇಳೆ ಸಿಕ್ಕಿಬಿದ್ದ ಗ್ರಾಹಕನನ್ನು ಬಂಧಿಸುವಂತಿಲ್ಲ; ಕರ್ನಾಟಕ ಹೈಕೋರ್ಟ್​ ಆದೇಶ
ಕರ್ನಾಟಕ ಹೈಕೋರ್ಟ್
Follow us
| Updated By: ಡಾ. ಭಾಸ್ಕರ ಹೆಗಡೆ

Updated on:Apr 12, 2022 | 6:13 PM

ಬೆಂಗಳೂರು: ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿ ಪತ್ತೆಯಾದ ಗ್ರಾಹಕನ ವಿರುದ್ಧ ಅನೈತಿಕ ಕಳ್ಳಸಾಗಣೆಯ ಅಪರಾಧಗಳಿಗಾಗಿ ಕಾನೂನು ಕ್ರಮ ಜರುಗಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ಪುನರುಚ್ಚರಿಸಿದೆ. ದಾಳಿ ವೇಳೆ ವೇಶ್ಯಾಗೃಹದಲ್ಲಿರುವ ಗ್ರಾಹಕರನ್ನು ಕ್ರಿಮಿನಲ್ ಮೊಕದ್ದಮೆಗೆ ಒಳಪಡಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್​ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಆದೇಶಿಸಿದ್ದಾರೆ.

ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ ಅರ್ಜಿದಾರರು ವೇಶ್ಯಾಗೃಹದಲ್ಲಿ ಗ್ರಾಹಕರಾಗಿದ್ದರು. ಅವರು ವೇಶ್ಯಾಗೃಹಕ್ಕೆ ಹೋದಾಗಲೇ ಅಲ್ಲಿ ದಾಳಿ ನಡೆದಿತ್ತು. ಹೀಗಾಗಿ, ಆತನನ್ನು ಕೂಡ ಬಂಧಿಸಿ, ಆತನ ವಿರುದ್ದ ಸೆಕ್ಷನ್ 3 (ವೇಶ್ಯಾಗೃಹ ಇರಿಸುವ ಶಿಕ್ಷೆ ಅಥವಾ ಆವರಣವನ್ನು ವೇಶ್ಯಾವಾಟಿಕೆಯಾಗಿ ಬಳಸಲು ಅನುಮತಿ), ಐಪಿಸಿ ಸೆಕ್ಷನ್ 4 (ವೇಶ್ಯಾವಾಟಿಕೆಯ ಗಳಿಕೆಯ ಮೇಲೆ ಜೀವನ), ಸೆಕ್ಷನ್ 5 (ವೇಶ್ಯಾವಾಟಿಕೆಗಾಗಿ ವ್ಯಕ್ತಿಯನ್ನು ಪ್ರೇರೇಪಿಸುವುದು ಅಥವಾ ಕರೆದೊಯ್ಯುವುದು) ಮತ್ತು ಅನೈತಿಕ ಸಂಚಾರ ತಡೆ ಕಾಯ್ದೆ (ITPA) ಮತ್ತು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 370 (ವ್ಯಕ್ತಿಗಳ ಕಳ್ಳಸಾಗಣೆ) ಸೆಕ್ಷನ್ 6 (ವೇಶ್ಯಾವಾಟಿಕೆ ನಡೆಸುವ ಆವರಣದಲ್ಲಿ ವ್ಯಕ್ತಿಯನ್ನು ಬಂಧಿಸುವುದು) ಕೇಸ್ ದಾಖಲಿಸಲಾಗಿತ್ತು.

ತನ್ನ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಆ ಅರ್ಜಿದಾರ ಹೈಕೋರ್ಟ್​ ಮೊರೆ ಹೋಗಿದ್ದರು. ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿರುವ ಗ್ರಾಹಕರು ವೇಶ್ಯಾಗೃಹವನ್ನು ಇಟ್ಟುಕೊಳ್ಳುವುದಿಲ್ಲ ಅಥವಾ ಆವರಣವನ್ನು ವೇಶ್ಯಾವಾಟಿಕೆಯಾಗಿ ಬಳಸಲು ಅನುಮತಿಸುವುದಿಲ್ಲ, ವೇಶ್ಯಾವಾಟಿಕೆಗೆ ಪ್ರೇರೇಪಿಸುವುದೂ ಇಲ್ಲ ಎಂಬ ಅಂಶವನ್ನು ಗಮನಿಸಿದ ಹೈಕೋರ್ಟ್​ ಆ ಅರ್ಜಿದಾರನ ಅರ್ಜಿಯನ್ನು ಅಂಗೀಕರಿಸಿತು ಮತ್ತು ಅರ್ಜಿದಾರರ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆಗಳನ್ನು ರದ್ದುಗೊಳಿಸಿದೆ.

ಇದನ್ನೂ ಓದಿ: ಆದಾಯ ಮೀರಿ ಆಸ್ತಿ ಗಳಿಕೆ: ರವಿ ಡಿ. ಚನ್ನಣ್ಣನವರ್ ವಿರುದ್ಧ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ ಕೆಎನ್ ಜಗದೀಶ್

Crime Updates: ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿ ಹೈಟೆಕ್ ವೇಶ್ಯಾವಾಟಿಕೆ, ಪ್ರೇಮಿ ಜೊತೆ ಸೇರಿ ಗಂಡನ ಕೊಲೆ

Published On - 6:10 pm, Tue, 12 April 22

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ