ತಮಿಳುನಾಡಿಗೆ ಮತ್ತೆ 5000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ CWRC ಆದೇಶ

ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ರೈತರು ಭಾರೀ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಇಂದು ನಡೆದ CWRC ಸಭೆಯಲ್ಲಿ ಮತ್ತೆ ತಮಿಳುನಾಡಿಗೆ 15 ದಿನ 5000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಕರ್ನಾಟಕದ ಅಧಿಕಾರಿಗಳು, ಯಾವುದೇ ಕಾರಣಕ್ಕೂ ನೀರು ಬಿಡಲು ಸಾಧ್ಯವಿಲ್ಲ ಎಂದಿದ್ದಾರೆ.

ತಮಿಳುನಾಡಿಗೆ ಮತ್ತೆ 5000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ CWRC ಆದೇಶ
ತಮಿಳುನಾಡಿಗೆ ಮತ್ತೆ 5000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶಿಸಿದ CWRC
Follow us
| Updated By: Rakesh Nayak Manchi

Updated on:Sep 12, 2023 | 6:09 PM

ನವದೆಹಲಿ, ಸೆ.12: ತಮಿಳುನಾಡಿಗೆ ಕಾವೇರಿ ನೀರು (Cauvery Water) ಹರಿಸದಂತೆ ರೈತರು ಭಾರೀ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಇಂದು ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ ಮತ್ತೆ ತಮಿಳುನಾಡಿಗೆ (Tamil Nadu) 15 ದಿನ 5000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಕರ್ನಾಟಕದ (Karnataka) ಅಧಿಕಾರಿಗಳು, ಯಾವುದೇ ಕಾರಣಕ್ಕೂ ನೀರು ಬಿಡಲು ಸಾಧ್ಯವಿಲ್ಲ ಎಂದಿದ್ದಾರೆ.

ತಮಿಳುನಾಡಿಗೆ ನೀರು ಹರಿಸುವ ಬಗ್ಗೆ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ಇಂದು ನಡೆದಿದೆ. ವಿಡಿಯೋ ಕಾನ್ಫರೆನ್ಸ್​ ಮೂಲಕ ನಡೆದ ಸಮಿತಿ ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ಅಧಿಕಾರಿಗಳು ಭಾಗಿಯಾಗಿದ್ದರು. ಈ ಸಭೆಯಲ್ಲಿ ಮತ್ತೆ ತಮಿಳುನಾಡಿಗೆ ನೀರು ಹರಿಸಲು ಸೂಚನೆ ನೀಡಿರುವುದು ಕರ್ನಾಟಕದಲ್ಲಿ ಅದರಲ್ಲೂ ಮಂಡ್ಯದಲ್ಲಿ ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ಹರಿಬಿಟ್ಟು ಕುಸಿಯುತ್ತಿದೆ KRS ಡ್ಯಾಂ ನೀರಿನ ಮಟ್ಟ, ನೀರು ಉಳಿಸಿಕೊಳ್ಳುವಂತೆ ಕಾವೇರಿ ನೀರಾವರಿ ನಿಗಮಕ್ಕೆ BWSSB ಪತ್ರ 

ತಮಿಳುನಾಡಿಗೆ ನೀರು ಹರಿಸುವಂತೆ ಸಿಡಬ್ಲ್ಯುಆರ್​ಸಿ ಆದೇಶ ಹೊರಡಿಸುತ್ತಿದ್ದಂತೆ ಮಂಡ್ಯದಲ್ಲಿ ನಡೆಯುತ್ತಿದ್ದ ರೈತರ ಪ್ರತಿಭಟನೆಯ ಕಾವು ಹೆಚ್ಚಾಗತೊಡಗಿದೆ. ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ಮುಂದುವರಿದಿದ್ದು, ಬೆಂಗಳೂರು, ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ಹೊರಹಾಕುತ್ತಿದ್ದಾರೆ. CWRC ಅಧಿಕಾರಿಗಳ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.

ತಮಿಳುನಾಡಿಗೆ ನೀರು ಹರಿಸದಂತೆ ಕಟೀಲ್ ಆಗ್ರಹ

ತಮಿಳುನಾಡಿಗೆ ನೀರು ಹರಿಸದಂತೆ ಸರ್ಕಾರ, ಸಿಎಂ ಸಿದ್ದರಾಮಯ್ಯ ಅವರಿಗೆ ಆಗ್ರಹಿಸುತ್ತೇವೆ ಎಂದು ಬೆಂಗಳೂರಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಹೇಳಿದ್ದಾರೆ. ನಮ್ಮ ರಾಜ್ಯದ ರೈತರ ಬೆಳೆಗೆ ನೀರಿಲ್ಲ, ಬೆಂಗಳೂರಿಗೆ ಕುಡಿಯಲು ನೀರಿಲ್ಲ. ಇಂತಹ ಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ಸರ್ಕಾರ ನೀರು ಬಿಡಬಾರದು. ಸುಪ್ರೀಂಕೋರ್ಟ್​ನಲ್ಲಿ ಸರ್ಕಾರ ಸಮರ್ಥವಾಗಿ ವಾದ ಮುಂದುವರಿಸಲಿ. ಕಾವೇರಿ ನೀರಿನ ವಿಚಾರದಲ್ಲಿ ನಾವು ರಾಜ್ಯ ಸರ್ಕಾರದ ಜತೆಗೆ ಇರುತ್ತೇವೆ ಎಂದರು.

ರಾಜ್ಯ ಸರ್ಕಾರ ಯಾವುದೇ ಕಾರಣಕ್ಕು ನೀರು ಬಿಡಬಾರದು: ರೈತ ಮುಖಂಡ

ರಾಜ್ಯ ಸರ್ಕಾರ ಯಾವುದೇ ಕಾರಣಕ್ಕು ನೀರು ಬಿಡಬಾರದು. ನೀರನ್ನು ಬಿಟ್ಟರೆ ನಾವು ಹೋರಾಟ ಮಾಡುತ್ತೇವೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ. ನಮ್ಮ ಜಲಾಶಯಗಳಲ್ಲಿ ನೀರಿಲ್ಲದೆ ಬರಿದಾಗಿದೆ. ಕುಡಿಯುವ ನೀರಿಗು ಸಮಸ್ಯೆ ಇದೆ. ನಮ್ಮ ರಾಜ್ಯದ ಎಂಪಿಗಳು ಇದನ್ನು ವಿರೋಧ ಮಾಡಬೇಕು. ನೀರನ್ನು ಬಿಟ್ಟರು ನಮಗೆ ನೀರು ಕೊಟ್ಟಿಲ್ಲ ಅಂತ ತಮಿಳುನಾಡು ಹೇಳುತ್ತದೆ. ಈ ರೀತಿಯ ವಾದ ತಮಿಳುನಾಡಿದ ಹೊಸದೇನಲ್ಲ. ಯಾವುದೇ ಕಾರಣಕ್ಕು ರಾಜ್ಯ ಸರ್ಕಾರ ನೀರನ್ನು ಬಿಡಬಾರದು. ಕೇಂದ್ರ ಇಲ್ಲಿಗೆ ತಜ್ಞರ ತಂಡ ಕಳುಹಿಸಲಿ. ಇಲ್ಲಿನ ಪರಿಸ್ಥಿತಿ ಅವಲೋಕನ ಮಾಡಲಿ. ರಾಜ್ಯ ಸರ್ಕಾರ ನೀರನ್ನು ಬಿಡುವ ಪ್ರಯತ್ನ ಮಾಡಿದ್ರೆ ನಾವು ಹೋರಾಟ ಮಾಡುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:32 pm, Tue, 12 September 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ