ಕಾವೇರಿ ನದಿ ನೀರು ವಿವಾದ: ಹೆಚ್ಚು ನೀರು ಬಿಡಬೇಕೆಂಬ ತಮಿಳುನಾಡು ಮನವಿಯನ್ನ ತಿರಸ್ಕರಿಸಿದ ಸಿಡಬ್ಯ್ಲೂಆರ್​​ಸಿ

Cauvery Water dispute: ರಾಜ್ಯಕ್ಕೆ ಬರಬೇಕಾದ 7.6 ಟಿಎಂಸಿ ನೀರು ಬಿಡುವಂತೆ ಕರ್ನಾಟಕ ಸರಕಾರಕ್ಕೆ ನಿರ್ದೇಶನ ನೀಡಬೇಕೆಂಬ ತಮಿಳುನಾಡು ಬೇಡಿಕೆಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿ ತಿರಸ್ಕರಿಸಿದೆ. 7.61 ಟಿಎಂಸಿ ಬಾಕಿ ಜೊತೆಗೆ ಫೆಬ್ರವರಿಯಿಂದ ಮೇ ತಿಂಗಳವರೆಗೆ ಪ್ರತಿ ತಿಂಗಳು 2.5 ಟಿಎಂಸಿ ನೀರು ಹರಿಸಲು ಕರ್ನಾಟಕಕ್ಕೆ ಸೂಚಿಸಬೇಕೆಂದು ತಮಿಳುನಾಡು ಸಭೆಯಲ್ಲಿ ವಾದಿಸಿತ್ತು.

ಕಾವೇರಿ ನದಿ ನೀರು ವಿವಾದ: ಹೆಚ್ಚು ನೀರು ಬಿಡಬೇಕೆಂಬ ತಮಿಳುನಾಡು ಮನವಿಯನ್ನ ತಿರಸ್ಕರಿಸಿದ ಸಿಡಬ್ಯ್ಲೂಆರ್​​ಸಿ
ಕೆಆರ್​ಎಸ್ ಡ್ಯಾಂ
Follow us
ವಿವೇಕ ಬಿರಾದಾರ
|

Updated on:Feb 14, 2024 | 7:49 AM

ಬೆಂಗಳೂರು, ಫೆಬ್ರವರಿ 14: ರಾಜ್ಯಕ್ಕೆ ಬರಬೇಕಾದ 7.6 ಟಿಎಂಸಿ ನೀರು ಬಿಡುವಂತೆ ಕರ್ನಾಟಕ (Karnataka) ಸರಕಾರಕ್ಕೆ ನಿರ್ದೇಶನ ನೀಡಬೇಕೆಂಬ ತಮಿಳುನಾಡು (Tamilnadu) ಬೇಡಿಕೆಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಿರಸ್ಕರಿಸಿದೆ. ಸುಪ್ರೀಂ ಕೋರ್ಟ್ ಮಾರ್ಪಡಿಸಿದ ಕಾವೇರಿ ಜಲವಿವಾದ ನ್ಯಾಯಮಂಡಳಿಯ (CWDT) ಅಂತಿಮ ತೀರ್ಪಿನ ಪ್ರಕಾರ ನದಿಯ ಸ್ವಾಭಾವಿಕ ನೀರಿನ ಹರಿವು ಖಚಿತಪಡಿಸಿಕೊಳ್ಳಲು ಸಮಿತಿಯು ಕರ್ನಾಟಕಕ್ಕೆ ನಿರ್ದೇಶಿಸಿದೆ.

7.61 ಟಿಎಂಸಿ ಬಾಕಿ ಜೊತೆಗೆ ಫೆಬ್ರವರಿಯಿಂದ ಮೇ ತಿಂಗಳವರೆಗೆ ಪ್ರತಿ ತಿಂಗಳು 2.5 ಟಿಎಂಸಿ ನೀರು ಹರಿಸಲು ಕರ್ನಾಟಕಕ್ಕೆ ಸೂಚಿಸಬೇಕೆಂದು ತಮಿಳುನಾಡು ಸಭೆಯಲ್ಲಿ ವಾದಿಸಿತ್ತು.

ಪ್ರತಿವಾದಿಸಿದ ಕರ್ನಾಟಕ, ರಾಜ್ಯದಲ್ಲಿ ಈಗ ಬರ ಪರಿಸ್ಥಿತಿ ಎದುರಾಗಿದೆ. ತಮಿಳುನಾಡು 7.61 ಟಿಎಂಸಿ ನೀರು ಕೇಳುತ್ತಿರುವುದಕ್ಕೆ ಅರ್ಥವೇ ಇಲ್ಲ. ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ಸಾಕಷ್ಟು ನೀರಿಲ್ಲ. ಕುಡಿಯುವ ಬಳಕೆಗೂ ನೀರು ಸಂಗ್ರಹವಿಲ್ಲ. ಕರ್ನಾಟಕದಲ್ಲಿ ಮುಂದೆ ಮಳೆಯಾಗುವ ಸಾಧ್ಯತೆ ಸಹ ಕಡಿಮೆ. ತಮಿಳುನಾಡು ರಾಜ್ಯದಲ್ಲಿ ಈಗ ಹೆಚ್ಚು ಮಳೆಯಾಗುತ್ತಿದೆ. ಹಿಂಗಾರು ಮಾರುತಗಳು ಪ್ರಬಲವಾಗಿವೆ, ಮಳೆ ಹೆಚ್ಚು ಸುರಿಯುತ್ತಿದೆ. ತಮಿಳುನಾಡಿಗೆ ನೀರು ಬಿಟ್ಟರೆ ವಾಪಸ್ ತೆಗೆದುಕೊಳ್ಳಲು ಸಾಧ್ಯವೆ? ಹೀಗಾಗಿ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ಕರ್ನಾಟಕದ ಅಧಿಕಾರಿಗಳು ವಾದ ಮಂಡಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕಕ್ಕೆ ಹೊಡೆತದ ಮೇಲೆ ಹೊಡೆತ: ಮತ್ತೆ ತಮಿಳುನಾಡಿಗೆ ಕಾವೇರಿ ನಿರು ಹರಿಸಲು ಸೂಚನೆ

ವಾದ-ಪ್ರತಿವಾದ ಆಲಿಸಿದ ಸಮಿತಿ, ಹಿಂಗಾರು ಮಳೆಯಿಂದ ತಮಿಳುನಾಡಿನಲ್ಲಿ ನೀರಿನ ಕೊರತೆ ಕಡಿಮೆಯಾಗಿದೆ. ಹಿಂಗಾರು ಮಳೆ ಚೆನ್ನಾಗಿ ಆಗಿದ್ದರಿಂದ ತಮಿಳುನಾಡಿನ ಜಲಾನಯನ ಪ್ರದೇಶಗಳು ಸಮರ್ಪಕವಾಗಿ ನೀರು ಶೇಖರಣೆಯಾಗಿದೆ ಎಂದು ಆಯೋಗ ಹೇಳಿದೆ.

ಆದರೆ ಕರ್ನಾಟಕವು ಕಾವೇರಿ ಜಲಾನಯನ ಪ್ರದೇಶದಲ್ಲಿ ಬರಗಾಲದಂತಹ ಸ್ಥಿತಿಯನ್ನು ಎದುರಿಸುತ್ತಿದೆ. ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶವು ಮುಂಗಾರು ಮಳೆ ಮೇಲೆ ಅವಲಂಬಿತವಾಗಿದೆ. ಈ ಬಾರಿ ಮಳೆ ಕೈಕೊಟ್ಟಿದ್ದರಿಂದ ಕರ್ನಾಟಕ ನೀರಿನ ಕೊರತೆಯನ್ನು ಎದುರಿಸುತ್ತಿದೆ. ಕರ್ನಾಟಕದ ಕಾವೇರಿ ಕೊಳ್ಳದ ನಾಲ್ಕು ಪ್ರಮುಖ ಅಣೆಕಟ್ಟುಗಳಲ್ಲಿ ಪ್ರಸ್ತುತ ಸುಮಾರು 37 ಟಿಎಂಸಿ ಅಡಿ ನೀರು ಇದೆ.

ಕೊನೆಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ಫೆಬ್ರವರಿ ಮತ್ತು ಮಾರ್ಚ್​ನಲ್ಲಿ ತಮಿಳುನಾಡಿಗೆ ತಲಾ 2.5 (ಒಟ್ಟು 5 ಟಿಎಂಸಿ) ಟಿಎಂಸಿ ನೀರು ಬಿಡುವಂತೆ ಕರ್ನಾಟಕಕ್ಕೆ ಸೂಚಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:41 am, Wed, 14 February 24