ಸೈಬರ್​ ವಂಚನೆಗೆ ಹೊಸ ದಾರಿ: ಮನೆಗೆ ಬರುತ್ತೆ ಕೂಪನ್​​​, ಸ್ಕ್ಯಾನ್​ ಮಾಡಿದರೆ ನಿಮ್ಮ ಖಾತೆಯಲ್ಲಿನ ಹಣ ಮಾಯ

|

Updated on: Jul 09, 2024 | 2:18 PM

ಸೈಬರ್ ವಂಚನೆ ಪ್ರಕರಣಗಳು ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿವೆ. ಜನರನ್ನು ವಂಚಿಸಲು ವಂಚಕರು ಹೊಸ ಹೊಸ ದಾರಿಗಳನ್ನು ಕಂಡು ಹಿಡಿಯುತ್ತಿದ್ದಾರೆ. ಇದೀಗ ಮನೆಗೆ ಲಕೋಟೆ ಕಳಸುವ ಮೂಲಕ ವಂಚನೆಗೆ ಮುಂದಾಗಿದ್ದಾರೆ. ಹೇಗೆ ನಡೆಯುತ್ತೆ ಈ ವಂಚನೆ ಈ ಸ್ಟೋರಿ ಓದಿ.

ಸೈಬರ್​ ವಂಚನೆಗೆ ಹೊಸ ದಾರಿ: ಮನೆಗೆ ಬರುತ್ತೆ ಕೂಪನ್​​​, ಸ್ಕ್ಯಾನ್​ ಮಾಡಿದರೆ ನಿಮ್ಮ ಖಾತೆಯಲ್ಲಿನ ಹಣ ಮಾಯ
ಸೈಬರ್​ ವಂಚನೆಗೆ ಹೊಸ ಮಾರ್ಗ, ನಕಲಿ ಲಕೋಟೆ
Follow us on

ಬೆಂಗಳೂರು, ಜುಲೈ 09: ಇತ್ತೀಚಿಗೆ ಕರ್ನಾಟಕದಲ್ಲಿ ಸೈಬರ್​ ವಂಚನೆ (Cyber Crime) ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲಂತೂ ಬೆಂಗಳೂರಿನಲ್ಲಿ (Bengaluru) ಸೈಬರ್​ ವಂಚನೆ ಅಧಿಕವಾಗಿದೆ. ನಗರದಲ್ಲಿ ಸೈಬರ್ ವಂಚಕರ ಹಾವಳಿ ಮಿತಿ ಮೀರಿದ್ದು, ಪ್ರತಿ ವರ್ಷ ಹತ್ತು ಸಾವಿರಕ್ಕು ಅಧಿಕ ಪ್ರಕರಣಗಳು ದಾಖಲಾಗುತ್ತಿವೆ. ಸೈಬರ್​​ ವಂಚಕರ (Cyber ​​fraud) ಬಲೆಗೆ ಬಿದ್ದು ಜನರು ಕೋಟ್ಯಾಂತರ ರೂಪಾಯಿ ಕಳೆದುಕೊಂಡಿದ್ದಾರೆ. ಈ ಸೈಬರ್​ ವಂಚಕರು ಹೊಸ ಮಾರ್ಗ ಕಂಡುಕೊಂಡಿದ್ದಾರೆ.

ಆಧಾರ್ ಕಾರ್ಡ್ ಬಳಸಿಕೊಂಡು ಸಾರ್ವಜನಿಕರ ಹಣ ಲಪಟಾಯಿಸುವುದು, ಹಾಗೂ ಅಶ್ಲೀಲ ಪೋಟೊ, ವಿಡಿಯೋ ತೋರಿಸಿ ಜನರಿಗೆ ಬ್ಲಾಕ್ ಮೇಲ್ ಮಾಡುವುದು. ವಿಡಿಯೋ ಕರೆ ಮಾಡಿ ಜನರಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡುವುದು. ಕೆಲಸ ಕೊಡಿಸುವುದು, ಗಿಪ್ಟ್ ಹೆಸರಲ್ಲಿ ಮಕ್ಮಲ್ ಟೋಪಿ ಹಾಕಿ ವಂಚಿಸಲಾಗುತ್ತಿತ್ತು. ​

ಆದರೆ, ಇದೀಗ ಸೈಬರ್​ ವಂಚಕರು ರಿಜಿಸ್ಟರ್ ಪೋಸ್ಟ್ ಮೂಲಕ ಜನರನ್ನು ವಂಚಿಸಲು ಮುಂದಾಗಿದ್ದಾರೆ. ಭಾರತೀಯ ಅಂಚೆಯ ಕೆಂಪು ಬಣ್ಣದ ರಿಜಿಸ್ಟರ್ ಲಕೋಟೆ ನಿಮ್ಮ ಮನೆಗೆ ಬರುತ್ತೆ. ಈ ಲಕೋಟೆ ತೆರೆದರೆ ಒಳಗೆ ಭಾರತ ಸರ್ಕಾರದ ಲಾಂಛನ ಇರುವ ರಿಜಿಸ್ಟರ್ ಕೋಪನ್​ ಇರುತ್ತದೆ. ಮತ್ತು ಅಪ್ಲಿಕೇಶನ್​ ಫಾರ್ಮ್​ ಇರುತ್ತದೆ. ಕೂಪನ್​​ ಮೇಲೆ ಸ್ಕ್ರ್ಯಾಚ್​ ಮಾಡಿ ವಾಹನ ಗೆಲ್ಲಿ ಎಂದು ಇಂಗ್ಲಿಷ್​​ ಅಕ್ಷರಗಳಲ್ಲಿ ಬರೆದಿರುತ್ತದೆ. ನಂತರ ಸ್ಕ್ರ್ಯಾಚ್​ ಮಾಡಿದರೆ, ನೀವು 12 ಲಕ್ಷದ 80 ಸಾವಿರ ಹಣ ಗೆದ್ದಿದ್ದೀರಿ. ಮತ್ತು ಅದರ ಕೆಳಗೆ ಒಂದು ಎಸ್ ಎಂಎಸ್ ಕೋಡ್ ಕೂಡ ಇರುತ್ತದೆ.

ಇದನ್ನೂ ಓದಿ: Cyber Crime: ಸೈಬರ್​ ವಂಚನೆಯಲ್ಲಿ 2 ಕೋಟಿ ರೂ. ಕಳೆದುಕೊಂಡ ಕಾಫಿ ಬೆಳಗಾರ

ಸೈಬರ್​ ವಂಚನೆ ವಿಡಿಯೋ

ವಂಚಕರು ಅದೇ ಕಾರ್ಡಲ್ಲಿ ಸ್ಕ್ಯಾನರ್ ಅಳವಡಿಸಿದ್ದಾರೆ. ಅದನ್ನು ಸ್ಕ್ಯಾನ್ ಮಾಡಿದರೆ ಅಥವಾ ಹೆಲ್ಫ್​ ಲೈನ್ ನಂಬರ್​ಗೆ ಕರೆ ಮಾಡಿದರೂ ಕೂಡ ನಿಮ್ಮ ಖಾತೆಯಲ್ಲಿನ ಹಣ ವಂಚಕರ ಪಾಲಾಗುತ್ತದೆ. ಹೀಗೆ ಸೈಬರ್​ ವಂಚಕರು ಹೊಸ ವಂಚನೆಯ ವಿಧಾನವನ್ನ ಕಂಡುಕೊಂಡಿದ್ದಾರೆ.

ಡೀಪ್​ ಫೇಕ್​ ಮೂಲಕ ಶಾಲಾ ವಿದ್ಯಾರ್ಥಿನಿಯರಿಗೆ ಬ್ಲ್ಯಾಕ್​ ಮೇಲ್​

ಇದೇ ಮೇ 24 ರಂದು ಬೆಂಗಳೂರಿನ ಪ್ರತಿಷ್ಠಿತ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿಯ ಭಾವಚಿತ್ರಗಳನ್ನು ಕೃತಕ ಬುದ್ಧಿಮತ್ತೆ ಮುಖಾಂತರ ಅಶ್ಲೀಲವಾಗಿ ಎಡಿಟ್​ ಮಾಡಿ ಎಲ್ಲಡೆ ಹರಿಬಿಡಲಾಗಿದ್ದ ಘಟನೆ ನಡೆದಿತ್ತು. 50ಕ್ಕೂ ಹೆಚ್ಚು ಶಾಲೆಯ ವಿದ್ಯಾರ್ಥಿಗಳು ಇನ್ಸ್ಟಾಗ್ರಾಮನಲ್ಲಿ ಗ್ರೂಪ್ ರಚಿಸಿಕೊಂಡಿದ್ದಾರೆ. ಬಳಿಕ ಈ ಗ್ರೂಪ್​ನಲ್ಲಿ ಅನಾಮದೇಯ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯರ ಮಾರ್ಫಿಂಗ್ ಭಾವಚಿತ್ರಗಳನ್ನು ಶೇರ್​ ಮಾಡುತ್ತಾನೆ. ಈ ವಿಚಾರ ತಿಳಿದು ವಿದ್ಯಾರ್ಥಿನಿಯರು ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಈ ಕುರಿತು ಪೋಷಕರು ಈಗಾಗಲೇ ಸೈಬರ್ ಸೆಲ್​ಗೆ ದೂರು ನೀಡಿದ್ದರು. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:12 pm, Tue, 9 July 24