AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyber Fraud: ದೇಶದ ವಿವಿಧೆಡೆ ಕೋಟಿ ಕೋಟಿ ದೋಚುತ್ತಿದ್ದ ಸೈಬರ್ ವಂಚಕರ ಜಾಲ ಭೇದಿಸಿದ ದಾವಣಗೆರೆ ಪೊಲೀಸ್

ದಾವಣಗೆರೆ ನಿಟ್ಟುವಳ್ಳಿ ಕೆನರಾ ಬ್ಯಾಂಕ್ ಖಾತೆದಾರ ಪ್ರಮೋದ್ ಎಚ್.ಎನ್. ಅವರ ಖಾತೆಯಿಂದ 52,60,523 ರೂ. ಹಣ ನಾಪತ್ತೆಯಾಗಿದ್ದ ಕುರಿತು ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ದಾವಣಗೆರೆ ಸೈಬರ್ ಕ್ರೈಂ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ದೇಶದ ವಿವಿಧ ಭಾಗಗಳ ಬ್ಯಾಂಕ್ ಖಾತೆಗಳಿಂದ ಕೋಟಿ ಕೋಟಿ ಹಣ ಕಳವು ಮಾಡುತ್ತಿದ್ದ ಸೈಬರ್ ವಂಚಕರ ಜಾಲವನ್ನು ಪತ್ತೆಹಚ್ಚಿದ್ದಾರೆ.

Cyber Fraud: ದೇಶದ ವಿವಿಧೆಡೆ ಕೋಟಿ ಕೋಟಿ ದೋಚುತ್ತಿದ್ದ ಸೈಬರ್ ವಂಚಕರ ಜಾಲ ಭೇದಿಸಿದ ದಾವಣಗೆರೆ ಪೊಲೀಸ್
ಸೈಬರ್ ವಂಚನೆಯೆಸಗಿದ ಅರ್ಫಾತ್​ನ ಬಂಧಿಸಿದ ದಾವಣಗೆರೆ ಪೊಲೀಸರು
ಭಾವನಾ ಹೆಗಡೆ
|

Updated on: Oct 11, 2025 | 12:11 PM

Share

ದಾವಣಗೆರೆ, ಅಕ್ಟೋಬರ್ 11: ದಾವಣಗೆರೆ ಸೈಬರ್ ಕ್ರೈಂ (Cyber Crime) ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ದೇಶದ ವಿವಿಧ ಭಾಗಗಳ ಬ್ಯಾಂಕ್ ಖಾತೆಗಳಿಂದ ಕೋಟಿ ಕೋಟಿ ಹಣ ಕಳವು ಮಾಡುತ್ತಿದ್ದ ಸೈಬರ್ ವಂಚಕರ ಬಂಧನವಾಗಿದೆ. ಈ ಕಾರ್ಯಾಚರಣೆಯಲ್ಲಿ ಪೊಲೀಸರು 150 ಕೋಟಿ ರೂಪಾಯಿ ವಂಚನೆಯ ಜಾಲವನ್ನು ಪತ್ತೆಹಚ್ಚಿದ್ದಾರೆ. ಮೂವರು ಆರೋಪಿಗಳಲ್ಲಿ ಒಬ್ಬ ಮಾತ್ರ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಆರೋಪಿಗಳ ಖಾತೆಯಲ್ಲಿ ಬರೋಬ್ಬರಿ 150 ಕೋಟಿ ರೂ. ಹಣ

ದಾವಣಗೆರೆ ನಿಟ್ಟುವಳ್ಳಿ ಕೆನರಾ ಬ್ಯಾಂಕ್ ಖಾತೆದಾರ ಪ್ರಮೋದ್ ಎಚ್.ಎನ್. ಅವರ ಖಾತೆಯಿಂದ ₹52,60,523 ಹಣ ನಾಪತ್ತೆಯಾಗಿದ್ದ ಪರಿಣಾಮ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಮೂವರು ಆರೋಪಿಗಳಲ್ಲಿ ಇಬ್ಬರಿಗಾಗಿ ಇನ್ನೂ ಪೊಲೀಸರು ಹುಡುಕುತ್ತಿದ್ದು, ಓರ್ವನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಸೈಯದ್ ಅರ್ಫಾತ್ (28) ಎಂದು ಗುರುತಿಸಲಾಗಿದ್ದು, ಈತ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಶಾಂತಿನಗರ ನಿವಾಸಿ ಎಂದು ತಿಳಿದುಬಂದಿದೆ.

ಜುಲೈ 27ರಿಂದ ಆಗಸ್ಟ್ 19ರವರೆಗೆ ಆರೋಪಿಯ ಖಾತೆಯಲ್ಲಿ ಸುಮಾರು 150 ಕೋಟಿ ರೂಪಾಯಿ ವಂಚನೆಯ ಹಣ ಠೇವಣಿಯಾಗಿದೆ. ಅದರಲ್ಲಿ 132 ಕೋಟಿ ರೂಪಾಯಿ ವಿತ್‌ಡ್ರಾ ಮಾಡಲಾಗಿದೆ. ಉಳಿದ 18 ಕೋಟಿ ರೂಪಾಯಿ ಪೊಲೀಸರು ಫ್ರೀಜ್ ಮಾಡಿದ್ದಾರೆ.

ಹಲವು ರಾಜ್ಯಗಳಲ್ಲಿ ವಂಚನೆ ಮಾಡಿದ್ದ ಆರೋಪಿಗಳಿಗೆ ಮಣ್ಣು ಮುಕ್ಕಿಸಿದ ದಾವಣಗೆರೆ ಪೊಲೀಸರು

ಆರೋಪಿಯು ಉತ್ತರ ಪ್ರದೇಶದ ಗಾಜೀಯಾಬಾದ್, ಜಮ್ಮು ಮತ್ತು ಕಾಶ್ಮೀರದ ಶ್ರೀನಗರ, ಆಂಧ್ರಪ್ರದೇಶದ ಏಲೂರು, ಮಹಾರಾಷ್ಟ್ರದ ಮುಂಬೈ, ಕರ್ನಾಟಕದ ಬೆಂಗಳೂರು ಹಾಗೂ ದಾವಣಗೆರೆ ಸೇರಿದಂತೆ ಹಲವು ರಾಜ್ಯಗಳ ಸೈಬರ್ ಕ್ರೈಂ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ಪತ್ತೆಯಾಗಿದೆ. ಈ ದೊಡ್ಡ ಪ್ರಮಾಣದ ಸೈಬರ್ ವಂಚನೆ ಪ್ರಕರಣವನ್ನು ದಾವಣಗೆರೆ ಜಿಲ್ಲೆಯ ಸೈಬರ್ ಪೊಲೀಸ್ ತಂಡ ಪತ್ತೆಹಚ್ಚಿ ಬಂಧಿಸಿದೆ.

ಇದನ್ನೂ ಓದಿ ಪಾರ್ಟ್​ಟೈಮ್ ಕೆಲಸದ ಆಫರ್ ನಂಬಿ 67 ಲಕ್ಷ ರೂ. ಕಳೆದುಕೊಂಡ ಬೆಂಗಳೂರು ಉದ್ಯೋಗಿ

ದಾವಣಗೆರೆ ಸೈಬರ್ ಕ್ರೈಮ್ ಠಾಣೆಯ ಡಿವೈಎಸ್ಪಿ ಬಂಕಾಳಿ ನಾಗಪ್ಪ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚನೆಗೊಂಡು ಆರೋಪಿಯನ್ನು ಬಂಧಿಸಲಾಗಿದೆ. ಉಳಿದ ಇಬ್ಬರು ಆರೋಪಿಗಳ ಪತ್ತೆಗಾಗಿ ಹುಡುಕಾಟ ಮುಂದುವರಿದಿದೆ.ದಾವಣಗೆರೆ ಜಿಲ್ಲಾ ಎಸ್ಪಿ ಉಮಾ ಪ್ರಶಾಂತ್ ಸೈಬರ್ ಕ್ರೈಮ್ ಪೊಲೀಸರ ಈ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ