AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಶೀಘ್ರದಲ್ಲೇ ಜಾರಿಗೆ ಬರಲಿದೆ ಸೈಬರ್ ಭದ್ರತಾ ನೀತಿ: ಏನೆಲ್ಲ ಇರಲಿದೆ? ಸಚಿವ ಪರಮೇಶ್ವರ್ ನೀಡಿದ ಮಾಹತಿ ಇಲ್ಲಿದೆ

ರಾಜ್ಯದಾದ್ಯಂತ ಸೈಬರ್ ಕ್ರೈಂ ಪ್ರಕರಣಗಳು ವಿಪರೀತ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸೈಬರ್ ಕ್ರೈಂ ಮಟ್ಟ ಹಾಕಲು ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಮಧ್ಯೆ ಸೈಬರ್ ಕ್ರೈಂ ಪ್ರಕರಣಗಳನ್ನು ಮಟ್ಟ ಹಾಕುವುದಕ್ಕಾಗಿಯೇ ಸರ್ಕಾರವು ಸೈಬರ್ ಭದ್ರತಾ ನೀತಿಯನ್ನು ಜಾರಿಗೊಳಿಸಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ. ಆ ಕುರಿತ ಮಾಹಿತಿ ಇಲ್ಲಿದೆ.

ಕರ್ನಾಟಕದಲ್ಲಿ ಶೀಘ್ರದಲ್ಲೇ ಜಾರಿಗೆ ಬರಲಿದೆ ಸೈಬರ್ ಭದ್ರತಾ ನೀತಿ: ಏನೆಲ್ಲ ಇರಲಿದೆ? ಸಚಿವ ಪರಮೇಶ್ವರ್ ನೀಡಿದ ಮಾಹತಿ ಇಲ್ಲಿದೆ
ಗೃಹ ಸಚಿವ ಜಿ. ಪರಮೇಶ್ವರ
ಗಣಪತಿ ಶರ್ಮಾ
|

Updated on: Mar 07, 2024 | 6:57 AM

Share

ಬೆಂಗಳೂರು, ಮಾರ್ಚ್​ 7: ಕರ್ನಾಟಕ ಸರ್ಕಾರ ಶೀಘ್ರದಲ್ಲೇ ಸೈಬರ್ ಭದ್ರತಾ ನೀತಿಯನ್ನು (Cyber security policy) ಜಾರಿಗೆ ತರಲಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ (G Parameshwara) ಬುಧವಾರ ಹೇಳಿದ್ದಾರೆ. ‘ಸೈಬರ್ ಕ್ರೈಮ್ ಶೃಂಗಸಭೆ-2024 (Cyber ​​Crime Summit 2024)’ ಅನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಒಟ್ಟು 43 ಸೈಬರ್ ಕ್ರೈಂ ಪೊಲೀಸ್ ಠಾಣೆಗಳು ಕಾರ್ಯನಿರ್ವಹಿಸುತ್ತಿವೆ. ಈ ಠಾಣೆಗಳು ಜನರಿಗೆ ಸುರಕ್ಷತೆಯನ್ನು ಒದಗಿಸಲು ಕೆಲಸ ಮಾಡುತ್ತಿವೆ ಎಂದು ಹೇಳಿದ್ದಾರೆ.

ಸೈಬರ್ ಕ್ರೈಂ ವಿಭಾಗವನ್ನು ಬಲಪಡಿಸಲು ಕೃತಕ ಬುದ್ಧಿಮತ್ತೆ, ಸೈಬರ್ ಭದ್ರತೆ ಮತ್ತು ಕ್ಲೌಡ್ ಕಂಪ್ಯೂಟಿಂಗ್ ಸೇರಿದಂತೆ ವಿವಿಧ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಪರಿಣತಿ ಹೊಂದಿರುವ ಕಂಪನಿಗಳ ಸಹಾಯವನ್ನು ರಾಜ್ಯ ಸರ್ಕಾರ ಪಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಸೈಬರ್ ಕ್ರೈಂ ಕಡಿಮೆ ಮಾಡುವ ಮತ್ತು ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ. ಸಿಐಡಿ ಕಚೇರಿಯಲ್ಲಿ ಸ್ಥಾಪಿಸಲಾದ ಸೈಬರ್ ಅಪರಾಧ ತನಿಖಾ ತರಬೇತಿ ಮತ್ತು ಸಂಶೋಧನೆಯಲ್ಲಿ (ಸಿಸಿಐಟಿಆರ್) ತರಬೇತಿ ಕಾರ್ಯಕ್ರಮಗಳಿಂದ ಪೊಲೀಸ್, ನ್ಯಾಯಾಂಗ ಮತ್ತು ಭಾರತೀಯ ರಕ್ಷಣಾ ಪಡೆಗಳ 33,000 ಕ್ಕೂ ಹೆಚ್ಚು ಸಿಬ್ಬಂದಿ ಪ್ರಯೋಜನ ಪಡೆದಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಡೀಪ್‌ಫೇಕ್, ಅಕ್ರಮ ಹಣ ವರ್ಗಾವಣೆ, ಆನ್‌ಲೈನ್ ಬ್ಯಾಂಕಿಂಗ್, ಲೋನ್ ಆ್ಯಪ್ ವಂಚನೆ ಮತ್ತು ಇತರ ಪ್ರಕರಣಗಳು ಹೆಚ್ಚುತ್ತಿವೆ. ಗಂಭೀರ ಪ್ರಕರಣಗಳಲ್ಲಿ ವಿದೇಶಿ ಕಂಪನಿಗಳ ನೆರವು ಸಿಗದಿದ್ದರೆ ತನಿಖೆ ಕಷ್ಟವಾಗುತ್ತದೆ. ಸೈಬರ್ ಕ್ರೈಮ್ ಜಾಗತಿಕ ಸವಾಲು ಮತ್ತು ಸಮಸ್ಯೆಯಾಗಿದೆ,” ಎಂದು ಸಚಿವರು ಹೇಳಿದ್ದಾರೆ. ಸೈಬರ್ ಅಪರಾಧವನ್ನು ತಡೆಯಲು ಅನೇಕ ಕಂಪನಿಗಳು ಸಂಶೋಧನೆಯನ್ನು ಪ್ರಾರಂಭಿಸಿವೆ ಎಂದೂ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ: ಶಂಕಿತ ಉಗ್ರನಿಗಾಗಿ ತುಮಕೂರಿನಲ್ಲಿ ತೀವ್ರ ಶೋಧ

ಸೈಬರ್ ಅಪರಾಧಿಗಳು ಪ್ರಪಂಚದ ಯಾವುದೋ ಮೂಲೆಯಲ್ಲಿ ಕುಳಿತು ಬೆದರಿಕೆ ಹಾಕಿ ಜಗತ್ತಿನ ಇನ್ನೊಂದು ಭಾಗದಲ್ಲಿ ಇತರ ಸೈಬರ್ ದಾಳಿಗಳನ್ನು ನಡೆಸುತ್ತಾರೆ. ಇದು ಆಯಾ ವಲಯದ ಮಾರುಕಟ್ಟೆ ಮತ್ತು ಹೂಡಿಕೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಅಪರಾಧಿಗಳ ವಿರುದ್ಧ ತನಿಖೆ ಮಾಡಲು ಮತ್ತು ಮಟ್ಟ ಹಾಕಲು ಜಾಗತಿಕ ಮಟ್ಟದಲ್ಲಿ ಸಹಕಾರ ಅಗತ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್