ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಸೈಬರ್ ಪೊಲೀಸ್ ಠಾಣೆ ಸ್ಥಾಪನೆ, 16 ಸಾವಿರ ಪೊಲೀಸ್ ಹುದ್ದೆ ಭರ್ತಿಗೆ ಕ್ರಮ; ಬಸವರಾಜ ಬೊಮ್ಮಾಯಿ

ಉಡುಪಿ: ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಒಟ್ಟು 16 ಸಾವಿರ ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಜಿಲ್ಲೆಯ ಕಾರ್ಕಳದಲ್ಲಿ ಶನಿವಾರ ನೂತನ ಪೊಲೀಸ್ ವಸತಿ ಗೃಹ ಸಮುಚ್ಚಯ ಕಟ್ಟಡ ಉದ್ಘಾಟಿಸಿ ಮಾತನಾಡಿದ ಬಸವರಾಜ ಬೊಮ್ಮಾಯಿ ಈಗಾಗಲೇ 6 ಸಾವಿರ ಪೊಲೀಸ್ ಹುದ್ದೆಗಳ ಭರ್ತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಮುಂದಿನ 3 ವರ್ಷಗಳ ಅವಧಿಯಲ್ಲಿ ಒಟ್ಟು 16 ಸಾವಿರ ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು. ಇದರಿಂದ ಪೊಲೀಸ್ ಬಲ ಮತ್ತಷ್ಟು ಹೆಚ್ಚಾಗಲಿದೆ. […]

ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಸೈಬರ್ ಪೊಲೀಸ್ ಠಾಣೆ ಸ್ಥಾಪನೆ, 16 ಸಾವಿರ ಪೊಲೀಸ್ ಹುದ್ದೆ ಭರ್ತಿಗೆ ಕ್ರಮ; ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Follow us
sandhya thejappa
| Updated By: ಸಾಧು ಶ್ರೀನಾಥ್​

Updated on: Feb 20, 2021 | 3:23 PM

ಉಡುಪಿ: ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಒಟ್ಟು 16 ಸಾವಿರ ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಜಿಲ್ಲೆಯ ಕಾರ್ಕಳದಲ್ಲಿ ಶನಿವಾರ ನೂತನ ಪೊಲೀಸ್ ವಸತಿ ಗೃಹ ಸಮುಚ್ಚಯ ಕಟ್ಟಡ ಉದ್ಘಾಟಿಸಿ ಮಾತನಾಡಿದ ಬಸವರಾಜ ಬೊಮ್ಮಾಯಿ ಈಗಾಗಲೇ 6 ಸಾವಿರ ಪೊಲೀಸ್ ಹುದ್ದೆಗಳ ಭರ್ತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಮುಂದಿನ 3 ವರ್ಷಗಳ ಅವಧಿಯಲ್ಲಿ ಒಟ್ಟು 16 ಸಾವಿರ ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು. ಇದರಿಂದ ಪೊಲೀಸ್ ಬಲ ಮತ್ತಷ್ಟು ಹೆಚ್ಚಾಗಲಿದೆ. ಈಗಿರುವ ನೇಮಕಾತಿ ಪ್ರಕ್ರಿಯೆ ಅತ್ಯಂತ ಪಾರದರ್ಶಕವಾಗಿದೆ. ಮಾನವ ಮಧ್ಯಸ್ಥಿಕೆ ಇಲ್ಲದ ರೀತಿ ನೇಮಕಾತಿ ಪ್ರಕ್ರಿಯೆ ಮಾಡುತ್ತಿದ್ದೇವೆ ಎಂದು ಹೇಳಿದರು.

ದೇಶದಲ್ಲೇ ಮೊದಲು ಡಾರ್ಕ್ ವೆಬ್ ಮೂಲಕ ಜನರನ್ನು ಸಂಪರ್ಕಿಸಿ ಡ್ರಗ್ ಪೂರೈಕೆ ಮಾಡುತ್ತಿದ್ದ ಅಂತಾರಾಷ್ಟ್ರೀಯ ಜಾಲವನ್ನು ದೇಶದಲ್ಲಿ ಮೊಟ್ಟ ಮೊದಲು ಮಟ್ಟ ಹಾಕಿದ್ದು ಕರ್ನಾಟಕ ಪೊಲೀಸ್. ಇದು ನಿಜಕ್ಕೂ ಹೆಮ್ಮೆಯ ವಿಷಯ ಎಂದು ಸಚಿವರು ಹೇಳಿದರು.

ನಾಲ್ಕು FSL ಕೇಂದ್ರಗಳ ಸ್ಥಾಪನೆ ರಾಜ್ಯದಲ್ಲಿರುವ ನಾಲ್ಕು ವಿಭಾಗಗಳಲ್ಲಿ ಒಂದೊಂದು ಅತ್ಯಂತ ಸುಸಜ್ಜಿತ ಎಫ್ಎಸ್ಎಲ್ ತನಿಖಾ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಂನ ಮಟ್ಟ ಹಾಕಲಾಗುವುದು. ಬೆಳಗಾವಿ, ಮೈಸೂರು, ಮಂಗಳೂರು, ಕಲಬುರಗಿ ವಿಭಾಗಗಳಲ್ಲಿ ತಲಾ ಒಂದು ಎಫ್ಎಸ್ಎಲ್ ಲ್ಯಾಬ್ ಆರಂಭಿಸಲಾಗುವುದು ಎಂದು ಸಚಿವ ಬೊಮ್ಮಾಯಿ ತಿಳಿಸಿದರು.

ಪೊಲೀಸ್ ಆಡಳಿತದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಡಿಜಿಪಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಮಾರ್ಚ್ 21 ರೊಳಗಾಗಿ ಅವರು ವರದಿ ಸಲ್ಲಿಸಲಿದ್ದಾರೆ. ಪೊಲೀಸ್ ವ್ಯವಸ್ಥೆ ಸುಧಾರಿಸಲು ಹಲವಾರು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಹತ್ತು ವರ್ಷಗಳ ಹಿಂದೆ ಸೈಬರ್ ಅಪರಾಧಗಳು ಇರಲಿಲ್ಲ. ಆದರೆ ಇತ್ತೀಚೆಗೆ ರಾಜ್ಯದಲ್ಲಿ ಸೈಬರ್ ಅಪರಾಧಗಳು ಹೆಚ್ಚುತ್ತಿವೆ. ಪೊಲೀಸ್ ಇಲಾಖೆಗೆ ಇದು ಹೊಸ ಸವಾಲು ಒಡ್ಡಿದೆ. ಈ ಅಪರಾಧ ಮಟ್ಟ ಹಾಕಲು ಎಲ್ಲಾ ಜಿಲ್ಲೆಗಳಲ್ಲಿ ಒಂದೊಂದು ಸೈಬರ್ ಪೊಲೀಸ್ ಠಾಣೆ ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದ ಸಚಿವರು ರಾಜ್ಯದಲ್ಲಿ ಕೋಮು ಗಲಭೆ ಸೃಷ್ಠಿ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆದೇಶಿಸಿದ್ದೇನೆ ಎಂದು ತಿಳಿಸಿದರು.

ಹೆಬ್ರಿಗೆ ಎರಡು ಠಾಣೆ ಹೆಬ್ರಿಯಲ್ಲಿ ಎರಡು ಪೊಲೀಸ್ ಠಾಣೆಗಳ ಅಗತ್ಯ ಇದೆ ಎಂದು ಶಾಸಕ ಸುನಿಲ್ ಕುಮಾರ್ ಬೇಡಿಕೆ ಇಟ್ಟಿದ್ದಾರೆ. ಹೆಬ್ರಿಗೆ (ಕಾ ಮತ್ತು ಸು) ಪೊಲಿಸ್ ಠಾಣೆಯನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು. ಅಗ್ನಿ ಶಾಮಕ ಠಾಣೆ ಸ್ಥಾಪನೆ ಅಸಾಧ್ಯವಾಗದಿದ್ದರೆ ಅಗ್ನಿ ಶಾಮಕ ಉಪ ಠಾಣೆ ಜೊತೆ ಫೈರ್ ಇಂಜಿನ್ ವಾಹನ ನೀಡಲಾಗುವುದು. ಈ ವಿಷಯಗಳನ್ನು ಬಜೆಟ್​ನಲ್ಲಿ ಘೋಷಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: Facebook Fraud | ಸಚಿವ ಸುರೇಶ್​ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ; ನಕಲಿ ಖಾತೆದಾರರಿಂದ ಹಣಕ್ಕೆ ಬೇಡಿಕೆ

ಇದನ್ನೂ ಓದಿ:Koo ಆ್ಯಪ್​ ಮಾಹಿತಿ ಕದಿಯಬಹುದು ಎಂದ ಹ್ಯಾಕರ್ಸ್​​: ತಿರುಗೇಟು ನೀಡಿದ ಸಿಇಒ

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ