AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ತುಂತುರು ಮಳೆ, ಚಳಿಯೋ ಚಳಿ, ರಾಜ್ಯಾದ್ಯಂತ ಹೇಗಿದೆ ವಾತಾವರಣ?

Karnataka Weather: ಕರ್ನಾಟಕದಾದ್ಯಂತ ಮೋಡಕವಿದ ವಾತಾವರಣವಿದ್ದು, ಚಳಿ ಜತೆ ಮಳೆಯೂ ಮುಂದುವರೆದಿದೆ. ಡಿಸೆಂಬರ್ 4ರವರೆಗೂ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ತುಂತುರು ಮಳೆ, ಚಳಿಯೋ ಚಳಿ, ರಾಜ್ಯಾದ್ಯಂತ ಹೇಗಿದೆ ವಾತಾವರಣ?
ಮಳೆ Image Credit source: PTI
ನಯನಾ ರಾಜೀವ್
|

Updated on: Nov 30, 2025 | 7:56 AM

Share

ಬೆಂಗಳೂರು, ನವೆಂಬರ್ 30: ಇಂದು ಬೆಳ್ಳಂಬೆಳಗ್ಗೆಯೇ ಬೆಂಗಳೂರಿನಲ್ಲಿ ತುಂತುರು ಮಳೆ(Rain) ಶುರುವಾಗಿದೆ. ಮೋಡಕವಿದ ವಾತಾವರಣವಿದ್ದು, ಚಳಿ ಕೂಡ ಮುಂದುವರೆದಿದೆ. ಡಿಸೆಂಬರ್ 4ರವರೆಗೂ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ವಿಜಯಪುರ ಹಾಗೂ ಬೀದರ್​ನಲ್ಲಿ 12.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಡಿಟ್ವಾ ಚಂಡಮಾರುತದ ಪರಿಣಾಮದಿಂದಾಗಿ ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕರ್ನಾಟಕದ ಕೆಲವೆಡೆ ಒಂದೆರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಡಿಸೆಂಬರ್ 4ರ ಬಳಿಕ ರಾಜ್ಯದೆಲ್ಲೆಡೆ ಒಣಹವೆ ಮುಂದುವರೆಯಲಿದೆ. ಮುಂದಿನ ಒಂದೆರಡು ದಿನಗಳಲ್ಲಿ ಕನಿಷ್ಠ ಉಷ್ಣಾಂಶ 2 ರಿಂದ 3ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, 24 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ.

ಎಚ್​ಎಎಲ್​ನಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 25.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 25.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಚಂಡಮಾರುತದ ಪರಿಣಾಮ; ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ ವಾರದವರೆಗೆ ಮಳೆ

ಬೆಳಗಾವಿ ಏರ್​ಪೋರ್ಟ್​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 28.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 28.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ