ಫೆಂಗಲ್ ಚಂಡಮಾರುತ: 3 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ, ಇಲ್ಲಿದೆ ಮಾಹಿತಿ

| Updated By: ವಿವೇಕ ಬಿರಾದಾರ

Updated on: Dec 02, 2024 | 7:28 AM

ಫೆಂಗಲ್ ಚಂಡಮಾರುತದ ಪ್ರಭಾವದಿಂದ ಬೆಂಗಳೂರು ಮತ್ತು ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಮತ್ತು ಮಳೆಯಾಗಿದೆ. ಕೋಲಾರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ, ಆದರೆ ಬೆಂಗಳೂರಿನ ಶಾಲಾ-ಕಾಲೇಜುಗಳು ಎಂದಿನಂತೆ ಇರಲಿದೆ.

ಫೆಂಗಲ್ ಚಂಡಮಾರುತ: 3 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ, ಇಲ್ಲಿದೆ ಮಾಹಿತಿ
ಫೆಂಗಲ್ ಚಂಡಮಾರುತ
Follow us on

ಬೆಂಗಳೂರು, ಡಿಸೆಂಬರ್​ 01: ಫೆಂಗಲ್ ಸೈಕ್ಲೋನ್ (Fengal Cyclone) ಪ್ರಭಾವ ಕರ್ನಾಟಕದ ಮೇಲೂ ಬಿದ್ದಿದೆ. ಹೀಗಾಗಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದೆ. ಕೆಲವೆಡೆ ಮಳೆ ಆಗಿದೆ. ವಾತಾವರಣ ಕೂಲ್​ ಕೂಲ್ ಆಗಿದ್ದು, ಕೋಲಾರ, ಮೈಸೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ನೀಡಲಾಗಿದೆ. ಬೆಂಗಳೂರಿನ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ.

ಫೆಂಗಲ್ ಸೈಕ್ಲೋನ್ ಎಫೆಕ್ಟ್​​ನಿಂದಾಗಿ ರಾಜ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣವಿದೆ. ಬೆಳಿಗ್ಗೆಯಿಂದ ಜಿಟಿ ಜಿಟಿ ಮಳೆಯಿಂದಾಗಿ ಕೂಲ್ ಕೂಲ್ ವಾತಾವರಣ ನಿರ್ಮಾಣವಾಗಿದೆ. ತುಂತುರು ಮಳೆಗೆ ಸಿಟಿ ಮಂದಿ ಬೇಸತ್ತಿದ್ದಾರೆ.

ಕೋಲಾರದಲ್ಲಿ ರಜೆ  

ಇನ್ನು ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ಜಡಿ ಮಳೆ ಮತ್ತು ವಿಪರೀತ ಚಳಿ ಹಿನ್ನೆಲೆ ಕೋಲಾರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಅಕ್ರಂ ಪಾಷಾ ಆದೇಶ ಹೊರಡಿಸಿದ್ದಾರೆ. ನಾಳಿನ ರಜೆಯನ್ನು ಮತ್ತೊಂದು ರಜಾ ದಿನದಲ್ಲಿ ತರಗತಿ ನಡೆಸಿ ಸರಿದೂಗಿಸುವಂತೆ ಡಿಸಿ ಅಕ್ರಂ ಪಾಷಾ ಸೂಚನೆ ನೀಡಿದ್ದಾರೆ.

ಮೈಸೂರಿನಲ್ಲಿ ರಜೆ

ಫೆಂಗಲ್ ಚಂಡಮಾರುತದಿಂದ ಜಡಿ ಮಳೆ, ವಿಪರೀತ ಚಳಿ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಎಲ್ಲ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಸೂಚನೆ ಮೇರೆಗೆ ಶಾಲೆಗಳಿಗೆ ರಜೆ ಘೋಷಿಸಿ ಡಿಡಿಪಿಐ ಎಸ್​.ಟಿ.ಜವರೇಗೌಡ ಆದೇಶ ಹೊರಡಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ರಜೆ

ಚಿಕ್ಕಬಳ್ಳಾಪುರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾಹಿತಿ ನೀಡಿದ್ದಾರೆ.

ಬೆಂಗಳೂರು ನಗರದ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ

ಇನ್ನು ನಗರದಲ್ಲಿ ನಾಳೆ ಎಂದಿನಂತೆಯೇ ಶಾಲಾ ಕಾಲೇಜು ಇರಲಿದೆ. ಈ ಬಗ್ಗೆ ಟಿವಿ9ಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್​ ಪ್ರತಿಕ್ರಿಯಿಸಿದ್ದು, ಬೆಂಗಳೂರು ನಗರದ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಇಲ್ಲ. ಮಕ್ಕಳನ್ನು ಎಚ್ಚರಿಕೆಯಿಂದ ಶಾಲೆಗೆ ಕಳುಹಿಸುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Fengal Cyclone: ಕರ್ನಾಟಕಕ್ಕೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: 35 ರಿಂದ 85 ಮಿಮೀ ಮಳೆ ಸಾಧ್ಯತೆ

ಕಳೆದ ನಾಲ್ಕು ದಿನಗಳಿಂದ ಕೋಲಾರದಲ್ಲಿ ಮೋಡ ಕವಿದ ವಾತಾವರಣ ಮತ್ತು ಶೀತಗಾಳಿ ಇದ್ದು, ನಿನ್ನೆ ರಾತ್ರಿಯಿಂದ ಜಿಟಿ ಜಿಟಿ ಮಳೆ ಆಗಿದೆ. ಹೀಗಾಗಿ ಬೆಚ್ಚನೆಯ ಉಡುಪುಗಳಿಗೆ ಜನರು ಮೊರೆ‌ ಹೋಗಿದ್ದಾರೆ. ಜಿಟಿ ಮಳೆಯಿಂದ ದಿನನಿತ್ಯದ ಕೆಲಸಗಳಿಗೆ ಮತ್ತು ರಾಗಿ ಬೆಳೆಗೆ ತೊಂದರೆ ಉಂಟಾಗಿದ್ದು, ರಾಗಿ ತೆನೆ ಮೊಳಕೆ ಹೊಡೆಯುವ ಆತಂಕ ರೈತರದ್ದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:05 pm, Sun, 1 December 24