ಶ್ರೀಲಂಕಾದಿಂದ ತಮಿಳುನಾಡಿಗೆ ಸುಳಿಗಾಳಿ; ಕರ್ನಾಟಕದ ಹಲವೆಡೆ ನಾಳೆ ಮಳೆ ಸಾಧ್ಯತೆ, ಬೆಂಗಳೂರಿನಲ್ಲಿ ಮೂರು ದಿನ ಮಳೆ

ಶ್ರೀಲಂಕಾದಿಂದ ತಮಿಳುನಾಡಿನ ಉತ್ತರ ಕರಾವಳಿಗೆ ಸುಳಿಗಾಳಿ ಬೀಸಿರುವುದರಿಂದ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಇದರ ಪರಿಣಾಮ ನೆರೆಯ ರಾಜ್ಯ ಕರ್ನಾಟಕದ ಮೇಲೂ ಬಿದ್ದಿದ್ದು, ಇಂದು ಹಲವೆಡೆ ಮಳೆಯಾಗಿದೆ. ನಾಳೆಯೂ ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗಲಿದ್ದು, ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.

ಶ್ರೀಲಂಕಾದಿಂದ ತಮಿಳುನಾಡಿಗೆ ಸುಳಿಗಾಳಿ; ಕರ್ನಾಟಕದ ಹಲವೆಡೆ ನಾಳೆ ಮಳೆ ಸಾಧ್ಯತೆ, ಬೆಂಗಳೂರಿನಲ್ಲಿ ಮೂರು ದಿನ ಮಳೆ
ಶ್ರೀಲಂಕಾದಿಂದ ತಮಿಳುನಾಡಿಗೆ ಸುಳಿಗಾಳಿ; ಕರ್ನಾಟಕದ ಹಲವೆಡೆ ನಾಳೆ ಮಳೆ ಸಾಧ್ಯತೆ, ಬೆಂಗಳೂರಿನಲ್ಲಿ ಮೂರು ದಿನ ಮಳೆ
Follow us
TV9 Web
| Updated By: Rakesh Nayak Manchi

Updated on: Jan 08, 2024 | 7:01 PM

ಬೆಂಗಳೂರು, ಜ.8: ಶ್ರೀಲಂಕಾದಿಂದ ತಮಿಳುನಾಡಿನ ಉತ್ತರ ಕರಾವಳಿಗೆ ಸುಳಿಗಾಳಿ ಬೀಸಿರುವುದರಿಂದ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ನೆರೆಯ ರಾಜ್ಯ ಕರ್ನಾಟಕದ (Karnataka Rain) ಮೇಲೂ ಇದರ ಪರಿಣಾಮ ಬೀರಿದೆ. ಇಂದು ರಾಜ್ಯಾದ ಕೆಲವೆಡೆ ಮಳೆಯಾಗಿದ್ದು, ನಾಳೆ ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲೂ (Bengaluru Rain) ಮಳೆಯಾಗಲಿದೆ.

ಕೋಲಾರ, ಚಿಕ್ಕಬಳ್ಳಾಪುರ, ವಿಜಯನಗರ, ಮಂಡ್ಯ ಜಿಲ್ಲೆಯಲ್ಲಿ ಇಂದು ಸಾಧಾರಣ ಮಳೆಯಾಗಿದ್ದು, ನಾಳೆಯೂ ಇದು ಮುಂದುವರಿಯುವ ಸಾಧ್ಯತೆ ಇದೆ. ಬೆಂಗಳೂರು ನಗರದ ಸುತ್ತಮುತ್ತ ಮೋಡ ಕವಿದ ವಾತಾವರಣ ಇದ್ದು, ಮುಂದಿನ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಹುಚ್ಚು ಮಳೆ, ಮನೆಯ ಗೋಡೆ ಕುಸಿದು 9 ವರ್ಷದ ಬಾಲಕಿ ಸಾವು, ಶಾಲೆಗಳಿಗೆ ರಜೆ

ಈ ಬಾರೀ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ದಾಖಲಾಗಿದ್ದು, 6.3 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ತಜ್ಞ ಪ್ರಸಾದ್ ಹೇಳಿದ್ದಾರೆ. ಕಳೆದ ಬಾರಿ 6 ಮಿ.ಮೀ ಮಳೆಯಯಾಗಿತ್ತು. ಅರೆಬಿಕ್ ಸಮುದ್ರದಲ್ಲಿ ಸುಳಿಗಾಳಿ ಬೀಸಿದ ಪರಿಣಾಮ ಇಂದು ಮತ್ತೆ ನಾಳೆ ಹಗುರ ಮಳೆಯಾಗಲಿದೆ. ಈ ತಿಂಗಳು ವಾಡಿಕೆಗಿಂತ ಶೇಕಡ 70ರಷ್ಟು ಹೆಚ್ಚು ಮಳೆ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ 7.3 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ ಎಂದು ಪ್ರಸಾದ್ ಹೇಳಿದ್ದಾರೆ.

ನೆಲಮಂಗಲದಲ್ಲಿ ಮೋಡ ಮುಚ್ಚಿದ ವಾತವರಣ

ಸುಳಿಗಾಳಿ ಬೀಸುತ್ತಿರುವ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಮೋಡ ಕವಿದ ವಾತವರಣವಿದೆ. ಶೀತಗಾಳಿ ಜೋತೆ ಆಗಾಗ ತುಂತುರು ಮಳೆಯಾಗುತ್ತಿದ್ದು, 6 ಗಂಟೆಗೆ ಆನ್ ಅಗುತ್ತಿದ್ದ ಹೆದ್ದಾರಿ ಲೈಟ್ 4 ಗಂಟೆಯಿಂದಲೇ ಆನ್ ಆಗಿವೆ. ಮೋಡ ಕವಿದ ಹಿನ್ನೆಲೆ ಲೈಟ್ ಆನ್ ಮಾಡಿಕೊಂಡು ವಾಹನಗಳು ಸಂಚರಿಸುತ್ತಿವೆ. ಸ್ವಲ್ಪ ಎಚ್ಚರ ತಪ್ಪಿದರೂ ಅಪಘಾತವಾಗುವ ಸಾಧ್ಯತೆ ಹಿನ್ನೆಲೆ ನೆಲಮಂಗಲ ಸಂಚಾರಿ ಪೊಲೀಸರು ಅಲರ್ಟ್ ಆಗಿದ್ದಾರೆ.

ವರದಿ: ಶಾಂತಮೂರ್ತಿ ಮತ್ತು ಬಿ ಮೂರ್ತಿ, ಟಿವಿ9 

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ