Cyclone Jawad: ಜವಾದ್ ಚಂಡಮಾರುತದ ಭೀತಿ; ಕರ್ನಾಟಕದ 12 ರೈಲುಗಳ ಸೇವೆ ಸ್ಥಗಿತ
ಜವಾದ್ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಸಂಚರಿಸುವ 12 ರೈಲುಗಳ ಸೇವೆಯನ್ನು ರದ್ದು ಮಾಡುವುದಾಗಿ ನೈಋತ್ಯ ರೈಲ್ವೆ ವಲಯ ಮಾಹಿತಿ ನೀಡಿದೆ.
ಹುಬ್ಬಳ್ಳಿ: ಮುಂದಿನ 48 ಗಂಟೆಗಳಲ್ಲಿ ಭಾರತಕ್ಕೆ ಜವಾದ್ ಚಂಡಮಾರುತ (Jawad Cyclone) ಅಪ್ಪಳಿಸಲಿದ್ದು, ಆಂಧ್ರಪ್ರದೇಶ, ಒಡಿಶಾ ಕರಾವಳಿ (Odisha Coastal) ಭಾಗದಲ್ಲಿ ಕಟ್ಟೆಚ್ಚರ ವಹಿಸುವಂತೆ ಮುನ್ಸೂಚನೆ ನೀಡಲಾಗಿದೆ. ಜವಾದ್ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಸಂಚರಿಸುವ 12 ರೈಲುಗಳ ಸೇವೆಯನ್ನು ರದ್ದು ಮಾಡುವುದಾಗಿ ನೈಋತ್ಯ ರೈಲ್ವೆ ವಲಯ ಮಾಹಿತಿ ನೀಡಿದೆ. ಜವಾದ್ ಚಂಡಮಾರುತದ ಹಿನ್ನೆಲೆಯಲ್ಲಿ ಇಂದಿನಿಂದ ಶನಿವಾರದವರೆಗೆ 12 ರೈಲುಗಳ ಸೇವೆಗಳನ್ನು ರದ್ದುಪಡಿಸಲಾಗಿದೆ.
1. ಶುಕ್ರವಾರ (ಡಿ. 3) ರೈಲು ಸಂಖ್ಯೆ 22883 ಪುರಿ – ಯಶವಂತಪುರ ಗರೀಬ್ ರಥ್ ಎಕ್ಸ್ ಪ್ರೆಸ್. 2. ಶುಕ್ರವಾರ (ಡಿ. 3) ರೈಲು ಸಂಖ್ಯೆ 12245 ಹೌರಾ – ಯಶವಂತಪುರ ದುರೊಂತೋ ಎಕ್ಸ್ ಪ್ರೆಸ್. 3. ಶುಕ್ರವಾರ (ಡಿ. 3) ರೈಲು ಸಂಖ್ಯೆ 22817 ಹೌರಾ – ಮೈಸೂರು ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್. 4. ಶುಕ್ರವಾರ (ಡಿ. 3) ರೈಲು ಸಂಖ್ಯೆ 12863 ಹೌರಾ – ಯಶವಂತಪುರ ಎಕ್ಸ್ ಪ್ರೆಸ್. 5. ಶನಿವಾರ (ಡಿ. 4) ರೈಲು ಸಂಖ್ಯೆ 18463 ಭುವನೇಶ್ವರ – ಕೆಎಸ್ಆರ್ ಬೆಂಗಳೂರು ಪ್ರಶಾಂತಿ ಎಕ್ಸ್ ಪ್ರೆಸ್. 6. ಶುಕ್ರವಾರ (ಡಿ. 3) ರೈಲು ಸಂಖ್ಯೆ 12889 ಟಾಟಾನಗರ – ಯಶವಂತಪುರ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್. 7. ಶನಿವಾರ (ಡಿ. 4) ರೈಲು ಸಂಖ್ಯೆ 18637 ಹಟಿಯಾ – ಬೆಂಗಳೂರು ಕಂಟೋನ್ಮೆಂಟ್ ಎಕ್ಸ್ ಪ್ರೆಸ್. 8. ಇಂದು (ಡಿ. 2) ರೈಲು ಸಂಖ್ಯೆ 12509 ಬೆಂಗಳೂರು ಕಂಟೋನ್ಮೆಂಟ್ – ಗುವಾಹಟಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್. 9: ಶುಕ್ರವಾರ (ಡಿ. 3) ರೈಲು ಸಂಖ್ಯೆ 12246 ಯಶವಂತಪುರ – ಹೌರಾ ದುರಾಂಟೊ ಎಕ್ಸ್ ಪ್ರೆಸ್ ಸೇವೆ. 10: ಶುಕ್ರವಾರ (ಡಿ. 3) ರೈಲು ಸಂಖ್ಯೆ 12246 ಯಶವಂತಪುರ – ಹೌರಾ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್.. 11 : ಶುಕ್ರವಾರ (ಡಿ. 3) ರೈಲು ಸಂಖ್ಯೆ 18048 ವಾಸ್ಕೋ-ಡ-ಗಾಮಾ – ಹೌರಾ ಅಮರಾವತಿ ಎಕ್ಸ್ ಪ್ರೆಸ್ 12. ಶುಕ್ರವಾರ (ಡಿ. 3) ರೈಲು ಸಂಖ್ಯೆ 18464 ಕೆಎಸ್ಆರ್ ಬೆಂಗಳೂರು – ಭುವನೇಶ್ವರ ಪ್ರಶಾಂತಿ ಎಕ್ಸ್ ಪ್ರೆಸ್. ಈ 12 ರೈಲು ಸೇವಗಳನ್ನು ರದ್ದುಗೊಳಿಸಿ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.
ಜವಾದ್ ಚಂಡಮಾರುತ ನಿನ್ನೆಯಿಂದ ಅಬ್ಬರಿಸುತ್ತಿದ್ದು, ಈಗಾಗಲೇ ಕೇರಳ ಹಾಗೂ ತಮಿಳಾನಡು ರಾಜ್ಯದಲ್ಲಿ ಹೈ ಅಲಟ್೯ ಘೋಷಣೆ ಮಾಡಲಾಗಿದೆ.ಕಳೆದ ವಾರ ಸುರಿದ ಭಾರಿ ಮಳೆ ಈಗಾಗಲೇ ರಾಜ್ಯ ಸೇರಿ ಎರಡ್ಮೂರು ರಾಜ್ಯಗಳಲ್ಲಿ ನೂರಾರು ಕೋಟಿ ರೂಪಾಯಿಯಷ್ಟು ಹಾನಿ ಮಾಡಿತ್ತು. ಕೆಲ ಕಡೆ ಜನ ಮನೆ ಮಠಗಳನ್ನ ಕಳೆದುಕೊಂಡು ಬೀದಿಗೆ ಬಂದಿದ್ದರು.ಆ ನೋವು ಮಾಸೋ ಮುನ್ನವೇ ಮತ್ತೊಂದು ಚಂಡ ಮಾರುತ್ತ ರಾಜ್ಯಕ್ಕಪ್ಪಳಿಸಿದೆ. ಅದು ಸಧ್ಯ ಜನ ಜೀವನದ ಜೊತೆಗೆ ರೈಲ್ವೇ ಇಲಾಖೆಯ ಮೇಲೂ ಕರಿನೆರಳು ಬೀರಿದೆ.
ನಿನ್ನೆಯಿಂದ ರಾಜ್ಯದಲ್ಲೂ ವರುಣನ ಅಬ್ಬರ ಜೋರಾಗಿದೆ. ಅಲ್ಲದೆ ಜವಾದ್ ಚಂಡಮಾರುತದ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೇ ಇಲಾಖೆ ಅಂತರಾಜ್ಯ ಸಂರ್ಪಕ ಕಲ್ಪಸೋ ಕೆಲ ರೈಲುಗಖ ಸೇವೆಯನ್ನ ರದ್ದುಗೊಳಿಸಿದೆ. ನೈಋತ್ಯ ರೈಲ್ವೆ ಇಲಾಖೆ ಸುಮಾರು ೧೨ ರೈಲುಗಳ ಸೇವೆಯನ್ನು ತಾತ್ಕಾಲಿಕವಾಗಿ ರದ್ದು ಮಾಡಿ ನೈಋತ್ಯ ರೈಲ್ವೆ ಆದೇಶ ಹೊರಡಿಸಿದೆ.
ಸದ್ಯ ಚಂಡಮಾರುತದಿಂದ ಗುಡ್ಡ ಕುಸಿತ ಹಾಗೂ ರೈಲು ಹಳಿಗಳ ಮೇಲೆ ಮಣ್ಣು ಕುಸಿತವಾಗಿರುವುದರಿಂದ ಸಹಜವಾಗೇ ರೈಲ್ವೆ ಪ್ರಯಾಣಕ್ಕೆ ತೊಂದರೆಯಾಗುತ್ತದೆ. ಹೀಗಾಗೇ ಮುಂಜಾಗ್ರತ ಕ್ರಮವಾಗಿ ನಾಳೆ, ನಾಡಿದ್ದು (ಶುಕ್ರವಾರ, ಶನಿವಾರ) ಕೆಲವು ರೈಲುಗಳ ಸೇವೆಯನ್ನ ರದ್ದುಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆ ಇಲಾಖೆ ಪಿಆರ್ಒ ಅನೀಶ್ ಹೆಗಡೆ ತಿಳಿಸಿದ್ದಾರೆ.
ಜವಾದ್ ಪ್ರಭಾವದಿಂದ ಡಿಸೆಂಬರ್ 4 ಮತ್ತು 5ರಂದು ಆಂಧ್ರ ಮತ್ತು ಒಡಿಶಾದಲ್ಲಿ ಭಾರಿ ಮಳೆಯಾಗಲಿದೆ. ಅದನ್ನು ಹೊರತುಪಡಿಸಿ ಪಶ್ಚಿಮ ಬಂಗಾಳದ ದಕ್ಷಿಣ ಜಿಲ್ಲೆಗಳಾದ ಕೋಲ್ಕತ್ತ, ದಕ್ಷಿಣ ಮತ್ತು ಉತ್ತರ 24 ಪರಗಣ ಜಿಲ್ಲೆಗಳು, ಮಿಡ್ನಾಪುರದ ಪೂರ್ವ ಮತ್ತು ಪಶ್ಚಿಮ ಪ್ರದೇಶಗಳು, ಹೂಗ್ಲಿ, ನಾದಿಯಾ ಮತ್ತು ಝಾರ್ಗ್ರಾಮ್ಗಳಲ್ಲಿ ವಿಪರೀತ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ, ಜವಾದ್ ಚಂಡಮಾರುತದ ಭೀತಿ ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಆವರಿಸಿದೆ. ಜವಾದ್ ಚಂಡಮಾರುತದಿಂದಾಗಿ ಆಂಧ್ರಪ್ರದೇಶ , ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಗಳಲ್ಲಿ ಪ್ರತಿಕೂಲ ಹವಾಮಾನದ ಸಾಧ್ಯತೆಯಿದೆ. ಈ ರಾಜ್ಯಗಳಲ್ಲಿ ಭಾರೀ ಗಾಳಿ ಸಹಿತ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
(ವರದಿ: ದತ್ತಾತ್ರೇಯ ಪಾಟೀಲ್)
ಇದನ್ನೂ ಓದಿ: Karnataka Weather Today: ಇಂದಿನಿಂದ 3 ದಿನ ಕರ್ನಾಟಕದಲ್ಲಿ ವ್ಯಾಪಕ ಮಳೆ; ಆಂಧ್ರ ಪ್ರದೇಶ, ಒಡಿಶಾದಲ್ಲಿ ಚಂಡಮಾರುತದ ಭೀತಿ
Published On - 3:14 pm, Thu, 2 December 21