Karnataka Weather: ಚಂಡಮಾರುತ: ಕರ್ನಾಟಕದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದ ಐದಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

Karnataka Weather: ಚಂಡಮಾರುತ: ಕರ್ನಾಟಕದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
ಮಳೆ
Image Credit source: PTI

Updated on: Feb 23, 2025 | 7:49 AM

ಬೆಂಗಳೂರು, ಫೆಬ್ರವರಿ 23: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ವಿವಿಧ ರಾಜ್ಯಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕರ್ನಾಟಕದ ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಮೈಸೂರಿನಲ್ಲಿ 15.7 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.ಕರಾವಳಿಯ ಕಾರವಾರದಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಗದಗ, ಬೆಂಗಳೂರು, ಮಂಡ್ಯ, ಹಾಸನ ಮತ್ತು ಮೈಸೂರಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಾಗಿದೆ.

ಮತ್ತಷ್ಟು ಓದಿ: Karnataka Weather: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಅಬ್ಬರ, ಕರ್ನಾಟಕದ ಹವಾಮಾನದಲ್ಲಿ ಬದಲಾವಣೆಯಾಗುತ್ತಾ?

ಗರಿಷ್ಠ ತಾಪಮಾನ ಕರಾವಳಿಯಲ್ಲಿ 33-35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಬೀದರ್, ವಿಜಯಪುರ, ಧಾರವಾಡ, ಕೊಪ್ಪಳ, ರಾಯಚೂರು, ಹಾವೇರಿಯಲ್ಲಿ 33-35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಕಲಬುರಗಿ, ಬಾಗಲಕೋಟೆ ಮತ್ತು ಗದಗದಲ್ಲಿ 36-38 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಕನಿಷ್ಠ ತಾಪಮಾನವು ಕರಾವಳಿಯಲ್ಲಿ 25-26 ಡಿಗ್ರಿ ಸೆಲ್ಸಿಯಸ್​ನಷ್ಟಿದೆ, ಬೀದರ್, ಧಾರವಾಡದಲ್ಲಿ 17-19 ಡಿಗ್ರಿ ಸೆಲ್ಸಿಯಸ್, ವಿಜಯಪುರ, ಬೆಳಗಾವಿ, ಗದಗ, ಬಾಗಲಕೋಟೆ, ಚಿಂತಾಮಣಿ, ಹಾವೇರಿ, ಕೊಪ್ಪಳ, ಮಂಡ್ಯ, ಚಿತ್ರದುರ್ಗ, ಹಾಸನ, ಮಡಿಕೇರಿ, ಶಿವಮೊಗ್ಗದಲ್ಲಿ 17-20 ಡಿಗ್ರಿ ಸೆಲ್ಸಿಯಸ್​ನಷ್ಟಿದೆ.

ಬೆಂಗಳೂರಿನಲ್ಲಿ ಆಗಾಗ ಮೋಡಕವಿದ ವಾತಾವರಣವಿರಲಿದೆ, ಎಚ್​ಎಎಲ್​ನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us