AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಚಂಡಮಾರುತ: ಮುಂಗಾರಿಗೂ ಮುನ್ನವೇ ಕರ್ನಾಟಕದಲ್ಲಿ ಮಳೆ ಚುರುಕು, ಬೆಂಗಳೂರಲ್ಲಿ ಇಂದು ಭಾರಿ ಮಳೆ

Cyclone Shakti: ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನ ಸಾಕಷ್ಟು ಕಡೆಗಳಲ್ಲಿ ಇಂದು ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಶಕ್ತಿ ಚಂಡಮಾರುತ: ಮುಂಗಾರಿಗೂ ಮುನ್ನವೇ ಕರ್ನಾಟಕದಲ್ಲಿ ಮಳೆ ಚುರುಕು, ಬೆಂಗಳೂರಲ್ಲಿ  ಇಂದು ಭಾರಿ ಮಳೆ
ಮಳೆ Image Credit source: PTI
ನಯನಾ ರಾಜೀವ್
|

Updated on: May 15, 2025 | 7:26 AM

Share

ಬೆಂಗಳೂರು, ಮೇ 15: ಬಂಗಾಳಕೊಲ್ಲಿಯಲ್ಲಿ ‘ಶಕ್ತಿ ಚಂಡಮಾರುತ’ ರೂಪುಗೊಂಡಿದ್ದು ಮುಂಗಾರು ಆಗಮನಕ್ಕೂ ಮುನ್ನವೇ ಕರ್ನಾಟಕದಲ್ಲಿ ಮಳೆ(Rain) ಚುರುಕು ಪಡೆದಿದೆ. ಸತತ ನಾಲ್ಕನೇ ದಿನ ಕೂಡ ರಾಜ್ಯದ ಬಹುತೇಕ ಕಡೆ ಮಳೆಯಾಗಿದೆ. ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನ ಸಾಕಷ್ಟು ಕಡೆಗಳಲ್ಲಿ ಇಂದು ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಬುಧವಾರ ಸಂಜೆ ಬೆಂಗಳೂರು ಹಾಗೂ ರಾಮನಗರದ ಹಲವೆಡೆ ಮಳೆಯಾಗಿದೆ. ತಡರಾತ್ರಿ ಸುರಿದ ಭಾರಿ ಮಳೆಯಿಂದ ಮಾಗಡಿ ಪಟ್ಟಣದಲ್ಲಿ ಅವಾಂತರ ಸೃಷ್ಟಿಯಾಗಿದೆ. ರಸ್ತೆಗಳು, ಮನೆ ಒಳಗೆ ಮಳೆ ನೀರು ನುಗ್ಗಿದ್ದರಿಂದ ಸ್ಥಳೀಯರು ಪರದಾಡುವಂತಾಯಿತು. ಧಾರವಾಡ, ಗೋಕಾಕ್​ನಲ್ಲಿ ಹೆಚ್ಚು ಮಳೆಯಾಗಿದೆ.

ಇದನ್ನೂ ಓದಿ
Image
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಸಂಜೆ ಭಾರಿ ಮಳೆ ಸಾಧ್ಯತೆ
Image
ಬಿಸಿಲು, ಮಳೆ, ಉರಿ ಸೆಕೆ: ಬೆಂಗಳೂರಿನ ವಾತಾವರಣಕ್ಕೆ ಜನ ಕಂಗಾಲು!
Image
ಬೆಂಗಳೂರು ಸೇರಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ
Image
ಬೆಂಗಳೂರಿನಲ್ಲಿ ಗಾಳಿ ಸಹಿತ ಮಳೆ: ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ಮತ್ತಷ್ಟು ಓದಿ: Karnataka Weather: ಬೆಂಗಳೂರು ಸೇರಿ ಕರ್ನಾಟಕದ 21 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, ಯೆಲ್ಲೋ ಅಲರ್ಟ್​

ಎಲ್ಲೆಲ್ಲಿ ಮಳೆಯಾಗಿದೆ? ಚಿಕ್ಕೋಡಿ, ಹುಕ್ಕೇರಿ, ಧಾರವಾಡ, ಮುರಗೋಡು, ಲೋಕಾಪುರ, ಕುಂದಗೋಳ, ಹಿಡಕಲ್, ಆನವಟ್ಟಿಯಲ್ಲಿ ಮಳೆಯಾಗಿದೆ. ಹಾಗೆಯೇ ಧರ್ಮಸ್ಥಳ, ಉಡುಪಿ, ಬೆಳ್ತಂಗಡಿ, ಕೋಟಾ, ಕುಮಟಾ, ಸುಳ್ಯ, ಯಲ್ಲಾಪುರ, ಹುಬ್ಬಳ್ಳಿ, ಹಿರೇಕೆರೂರು, ಬಿಳಗಿ, ಬೈಲಹೊಂಗಲ, ನಿಪ್ಪಾಣಿ, ಸಂಕೇಶ್ವರ, ನರಗುಂದ, ಮುದ್ದೇಬಿಹಾಳ, ರಬಕವಿ, ರಾಯ್​ಬಾಗ್​, ಮುದಗಲ್, ಅಜ್ಜಂಪುರ, ಹುಣಸೂರು, ಶಿವಮೊಗ್ಗ, ಗುಬ್ಬಿ, ನಾರಾಯಣಪುರ, ಕಕ್ಕೇರಿ, ಸಿಂದಗಿ, ಕೂಡಲಸಂಗಮ, ವಿಜಯಪುರ, ಕಳಸ, ಸೇಡಂ, ಲಿಂಗಸುಗೂರು, ಬಸವನಬಾಗೇವಾಡಿ, ಹುಣಸಗಿ, ಹಾವೇರಿ, ಆಲಮಟ್ಟಿ, ದೊಡ್ಡಬಳ್ಳಾಪುರ, ದಾವಣಗೆರೆ, ಹೊನ್ನಾಳಿ, ಆಗುಂಬೆ, ಭದ್ರಾವತಿ, ಚಿಂತಾಮಣಿ, ಕುಶಾಲನಗರದಲ್ಲಿ ಮಳೆಯಾಗಿದೆ.

ಕಲಬುರಗಿಯಲ್ಲಿ 38.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ. ಎಚ್​ಎಎಲ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಳಗಾವಿ ನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 38.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Follow Us
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ