
ಬೆಂಗಳೂರು, ಮೇ 15: ಬಂಗಾಳಕೊಲ್ಲಿಯಲ್ಲಿ ‘ಶಕ್ತಿ ಚಂಡಮಾರುತ’ ರೂಪುಗೊಂಡಿದ್ದು ಮುಂಗಾರು ಆಗಮನಕ್ಕೂ ಮುನ್ನವೇ ಕರ್ನಾಟಕದಲ್ಲಿ ಮಳೆ(Rain) ಚುರುಕು ಪಡೆದಿದೆ. ಸತತ ನಾಲ್ಕನೇ ದಿನ ಕೂಡ ರಾಜ್ಯದ ಬಹುತೇಕ ಕಡೆ ಮಳೆಯಾಗಿದೆ. ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನ ಸಾಕಷ್ಟು ಕಡೆಗಳಲ್ಲಿ ಇಂದು ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ.
ಬುಧವಾರ ಸಂಜೆ ಬೆಂಗಳೂರು ಹಾಗೂ ರಾಮನಗರದ ಹಲವೆಡೆ ಮಳೆಯಾಗಿದೆ. ತಡರಾತ್ರಿ ಸುರಿದ ಭಾರಿ ಮಳೆಯಿಂದ ಮಾಗಡಿ ಪಟ್ಟಣದಲ್ಲಿ ಅವಾಂತರ ಸೃಷ್ಟಿಯಾಗಿದೆ. ರಸ್ತೆಗಳು, ಮನೆ ಒಳಗೆ ಮಳೆ ನೀರು ನುಗ್ಗಿದ್ದರಿಂದ ಸ್ಥಳೀಯರು ಪರದಾಡುವಂತಾಯಿತು. ಧಾರವಾಡ, ಗೋಕಾಕ್ನಲ್ಲಿ ಹೆಚ್ಚು ಮಳೆಯಾಗಿದೆ.
ಮತ್ತಷ್ಟು ಓದಿ: Karnataka Weather: ಬೆಂಗಳೂರು ಸೇರಿ ಕರ್ನಾಟಕದ 21 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, ಯೆಲ್ಲೋ ಅಲರ್ಟ್
ಎಲ್ಲೆಲ್ಲಿ ಮಳೆಯಾಗಿದೆ?
ಚಿಕ್ಕೋಡಿ, ಹುಕ್ಕೇರಿ, ಧಾರವಾಡ, ಮುರಗೋಡು, ಲೋಕಾಪುರ, ಕುಂದಗೋಳ, ಹಿಡಕಲ್, ಆನವಟ್ಟಿಯಲ್ಲಿ ಮಳೆಯಾಗಿದೆ. ಹಾಗೆಯೇ ಧರ್ಮಸ್ಥಳ, ಉಡುಪಿ, ಬೆಳ್ತಂಗಡಿ, ಕೋಟಾ, ಕುಮಟಾ, ಸುಳ್ಯ, ಯಲ್ಲಾಪುರ, ಹುಬ್ಬಳ್ಳಿ, ಹಿರೇಕೆರೂರು, ಬಿಳಗಿ, ಬೈಲಹೊಂಗಲ, ನಿಪ್ಪಾಣಿ, ಸಂಕೇಶ್ವರ, ನರಗುಂದ, ಮುದ್ದೇಬಿಹಾಳ, ರಬಕವಿ, ರಾಯ್ಬಾಗ್, ಮುದಗಲ್, ಅಜ್ಜಂಪುರ, ಹುಣಸೂರು, ಶಿವಮೊಗ್ಗ, ಗುಬ್ಬಿ, ನಾರಾಯಣಪುರ, ಕಕ್ಕೇರಿ, ಸಿಂದಗಿ, ಕೂಡಲಸಂಗಮ, ವಿಜಯಪುರ, ಕಳಸ, ಸೇಡಂ, ಲಿಂಗಸುಗೂರು, ಬಸವನಬಾಗೇವಾಡಿ, ಹುಣಸಗಿ, ಹಾವೇರಿ, ಆಲಮಟ್ಟಿ, ದೊಡ್ಡಬಳ್ಳಾಪುರ, ದಾವಣಗೆರೆ, ಹೊನ್ನಾಳಿ, ಆಗುಂಬೆ, ಭದ್ರಾವತಿ, ಚಿಂತಾಮಣಿ, ಕುಶಾಲನಗರದಲ್ಲಿ ಮಳೆಯಾಗಿದೆ.
ಕಲಬುರಗಿಯಲ್ಲಿ 38.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ. ಎಚ್ಎಎಲ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿ ನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 38.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.