Cyclone Tauktae in Karnataka: ರಾಜ್ಯದಲ್ಲಿ ತೌಕ್ತೆ ಚಂಡಮಾರುತದ ಅಬ್ಬರ; ನಾಳೆಯೂ ಮುಂದುವರಿಯಲಿದೆ ಮಳೆ

Cyclone Tauktae Effect: ಕರ್ನಾಟಕದಲ್ಲಿ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಮಳೆಯಾಗುತ್ತಿದ್ದರೂ, ಉಡುಪಿ, ಉತ್ತರಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಸೇರಿ ಮಲೆನಾಡು, ಕರಾವಳಿ ಭಾಗದ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ.

Cyclone Tauktae in Karnataka: ರಾಜ್ಯದಲ್ಲಿ ತೌಕ್ತೆ ಚಂಡಮಾರುತದ ಅಬ್ಬರ; ನಾಳೆಯೂ ಮುಂದುವರಿಯಲಿದೆ ಮಳೆ
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on: May 16, 2021 | 9:35 PM

ಬೆಂಗಳೂರು: ತೌಕ್ತೆ ಚಂಡಮಾರುತದ ಪ್ರಭಾವದಿಂದ ಕಳೆದ ಎರಡು ದಿನಗಳಿಂದಲೂ ರಾಜ್ಯದಲ್ಲಿ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಒಂದೇ ಸಮನೆ ಮಳೆ ಸುರಿಯುತ್ತಿದ್ದು, ಗಾಳಿಯೂ ಜೋರಾಗಿದೆ. ಇನ್ನು ನಾಳೆ ಕೂಡ ರಾಜ್ಯಾದ್ಯಂತ ಮಳೆಯ ಪ್ರಭಾವ ಜೋರಾಗಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಕೂಡ ಬೆಳಗ್ಗೆಯಿಂದಲೂ ಒಂದೇ ಸಮ ಜಿಟಿಜಿಟಿ ಮಳೆ ಸುರಿಯುತ್ತಲೇ ಇದೆ. ಕರಾವಳಿ ಭಾಗದಲ್ಲಿ ಇಂದು ಬೆಳಗ್ಗೆಯವರೆಗೂ ರೆಡ್ ಅಲರ್ಟ್​ ಇತ್ತು. ನಾಳೆ ಮೇ 17ರಂದು ಕೂಡ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಸಿಕ್ಕಾಪಟೆ ಮಳೆಯಾಗಲಿದೆ. ಹಾಗೇ ಮೇ 20ರವರೆಗೂ ಅಲ್ಲಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಮಳೆಯಾಗುತ್ತಿದ್ದರೂ, ಉಡುಪಿ, ಉತ್ತರಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಸೇರಿ ಮಲೆನಾಡು, ಕರಾವಳಿ ಭಾಗದ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ. ಇಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಡಿಸಿಗಳಿಗೆ ಕರೆ ಮಾಡಿ ಅಲ್ಲಿನ ಪರಿಸ್ಥಿತಿಯ ಬಗ್ಗೆ ವರದಿ ಪಡೆದಿದ್ದಾರೆ.

ಇದನ್ನೂ ಓದಿ: Cyclone Tauktae: ಗೋವಾದಲ್ಲಿ ತೌಕ್ತೆ ಚಂಡಮಾರುತದ ಅಬ್ಬರಕ್ಕೆ 200ಕ್ಕಿಂತಲೂ ಹೆಚ್ಚು ಮನೆಗಳಿಗೆ ಹಾನಿ, ಇಬ್ಬರು ಸಾವು

ಲಾಕ್​ಡೌನ್ ಮುಂದುವರಿಕೆ ಬಗ್ಗೆ ಒಲವು ವ್ಯಕ್ತಪಡಿಸಿದ ಕೇಂದ್ರ ಸಚಿವ ಸದಾನಂದ ಗೌಡ