AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Yaas: 4 ದಿನ ಮುಂಚೆಯೇ ಕರ್ನಾಟಕಕ್ಕೆ ಮುಂಗಾರು ಪ್ರವೇಶ; ಇದು ಪ್ರಚಂಡ ಮಾರುತ ಯಾಸ್​ ಪರಿಣಾಮ: ಏನಿದರ ಪ್ರಕೋಪ?

Monsoon in Karnataka: ಮುಂಗಾರು ಪ್ರವೇಶಿಸಿದ ಬಳಿಕವಷ್ಟೇ ಅದರ ಮೊದಲ ಹೊಡೆತ ನೋಡಿಕೊಂಡು ಮುಂದೆ ರಾಜ್ಯದಲ್ಲಿ ಮುಂಗಾರು ಯಾವ ಪ್ರಮಾಣದಲ್ಲಿ ಮಳೆ ಸುರಿಸಲಿದೆ ಎಂದು ಲೆಕ್ಕಾಚಾರ ಹಾಕಬಹುದು. ಅಲ್ಲಿಯವರೆಗೂ ನಿಖರವಾಗಿ ಏನೂ ಹೇಳಲಾಗದು. ವಾಡಿಕೆಯಷ್ಟು ಅಥವಾ ಅದಕ್ಕಿಂತ ಸ್ವಲ್ಪ ಹೆಚ್ಚಾಗಿಯೇ ಈ ಬಾರಿ ಮುಂಗಾರು ಮಳೆಯಾಗಲಿದೆ ಎಂದು ತಜ್ಞರು ಹೇಳಿದ್ದಾರೆ.

Cyclone Yaas: 4 ದಿನ ಮುಂಚೆಯೇ ಕರ್ನಾಟಕಕ್ಕೆ ಮುಂಗಾರು ಪ್ರವೇಶ; ಇದು ಪ್ರಚಂಡ ಮಾರುತ ಯಾಸ್​ ಪರಿಣಾಮ: ಏನಿದರ ಪ್ರಕೋಪ?
ನಾಲ್ಕು ದಿನ ಮುಂಚೆಯೇ ಕರ್ನಾಟಕಕ್ಕೆ ಮುಂಗಾರು ಪ್ರವೇಶ; ಇದು ಪ್ರಚಂಡ ಮಾರುತ ಯಾಸ್​ ಪರಿಣಾಮ: ಏನಿದರ ಪ್ರಕೋಪ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 24, 2021 | 10:47 AM

Share

ಪ್ರತಿ ವರ್ಷದಂತೆ ಕೇರಳದ ಕಡೆಯಿಂದ ನೈಋತ್ಯ ಮುಂಗಾರು ಮಳೆ ಜೂನ್​ 1 ಮೊದಲ ವಾರದಲ್ಲಿ ಕರ್ನಾಟಕ ಪ್ರವೇಶಿಸಲಿದೆ ಎಂದು ಈ ಮುಂಚೆ ಅಂದಾಜಿಸಲಾಗಿತ್ತು. ಆದರೆ ಈ ಮಧ್ಯೆ ತೌತೆ ಮತ್ತು ತದನಂತರ ಯಾಸ್​ ಚಂಡಮಾರುತಗಳ ದಾಳಿಯ ಪರಿಣಾಮ ನಾಲ್ಕು ದಿನ ಮುಂಚೆಯೇ, ಮೇ ತಿಂಗಳಾಂತ್ಯಕ್ಕೆ ಕರ್ನಾಟಕದಲ್ಲಿ ಮುಂಗಾರು ಪ್ರವೇಶ ಪಡೆಯಲಿದೆ ಎಂದು ಹವಾಮಾನ ಇಲಾಖೆ ಮೂಲಗಳು ಈಗ ಹೇಳುತ್ತಿವೆ.

ಕೇರಳದಲ್ಲಿ ಜೂನ್​ 1ಕ್ಕೆ ನೈಋತ್ಯ ಮುಂಗಾರು ಪ್ರವೇಶ ಪಡೆದರೆ ಜೂನ್​ 3-4ರಂದು ಕರ್ನಾಟಕದಲ್ಲಿ ಮುಂಗಾರು ಮಳೆ ಸುರಿಯಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರ (Karnataka State Natural Disaster Monitoring Centre -KSNDMC) ಹೇಳಿದೆ. ಇದೀಗ ಯಾಸ್​ ಚಂಡ ಮಾರುತದಿಂದಾಗಿ ಮೇ 31ಕ್ಕೆ ಕರ್ನಾಟಕದಲ್ಲಿ ಮುಂಗಾರು ಮಳೆಯಾಗಲಿದೆ ಎನ್ನಲಾಗಿದೆ.

KSNDMC ಕೇಂದ್ರದ ಕಿರಿಯ ವಿಜ್ಞಾನಿ ಎಸ್​ ಎಸ್​ ಎಂ ಗವಾಸ್ಕರ್​ ಅವರು ವಿಶ್ಲೇಷಿಸುವಂತೆ ಮುಂಗಾರು ಪ್ರವೇಶಿಸಿದ ಬಳಿಕವಷ್ಟೇ ಅದರ ಮೊದಲ ಹೊಡೆತ ನೋಡಿಕೊಂಡು ಮುಂದೆ ರಾಜ್ಯದಲ್ಲಿ ಮುಂಗಾರು ಯಾವ ಪ್ರಮಾಣದಲ್ಲಿ ಮಳೆ ಸುರಿಸಲಿದೆ ಎಂದು ಲೆಕ್ಕಾಚಾರ ಹಾಕಬಹುದು. ಅಲ್ಲಿಯವರೆಗೂ ನಿಖರವಾಗಿ ಏನೂ ಹೇಳಲಾಗದು. ಸಾಮಾನ್ಯವಾಗಿ ನೈಋತ್ಯ ಮುಂಗಾರು ಜೂನ್ ತಿಂಗಳಿಂದ ಸೆಪ್ಟೆಂಬರ್​ ವರೆಗೂ ಮಳೆ ಸುರಿಸಲಿದೆ. ವಾಡಿಕೆಯಷ್ಟು ಅಥವಾ ಅದಕ್ಕಿಂತ ಸ್ವಲ್ಪ ಹೆಚ್ಚಾಗಿಯೇ ಈ ಬಾರಿ ಮುಂಗಾರು ಮಳೆಯಾಗಲಿದೆ ಎಂದು ತಜ್ಞರು ಹೇಳಿದ್ದಾರೆ.

ಸಾಮಾನ್ಯವಾಗಿ ಮುಂಗಾರು ಕಾಲದಲ್ಲಿ ಗುಡುಗು, ಸಿಡಿಲಿನ ಆರ್ಭಟದ ಮಳೆಯಿರುವುದಿಲ್ಲ. ಆದರೆ ಈಗ ತೌತೆ ಮತ್ತು ತದನಂತರ ಯಾಸ್​ ಚಂಡಮಾರುತಗಳ ಹಾವಳಿಯಿಂದ ಅಬ್ಬರದ ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್​ ಪಾಟೀಲ್​ (Director of Indian Meteorological Department) ತಿಳಿಸಿದ್ದಾರೆ.

(Cyclone Yaas may effect Southwest monsoon in Karnataka by may 31 four days earlier says Karnataka State Natural Disaster Monitoring Centre)

Cyclone Yaas: ಯಸ್ ಬಂದೇ ಬಿಡ್ತು ಯಾಸ್ ಚಂಡಮಾರುತ! ಏನಿದರ ಏರಿಳಿತಗಳು? ಯಾವಾಗ ಎಲ್ಲಿ ಸೈಕ್ಲೋನ್​ ಮಳೆ ಸುರಿಯಲಿದೆ?

Published On - 10:45 am, Mon, 24 May 21

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ