AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯಮಿ ಕಿರಣ್​ ಮಜುಂದಾರ್ ಶಾ ​ ಪೋಸ್ಟ್​ಗೆ ಡಿಸಿಎಂ ಡಿ.ಕೆ. ಶಿವಕುಮಾರ್​ ತಿರುಗೇಟು

ಬೆಂಗಳೂರಲ್ಲಿ ರಸ್ತೆ ಗುಂಡಿ ಮತ್ತು ಕಸದ ಸಮಸ್ಯೆ ಬಗ್ಗೆ ಉದ್ಯಮಿ ಕಿರಣ್​ ಮಜುಂದಾರ್ ಶಾ ಮಾಡಿದ್ದ ಪೋಸ್ಟ್​ಗೆ, ರಸ್ತೆ ದುರಸ್ತಿ ಹಾಗೂ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಡಿಸಿಎಂ ಡಿಕೆಶಿ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಕ್ಕೆ ಸಾಕಷ್ಟು ಸವಾಲುಗಳಿದ್ದು, ಈಗಾಗಲೇ ಅದರತ್ತ ನಾವು ಗಮನಹರಿಸಿದ್ದೇವೆ ಎಂದೂ ಅವರು ತಿಳಿಸಿದ್ದಾರೆ.

ಉದ್ಯಮಿ ಕಿರಣ್​ ಮಜುಂದಾರ್ ಶಾ ​ ಪೋಸ್ಟ್​ಗೆ ಡಿಸಿಎಂ ಡಿ.ಕೆ. ಶಿವಕುಮಾರ್​ ತಿರುಗೇಟು
ಡಿಸಿಎಂ ಡಿಕೆಶಿ ತಿರುಗೇಟು
ಪ್ರಸನ್ನ ಹೆಗಡೆ
|

Updated on: Oct 14, 2025 | 5:57 PM

Share

ಬೆಂಗಳೂರು, ಅಕ್ಟೋಬರ್ 14: ಬೆಂಗಳೂರಲ್ಲಿ ರಸ್ತೆ ಗುಂಡಿ, ಕಸದ ಸಮಸ್ಯೆ ಬಗ್ಗೆ ಉದ್ಯಮಿ ಕಿರಣ್​ ಮಜುಂದಾರ್ ಶಾ ಮಾಡಿದ್ದ ​ ಪೋಸ್ಟ್​ ವಿಚಾರಕ್ಕೆ ‘ಎಕ್ಸ್’​ ಖಾತೆ ಮೂಲಕವೇ ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಕ್ಕೆ ಸಾಕಷ್ಟು ಸವಾಲುಗಳಿದ್ದು, ಈಗಾಗಲೇ ಅದರತ್ತ ನಾವು ಗಮನಹರಿಸಿದ್ದೇವೆ. ರಸ್ತೆ ದುರಸ್ತಿಗೆ ಈಗಾಗಲೇ 1,100 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದೇವೆ. ಬೆಂಗಳೂರು ನಗರದಲ್ಲಿ 10 ಸಾವಿರ ರಸ್ತೆ ಗುಂಡಿಗಳನ್ನು ಗುರುತಿಸಿದ್ದು, ಆ ಪೈಕಿ ಅದರಲ್ಲಿ 5 ಸಾವಿರ ಗುಂಡಿಗಳನ್ನು ಮುಚ್ಚಿದ್ದೇವೆ. ಮಹತ್ವದ ಯೋಜನೆಯ ಕೆಲಸ ಕಾರ್ಯಗಳು ಮುಂದುವರಿದಿದ್ದು, ಬೆಂಗಳೂರು ಪೂರ್ವ ಪಾಲಿಕೆಯಲ್ಲಿ ಸಾಕಷ್ಟು ಕೆಲಸಗಳು ಆಗುತ್ತಿವೆ. ಈ ಭಾಗದ ಐಟಿ-ಬಿಟಿ ಕಂಪನಿಗಳಿಗೆ ಇದರಿಂದ ಸಹಾಯ ಆಗ್ತಿದೆ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ.

ಡಿಸಿಎಂ ಡಿಕೆಶಿ ತಿರುಗೇಟು

ಕಿರಣ್​ ಮಜುಂದಾರ್​ ಶಾ ಪೋಸ್ಟ್​ನಲ್ಲಿ ಏನಿತ್ತು?

ಬಯೋಕಾನ್​ ಪಾರ್ಕ್​ಗೆ ಚೀನಾದಿಂದ ಬಂದಿದ್ದ ಉದ್ಯಮಿಯೊಬ್ಬರು ತಮಗೆ ಕೇಳಿದ್ದ ಪ್ರಶ್ನೆ ಬಗ್ಗೆ ಕಿರಣ್​ ಮಜುಂದಾರ್​ ಶಾ ಪೋಸ್ಟ್​ನಲ್ಲಿ ಉಲ್ಲೇಖಿಸಿದ್ದರು. ಯಾಕೆ ಬೆಂಗಳೂರು ನಗರದ ರಸ್ತೆಗಳು ಹಾಳಾಗಿವೆ? ಕಂಡ‌ ಕಂಡಲ್ಲಿ‌ ಕಸದ ರಾಶಿ ಯಾಕಿದೆ? ಇಲ್ಲಿನ ಸರ್ಕಾರ ಹೂಡಿಕೆದಾರರಿಗೆ ಬೆಂಬಲ ನೀಡುತ್ತಿಲ್ಲವೇ ಎಂದು ನನ್ನನ್ನು ಚೀನಾ ಉದ್ಯಮಿ ಪ್ರಶ್ನಿಸಿದ್ದಾಗಿ ಅವರು ಹೇಳಿಕೊಂಡಿದ್ದರು. ಅಲ್ಲದೆ ಈ ಪೋಸ್ಟ್​ನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್​ ಮತ್ತು ಸಚಿವ ಪ್ರಿಯಾಂಕ್ ಖರ್ಗೆಗೆ ಟ್ಯಾಗ್ ಕೂಡ ಮಾಡಿದ್ದರು.

ಕಿರಣ್ ಮಜುಂದಾರ್ ಅವರ ಈ ಪೋಸ್ಟ್​ ವಿಚಾರವಾಗಿ ಐಟಿ ಬಿಟಿ ಸಚಿವ ಪ್ರಿಯಾಂಕ್​ ಖರ್ಗೆ ಈಗಾಗಲೇ ಪ್ರತಿಕ್ರಿಯಿಸಿದ್ದು, ಬೆಂಗಳೂರಿಗೆ ಉದ್ಯಮಿಗಳದ್ದು ಅವರದ್ದೇ ಆದ ಕೊಡುಗೆ ಇದೆ. ಕಸ ಹಾಕೋರು ಯಾರು? ಮೇಲಿಂದ ಬಂದು ಬೀಳುತ್ತಾ? ಹೀಗಾಗಿ ನಾಗರಿಕರು ತಮ್ಮ ಜವಾಬ್ದಾರಿ ಅರಿತುಕೊಂಡು ಸಹಾಕಾರ ನೀಡಬೇಕು ಎಂದಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ
ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ